ತಮಿಳುನಾಡು: ಕಾಡನ್ನು ಬಿಟ್ಟ ಗಜಪಡೆ ನಾಡಿಗೆ ಲಗ್ಗೆ ಇಟ್ಟಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉಡೆದುರ್ಗಂ ಬಳಿ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಿಗೆ ಅರಣ್ಯ ಅಧಿಕಾರಿಗಳಿಂದ ಎಚ್ಚರಿಕೆ ನೀಡಿದ್ದಾರೆ. https://ainlivenews.com/naxals-sound-again-in-chikmagalur-coombing-operation-intensified/ ಪ್ರತಿ ವರ್ಷವೂ ಅಕ್ಟೋಬರ್ ತಿಂಗಳಲ್ಲಿ ಕಾಡಾನೆಗಳು ಬರುವುದು ಸಾಮಾನ್ಯವಾಗಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಡೆಂಕಣಿಕೊಟೆ, ಶಾನಮಾವು, ಜವಳಗೆರೆ ಕೃಷ್ಣಗಿರಿ ಅರಣ್ಯ ಪ್ರದೇಶದ ಮೂಲಕ ಕಾಡಾನೆಗಳು ವಲಸೆ ಬರುತ್ತವೆ. ಕಳೆದ 15 ದಿನಗಳಿಂದಲೂ ಉಡೆದುರ್ಗ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಕರ್ನಾಟಕದಿಂದ ವಲಸೆ ಬಂದಿರುವ ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಆಹಾರ ಅರಸಿ ಬರುವ ಆನೆಗಳು ಅರಣ್ಯದ ಸಮೀಪದಲ್ಲಿರುವ ಕೃಷಿ ಜಮೀನುಗಳಿಗೆ ನುಗ್ಗಿ ರಾಗಿ,ಟಮ್ಯಾಟೋ, ಬೀನ್ಸ್‌ನಂತಹ ಕೃಷಿ ಬೆಳೆಗಳನ್ನು ನಾಶಗೊಳಿಸಿವೆ.
Author: AIN Author
ಮೈಸೂರು: ನನ್ನ ಹೇಳಿಕೆಯಿಂದ ಯಾರಿಗಾದರೂ ಬೇಸರವಾಗಿದ್ರೆ ಕ್ಷಮೆಯಾಚಿಸುತ್ತೇನೆ ಎಂದು ಮೈಸೂರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಖಂಡರಿಗೆ ನೋವಾಗಿದ್ದರೇ ಕ್ಷಮೆ ಕೇಳುತ್ತೇನೆ. ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನ ಕರಿಯಣ್ಣ ಅಂತಿದ್ದೆ. ನನ್ನನ್ನ ಕುಳ್ಳ ಅಂತಿದ್ದರು. ಈ ಹೇಳಿಕೆಯಿಂದ ಉಪಚುನಾವಣೆಯಲ್ಲಿ ಯಾವುದೇ ಎಫೆಕ್ಟ್ ಆಗಲ್ಲ ಹೇಳಿದರು. https://ainlivenews.com/do-you-know-how-much-return-you-will-get-if-you-invest-%e2%82%b9-1000-%e2%82%b9-2000-or-%e2%82%b9-5000/ ದೇವೇಗೌಡರ ಕುಟುಂಬ ಕೊಂಡುಕೊಳ್ಳುತ್ತೇನೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರಾದರೂ ದೇವೇಗೌಡರ ಕುಟುಂಬ ಕೊಂದುಕೊಳ್ಳಲು ಸಾಧ್ಯವಾ? ನನಗೆ ದೇವೇಗೌಡರ ಮೇಲೆ ಬಹಳ ಗೌರವವಿದೆ. ಈ ಹಿಂದೆ ಚುನಾವಣೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಮುಸ್ಲಿಂ ಮತಗಳು ಬೇಡ ಎಂದಿದ್ದರು. ಈಗ ದುಡ್ಡು ಕೊಟ್ಟು ಖರೀದಿಸಲು ಮುಂದಾಗಿದ್ದಾರೆ. ಅದನ್ನು ಉಲ್ಲೇಖಸಿ ನಾನು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು : ಬೆಂಗಳೂರಿನ ಬದುಕು ಬಲು ದುಬಾರಿ,, ಇಲ್ಲಿ ಜೀವನ ನಡೆಸೋದ್ ಹೇಗ್ ಸ್ವಾಮಿ ಅನ್ನೋದೇ ಎಲ್ಲರ ಪ್ರಶ್ನೆ.. ಊಟ, ಬಟ್ಟೆ, ಹಣ್ಣು ತರಕಾರಿ, ದಿನಸಿ, ಪೆಟ್ರೋಲ್, ಡೀಸೇಲ್ ಹೀಗೆ ಎಲ್ಲವೂ ತುಟ್ಟಿಯಾಗಿದೆ. ಅಂಥದ್ದರಲ್ಲಿ ಇದರ ಮಧ್ಯೆಯೇ ನಗರವಾಸಿಗಳ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ಹೌದು, ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವವರಿಗೆ ಸೆಸ್ ವಿಧಿಸಲು ಮುಂದಾಗಿದೆ. ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ಸೆಸ್ ವಿಧಿಸಲು ಚಿಂತನೆ ನಡೆಸಿದೆ. https://ainlivenews.com/zameer-racial-abuse-against-hdk-jds-demands-for-apologizes/ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಅಪಾರ್ಟಮೆಂಟ್ ಗಳು, ಹೋಟೆಲ್ ಮತ್ತು ಮಾಲ್ ಗಳು ಪ್ರತಿನಿತ್ಯ 100 ಕೆಜಿಗೂ ಅಧಿಕ ತ್ಯಾಜ್ಯವನ್ನು ಉತ್ಪಾದಿಸಿ, ಪಾಲಿಕೆ ಕಾಂಪ್ಯಾಕ್ಟರ್ ಗಳಿಗೆ ಕಳಿಸುತ್ತಿವೆ. ಹೀಗಾಗಿ ಕಸ ಸಂಗ್ರಹ ವ್ಯವಸ್ಥೆಯ ಮೇಲೆ ಹೊರೆಯಾಗುತ್ತಿದ್ದು, ಇದನ್ನು ನಿಯಂತ್ರಿಸಲು ಉದ್ದೇಶಿತ ಸೆಸ್ ಪ್ರಸ್ತಾವನ್ನು ಸರ್ಕಾರದ ಮುಂದಿಟ್ಟಿದ್ದೇವೆ ಎಂದರು. 6 ತಿಂಗಳ ಹಿಂದೆಯೇ ಸಗಟು ತ್ಯಾಜ್ಯ ಉತ್ಪಾದಕರಿಗೆ ನೋಟಿಸ್ ನೀಡಲಾಗಿತ್ತು. ಕಸ…
ಚಿಕ್ಕಮಗಳೂರು: ಕಳೆದ ಕೆಲ ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ದೊರೆತಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಿಬಂದಿದ್ದು, ಕೊಪ್ಪ ತಾಲೂಕಿನ ಮೇಗೂರು ಸಮೀಪದ ಕುಗ್ರಾಮ ಯಡಗುಂದದ ಇಬ್ಬರು ಯುವಕರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಡಾಗ್ ಸ್ಕ್ವಾಡ್ ಜೊತೆ ಎಎನ್ಎಫ್ ಸಿಬ್ಬಂದಿ ಕಾಡಲ್ಲಿ ನಕ್ಸಲ್ ಹೆಜ್ಜೆ ಹುಡುಕುತ್ತಿದ್ದಾರೆ. https://ainlivenews.com/nabard-has-great-job-opportunities-for-sslc-passers-35000-per-month-salary/ ವಶಕ್ಕೆ ಪಡೆಯಲಾದ ಇಬ್ಬರು ಯುವಕರು ಬೆಂಗಳೂರಿಗೆ ಕೇರಳದಿಂದ ಬಂದಿದ್ದ ಹಾರ್ಡ್ ಕೋರ್ ನಕ್ಸಲ್ ನಾಯಕಿ ಮುಂಡಗಾರು ಲತಾಳಿಗೆ ಸಂಬಂಧಪಟ್ಟ ಪತ್ರವನ್ನ ತರಲು ಹೋಗಿದ್ದರು ಎನ್ನಲಾಗಿದೆ. ಇನ್ನೂ ಶೃಂಗೇರಿ, ಕೊಪ್ಪ ಹಾಗೂ ಕಳಸ ತಾಲೂಕಿನಲ್ಲಿ ವ್ಯಾಪಿಸಿಕೊಂಡಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಎಎನ್ಎಫ್ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹಾವೇರಿ: