ಗ್ಕೆಬರ್ಹಾ: ಟ್ರಿಸ್ಟನ್ ಸ್ಟಬ್ಸ್ ಅಮೋಘ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ದಾಳಿ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಟೀಂ ಇಂಡಿಯಾ ವಿರುದ್ಧ 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 1-1ರಲ್ಲಿ ಸಮಬಲ ಸಾಧಿಸಿದೆ. ರ್ನಿಂಗ್ ಸಿಕ್ಕಿದ್ದೆಲ್ಲಿ? ಟೀಂ ಇಂಡಿಯಾ ಸ್ಪಿನ್ನರ್ ವರುಣ್ ಚಕ್ರವರ್ತಿ 13ನೇ ಓವರ್‌ನಲ್ಲಿ ಬೌಲಿಂಗ್‌ನಲ್ಲಿದ್ದರು. ಮೊದಲ ಎರಡು ಎಸೆತಗಳಲ್ಲಿ ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್ ದೈತ್ಯ ಆಟಗಾರರಿಗೆ ಪೆವಿಲಿಯನ್ ದಾರಿ ತೋರಿದರು. ಇದರಿಂದ ಭಾರತದ ಗೆಲುವು ಸುಲಭ ಎಂದೇ ಭಾವಿಸಲಾಗಿತ್ತು. ಆದ್ರೆ ಕೊನೇ ಮೂರು ಓವರ್‌ಗಳಲ್ಲಿ ಟ್ರಿಸ್ಟನ್ ಸ್ಟಬ್ಸ್ ಹಾಗೂ ಜೆರಾಲ್ಡ್ ಕೋಟ್ಜಿ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನವು ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಯಿತು. https://ainlivenews.com/carrot-crops-flow-of-money-how-to-grow-carrots-here-is-the-information/ ಈ ಜೋಡಿ 17,18,19ನೇ ಓವರ್‌ನಲ್ಲೇ ಕ್ರಮವಾಗಿ 12, 12, 16 ರನ್ ಚಚ್ಚಿದ್ದರ ಪರಿಣಾಮ ಗೆಲುವು ದಕ್ಷಿಣ ಆಫ್ರಿಕಾದ ಪಾಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 126…
Author: AIN Author
ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಮಲ್ಲೇಶ್ವರಂ ಠಾಣಾ ವ್ಯಾಪ್ತಿಯ ಬಿಬಿಎಂಪಿ ಕಚೇರಿ ತೋಟಗಾರಿಕೆ ಅಧೀಕ್ಷಕರ ಕಾರ್ಯಾಲಯದೊಳಗೆ ಕಳ್ಳರು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾರೆ. https://ainlivenews.com/horrible-road-accident-on-airport-road-two-killed/ ಮೊದಲ ಮಹಡಿಯ ಪಶ್ಚಿಮ ಕಾರ್ಯಪಾಲಕ ಅಭಿಯಂತರ ಕಚೇರಿಯ ಹಿಂದಿನ ಕಿಟಕಿ ಸರಳುಗಳನ್ನು ಮುರಿದು ಒಳನುಗ್ಗಲು ಯತ್ನಿಸಿದ್ದು, ಯಾವುದೇ ದಾಖಲಾತಿಗಳನ್ನು ಕಳವು ಮಾಡಿಲ್ಲ. ಆದರೆ ಮೂರು ನಾಲ್ಕು ಕಪಾಟಿನ ಬಾಗಿಲು, ಟೇಬಲ್ ಗಳನ್ನು ಮುರಿದಿದ್ದಾರೆ. ಮಹಡಿಗೆ ಪ್ರವೇಶಿಸುವ ಬಾಗಿಲುಗಳನ್ನು ಕೂಡ ಮುರಿದಿದ್ದಾರೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಬೈಕ್ ಗೆ ಸಿಮೆಂಟ್ ಬಲ್ಕರ್ ಲಾರಿ ಡಿಕ್ಕಿ ಹೊಡೆ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ದೊಡ್ಡಬಳ್ಳಾಪುರದ ಗೊಲ್ಲಹಳ್ಳಿ ಬಳಿ ನಡೆದಿದೆ. ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಮೂಲದವರಾದ ಬಾಬು (35) ಮೃತ ದುರ್ದೈವಿಯಾಗಿದ್ದು, https://ainlivenews.com/carrot-crops-flow-of-money-how-to-grow-carrots-here-is-the-information/ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಬಾಬು ಸಾವನ್ನಪ್ಪಿದ್ದಾರೆ. ಇನ್ನೂ ಗಾಯಾಳನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಾಲಕ ಲಾರಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಾರವಾಡ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಅದರಂತೆ ಧಾರವಾಡದ ಗಾಂಧಿನಗರ ಬಡಾವಣೆಯಲ್ಲಿರುವ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮನೆ ಎದುರಿನಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಲ್ಲೂ ಪರಿಶೀಲನೆ ನಡೆಸಿದ್ದಾರೆ. https://ainlivenews.com/carrot-crops-flow-of-money-how-to-grow-carrots-here-is-the-information/ ಗೋವಿಂದಪ್ಪ ಭಜಂತ್ರಿಗೆ ಸೇರಿದ ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್ಹೌಸ್ ಧಾರವಾಡದ ತೇಜಸ್ವಿನಗರ ಬಡಾವಣೆಯ ಅಳಿಯನ ಮನೆ, ಲಕ್ಕಮನಹಳ್ಳಿ ಬಡಾವಣೆ ಕೆಐಎಡಿಬಿ ಕಚೇರಿ ಮೇಲೂ ದಾಳಿ ಮಾಡಿದ್ದಾರೆ. ಹಾಗೇ ನರಗುಂದದಲ್ಲಿರುವ ಸಹೋದರನ ಮನೆ ಮೇಲೂ ಡಿವೈಎಸ್ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.
ನೆಲಮಂಗಲ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ವಿಚಾರವಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. https://ainlivenews.com/horrible-road-accident-on-airport-road-two-killed/ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ವಿಳಂಬವಾಗುತ್ತಿದ್ದು, ಇದರಿಂದಾಗಿ ಅಪಘಾತಗಳು ಸಂಭವಿಸುತ್ತಿವೆ ಎಂಬ ದೂರುಗಳು ಬಂದಿದ್ದವು. ಹೀಗಾಗಿ ಇಂದು ಕೇಂದ್ರ ಸಚಿವ ವಿ.ಸೋಮಣ್ಣ ತುಮಕೂರು ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಅಷ್ಟಪಥ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಸಂಬಂಧ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಕೇಂದ್ರ ಸಚಿವ ಸೋಮಣ್ಣ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿ ತಾಕೀತು ಮಾಡಿದರು.
ಬೀದರ್: ಬೀದರ್‌ನಲ್ಲಿ ಎರಡು ಕಡೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಪೋಲಿಸರು ಶಾಕ್ ಕೊಟ್ಟಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. https://ainlivenews.com/a-lot-of-money-from-the-tomato-crop-you-can-earn-lakhs-and-lakhs-by-spending-less/ ಇದಕ್ಕೂ ಮೊದಲು ಬೀದರ್ ಡಿಸಿ ಕಚೇರಿಯಲ್ಲಿ ಶಿರಸ್ತೇದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕೆಲವು ತಿಂಗಳ ಹಿಂದೆ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಅದಿಕಾರ ಸ್ವೀಕರಿಸಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ರವೀಂದ್ರಕುಮಾರ ರೊಟ್ಟಿ ಮನೆ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ.