ರಾಜ್ಯದ ಹಲವೆಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ದಾವಣಗೆರೆ, ಧಾರವಾಡ, ಬೆಳಗಾವಿ ಹಾವೇರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಇನ್ನೂ ಹಾವೇರಿಯಲ್ಲಿ ಕೂಡ ಭ್ರಷ್ಟರ ನಿವಾಸಗಳಿಂದ ಹಣ, ಚಿನ್ನ, ದಾಖಲೆಗಳನ್ನು ವಶಪಡಿಸಿ ಪರಿಶೀಲನೆ ನಡೆಸುತ್ತಿದ್ದಾರೆ. https://ainlivenews.com/nabard-has-great-job-opportunities-for-sslc-passers-35000-per-month-salary/ ಇದೇ ವೇಳೆ, ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ಹಾವೇರಿಯ ಬಸವೇಶ್ವರ ನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉಪವಿಭಾಗದ ಎಇ ಕಾಶೀನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು 14 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಬೆಳಗ್ಗೆ ಮನೆಯಲ್ಲಿ ಮಲಗಿದ್ದ ಭಜಂತ್ರಿ, ಲೋಕಾಯುಕ್ತ ಅಧಿಕಾರಿಗಳ ದಾಳಿ ಸುಳಿವು ಸಿಗುತ್ತಿದ್ದಂತೆಯೇ ಸುಮಾರು 9 ಲಕ್ಷ ರೂ. ಹಣದ ಗಂಟನ್ನು ಕಿಟಿಕಿಯಿಂದ ಆಚೆ ಎಸೆದಿದ್ದಾರೆ. ಆದರೆ, ತಕ್ಷಣ ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಅದನ್ನೂ ವಶಪಡಿಸಿಕೊಂಡಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಮಗ ಆರ್ಯನ್ ಅವರು ಈಗ ಅವಳಾಗಿ ಬದಲಾಗಿದ್ದಾರೆ. ಈ ವಿಚಾರ ಸದ್ಯ ಸೋಶಿಯಲ್ ಮಿಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಸಂಜಯ್ ಬಂಗಾರ್ ಅವರ ಹಿರಿಯ ಪುತ್ರ ಆರ್ಯನ್, ಶಸ್ತ್ರಚಿಕಿತ್ಸೆ ಮಾಡಿಕೊಂಡ ನಂತರ ಹುಡುಗಿಯಾಗಿ ರೂಪಾಂತರಗೊಂಡಿದ್ದಾರೆ. ಈ ವಿಷಯವನ್ನು ಖುದ್ದು, ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಈ ಕುರಿತಾದ ಅವರ ಪೋಸ್ಟ್ ಸಾಕಷ್ಟು ವೈರಲ್ ಆಗಿದೆ. ಕಳೆದ ಹತ್ತು ತಿಂಗಳಿನಿಂದ ಹಾರ್ಮೋನ್ ಬದಲಾವಣೆಯ ಚಿಕಿತ್ಸೆಯನ್ನು ಆರ್ಯನ್ ಪಡೆದುಕೊಳ್ಳುತ್ತಿದ್ದರು. ಇದೀಗ ಚಿಕಿತ್ಸೆ ಮುಗಿದಿದ್ದು, ನಾನು ಅನಯಾ ಬಂಗಾರ್ ಆಗಿ ಬದಲಾಗಿದ್ದೇನೆ. ಹಾಗಾಗಿ, ನನ್ನ ಕ್ರಿಕೆಟ್ ಬದುಕನ್ನೂ ತ್ಯಾಗ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ ಸುಮಾರು 11 ತಿಂಗಳ ನಂತರ, ಕ್ರಿಕೆಟಿಗನ ಪುತ್ರ ತನ್ನನ್ನು ಅರ್ಯನ್ ಬದಲಾಗಿ ಅನಾಯಾ ಎಂದು ಗುರುತಿಸಿಕೊಂಡಿದ್ದಾಳೆ. ಮಗಳಾಗಿ ಬದಲಾಗಿರುವ ಅನಯಾ ತಂದೆಯಂತೆ, ಈಗ ಎಡಗೈ ಬ್ಯಾಟರ್ ಆಗಿದ್ದಾರೆ ಮತ್ತು ಸ್ಥಳೀಯ ಕ್ಲಬ್ ಕ್ರಿಕೆಟ್‌ನಲ್ಲಿ ಇಸ್ಲಾಂ ಜಿಮ್ಖಾನಾ ತಂಡದ ಪರ ಆಡುತ್ತಿದ್ದರು. ಇದರ…
ಬೆಂಗಳೂರು: ಚನ್ನಪಟ್ಟಣ ಚುನಾವಣಾ ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಜನಾಂಗೀಯ ನಿಂದನೆ ಮಾಡಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ದಳಪತಿಗಳು ಕೆಂಡವಾಗಿದ್ದಾರೆ. ಜೆಡಿಎಸ್ ಟ್ವೀಟ್ ಮಾಡಿದ್ದು, ಸಚಿವ ಜಮೀರ್ ಅಹ್ಮದ್ ಕ್ಷಮಾಪಣೆ ಜೊತೆಗೆ ರಾಜೀನಾಮೆಗೂ ಆಗ್ರಹಿಸಿದೆ. ಟ್ವೀಟ್ ನಲ್ಲಿ ಏನಿದೆ..? ಜಮೀರ್ ಅಹ್ಮದ್ ಅವರೇ, ಹೆಚ್.ಡಿ ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ. ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಸರ್ವ ಜನಾಗಂದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ನೀವು ಕ್ಷುಲ್ಲಕ ರಾಜಕೀಯಕ್ಕಾಗಿ ದ್ವೇಷ ಹರಡಲು, ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದೀರಿ. ನೆನಪಿರಲಿ, ಇಲ್ಲಿ ನಿಮ್ಮ ಒಡೆದು ಆಳುವ ನೀತಿಗೆ ಜಾಗವಿಲ್ಲ. ಜನಾಂಗೀಯ ನಿಂದನೆ, ವರ್ಣಬೇಧ ಹೇಳಿಕೆಗಳನ್ನು ನೀಡಿ ಅಪಮಾನವೆಸಗಿರುವ ನೀವು ನಾಡಿನ ಜನರಲ್ಲಿ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು…
ಮಂಡ್ಯ: ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ದೇವಸ್ಥಾನದ ಗೇಟ್ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದ ಚನ್ನಕೇಶವ ದೇಗುಲದಲ್ಲಿ ನಡೆದಿದೆ. ಹೆಚ್.ಎಸ್.ಜಿಷ್ಣು (5) ಮೃತ ಮಗುವಾಗಿದ್ದು, ನಿನ್ನೆ ಕಾರ್ತಿಕ ಮಾಸದ ಸೋಮವಾರ ಹಿನ್ನೆಲೆ ಕುಟುಂಬದೊಂದಿಗೆ ಗ್ರಾಮದ ಚನ್ನಕೇಶವ ದೇಗುಲಕ್ಕೆ ಮಗು ತೆರಳಿತ್ತು. https://ainlivenews.com/nabard-has-great-job-opportunities-for-sslc-passers-35000-per-month-salary/ ಈ ವೇಳೆ ದೇಗುಲದ ಗೇಟ್ ಜಿಷ್ಣು ಮೇಲೆ ಬಿದ್ದು ತೀವ್ರ ಗಾಯವಾಗಿದ್ದು, ತಕ್ಷಣ ಪೋಷಕರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಮುಜರಾಯಿ ಇಲಾಖೆಗೆ ಸೇರಿದ್ದ ಚನ್ನಕೇಶವ ದೇಗುಲವಾಗಿದ್ದು, ಗೇಟ್ ಮುರಿದು ಬಹಳ ದಿನಗಳಾದ್ರೂ ದುರಸ್ಥಿ ಮಾಡದೆ ನಿರ್ಲಕ್ಷ್ಯ ಆರೋಪ ಮಾಡಲಾಗಿದ್ದು, ಮುಜರಾಯಿ ಇಲಾಖೆ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಮುಜರಾಯಿ ಇಲಾಖೆ ವಿರುದ್ಧ ಪೋಷಕರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಪಿಸಿದ್ದಾರೆ.
ಬೆಂಗಳೂರು: ರಾಕಿಭಾಯ್ ಅಭಿನಯಿಸುತ್ತಿರುವ ಟಾಕ್ಸಿಕ್ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಟಾಕ್ಸಿಕ್ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮಕ್ಕೆ ಸಂಬಂಧಿಸಿದಂತೆ ಇದೀಗ ಅರಣ್ಯ ಎಫ್ ಐ ಆರ್ ದಾಲಿಸಿದೆ. https://ainlivenews.com/baby-boy-arrival-at-ambarish-house-abhishek-aviva-parents-of-baby-boy/ ಬಹುಕೋಟಿ ವೆಚ್ಚದ ಯಶ್ ಅಭಿನಯಿಸುತ್ತಿರುವ ಟಾಕಿಕ್ಸ್ ಸಿನಿಮಾದ ಶೂಟಿಂಗ್ ನಗರದ ಹೆಚ್ ಎಂಟಿ ಸುಪರ್ಧಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿತ್ತು. ಈ ವೇಳೆ ಸಿನಿಮಾದ ಸೆಟ್ ಗಾಗಿ ಮರಗಳ ಮಾರಣ ಹೋಮ ನಡೆಸಲಾಗಿತ್ತು. ಈ ಸಂಬಂಧ ಸಚಿ್ ಈಶ್ವರ್ ಖಂಡ್ರೆ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಕೃತ್ಯಕ್ಕೆ ಕಾರಣವಾದವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಅರಣ್ಯ ಇಲಾಖೆ ಕೆವಿಎನ್ ಸಂಸ್ಥೆ, ಕೆನರಾ ಬ್ಯಾಂಕ್ ಮ್ಯಾನೇಜರ್, ಹೆಚ್ ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್ ಐ ಆರ್ ದಾಖಲಿಸಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹೊಸೂರ ಗ್ರಾಮದ ಸಮಸ್ತ ಹಿಂದೂ ಸಮಾಜದಿಂದ ಶ್ರೀ ಮಹಾದೇವರ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ಮಾಡುವುದರ ಮುಖಾಂತರ ವಕ್ಫ್ ಬೋರ್ಡ್ ರದ್ದುಪಡಿಸಿ ಮತ್ತು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ವಕ್ಫ್ ಬೋರ್ಡ್ ಹಟಾವೋ ಭಾರತ ದೇಶ ಬಚಾವೋ ಘೋಷಣೆ ಕೂಗುವುದರೊಂದಿಗೆ ಪ್ರತಿಭಟನೆ ನಡೆಸಿತು. ವಕ್ಫ್ ಬೋರ್ಡ್ ಅನ್ನೋದು ಪಾಪಸ್ ಕಳ್ಳಿ ಇದ್ದಂತೆ ನೀವೇನಾದರೂ ನಿಮ್ಮ ಜಮೀನಿನಲ್ಲಿ ಬಿಟ್ಟುಕೊಂಡರೆ ಇಡೀ ಜಮೀನಿನಲ್ಲಿ ಆವರಿಸಿಕೊಳ್ಳುತ್ತದೆ ಹಿಂದೂಗಳೆ ಇನ್ನಾದರೂ ಎಚ್ಚೆತ್ತುಕೊಳ್ಳಿ.ಹಿಂದೂಗಳ ಸ್ಮಶಾನಕ್ಕಾಗಿ ಹೋರಾಟ ನಡೆಯುತ್ತಿರುವುದು ನಮಗೆ ನಾಚಿಕೆಗೇಡಿನ ಸಂಗತಿ ಹಿಂದೆ ಹೇಳಿದ್ರು ಮಹಾತ್ಮ ಗಾಂಧೀಜಿಯವರಿಗೆ ಹಿಂದುಗಳನ್ನು ಭಾರತಕ್ಕೆ ಬಿಡಿ ಬೇರೆ ದೇಶಕ್ಕೆ ಹೋಗೋರು ಹೋಗಲಿ ಎಂದು ಹೇಳಿದರು ಅಂದು ಯಾರೂ ಕೇಳಲಿಲ್ಲ ಇಂದು ನಮ್ಮ ನೆಲಕ್ಕಾಗಿ ನಾವು ಹೋರಾಟ ಮಾಡಬೇಕಾಗುವ ಪರಿಸ್ಥಿತಿ ಬಂದಿದೆ.ತಹಶೀಲ್ದಾರ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ ಪರಮಪೂಜ್ಯ ಶ್ರೀ ಶಿವಶಂಕರ್ ಶಿವಾಚಾರ್ಯ ಮಹಾಸ್ವಾಮಿಗಳು ಒಂದು ವಾರದ ಒಳಗಡೆ ಹೊಸೂರಿನ ಹಿಂದೂ ರುದ್ರ ಭೂಮಿಯ ಉತಾರಿನಲ್ಲಿ ಸೇರ್ಪಡೆ…