ಬೆಂಗಳೂರು : ಏರ್‌ಪೋರ್ಟ್ ರಸ್ತೆಯ ಮೇಲ್ಸೆತುವೆ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. https://ainlivenews.com/a-boy-who-was-playing-on-the-road-was-hit-by-a-bike-he-died-on-the-spot/ ಯಲಹಂಕ ಮೇಲ್ಸೇತುವೆ ಮೇಲೆ ಇನ್ನೋವಾ ಕಾರಿಗೆ ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಫ್ಲೈಓವರ್ ಬಲಭಾಗದಲ್ಲಿ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದಾಗ, ಅತಿ ವೇಗವಾಗಿ ಬಿಎಂಟಿಸಿ ವೋಲ್ವೊ ಬಸ್ ಬಂದಿದ್ದು ಲಾರಿಗೆ ರಭಸವಾಗಿ ಗುದ್ದಿದೆ. ಬಸ್ ನ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಿಎಂಟಿಸಿ ವೋಲ್ವೋ ಬಸ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಕಾರು, ಸಿಮೆಂಟ್ ಲಾರಿ, ವೋಲ್ವೋ ಬಸ್ʼನ್ನು ಕ್ರೇನ್ ಮೂಲಕ ತೆರವು ಮಾಡಿ ವಶಕ್ಕೆ ಪಡೆದಿದ್ದು, ಸದ್ಯ ಯಲಹಂಕ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲಘಟಗಿ: ಪಟ್ಟಣದ ತಾಲೂಕು ದಂಡಾಧಿಕಾರಿ ಕಾರ್ಯಾಲಯದಲ್ಲಿ ಕೋಟೆ ನಾಡು ಚಿತ್ರದುರ್ಗದ ರಕ್ಷಣೆಗಾಗಿ ಒನಕೆಯನ್ನುಅಸ್ತ್ರವಾಗಿಟ್ಟುಕೊಂಡು ದಿಟ್ಟ ಹೋರಾಟಗಾರ್ತಿ, ಶೌರ್ಯ ಸಾಹಸಕ್ಕೆ ಹೆಸರಾಗಿದ್ದ ಕೆಚ್ಚೆದೆಯ ನಾರಿ ವೀರ ವನತೆ ಓಬವ್ವ ಜಯಂತಿಯನ್ನು ತಾಲೂಕು ದಂಡಾಧಿಕಾರಿ ವೀರೇಶ್ ಮುಳಗುಂದಮಠ ಪುಷ್ಪನಮನ ಸಲ್ಲಿಸುವ ಮುಖಾಂತರ ಆಚರಿಸಿದರು. https://ainlivenews.com/a-lot-of-money-from-the-tomato-crop-you-can-earn-lakhs-and-lakhs-by-spending-less/ ಈ ಸಂದರ್ಭದಲ್ಲಿ ಗ್ರೇಡ್- ತಹಶೀಲ್ದಾರ್ ಬಸವರಾಜ್ ಹೊಂಕಣ್ಣದವರು, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ, ಮಹೇಶ್ ಅಲಗೂರು, ವೈ ಜಿ ಭಗವತಿ, ತಾಲೂಕು ಕ ಸಾ ಪ. ಅಧ್ಯಕ್ಷ ರಮೇಶ್ ಸೋಲಾರಕೊಪ್ಪ, ಅನಿತಾ ನಾಯಕ್, ನಂದಿನಿ ಖಾನಾಪುರ್, ಮಂಜುನಾಥ ದನಿಗೊಂಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು. ವರದಿ: ಮಾರುತಿ ಲಮಾಣಿ
ಕಲಘಟಗಿ: ತುರ್ತು ಅಪಘಾತ ಸಂಭವಿಸಿದಾಗ ಪ್ರತಿಯೊಬ್ಬ ವ್ಯಕ್ತಿಗೂ ರಕ್ತದ ಅವಶ್ಯಕತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಶಿಬಿರದ ಮುಖಾಂತರ ನೀಡಿದ ಎಷ್ಟು ರಕ್ತದಾನಿಗಳ ಸಹಕಾರ ಅಮೂಲ್ಯವಾಗಿದೆ ಎಂದು ಹಿರಿಯ ದಿವಾಣ ನ್ಯಾಯಾಧೀಶರಾದ ರವೀಂದ್ರ ಹೊನ್ನೂಲಿ ತಿಳಿಸಿದರು. ಅವರು ಪಟ್ಟಣದ ನ್ಯಾಯಾಲಯ ಸಭಾಂಗಣದಲ್ಲಿ ವಕೀಲರ ಸಂಘ ಹಾಗೂ ಕಾನೂನು ಸೇವಾ ಸಮಿತಿ ಕಲಘಟಗಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. https://ainlivenews.com/a-lot-of-money-from-the-tomato-crop-you-can-earn-lakhs-and-lakhs-by-spending-less/ ಶಾ ದಾಮಜಿ ಜಾದವಜಿ ಚೇಡಾ ಸ್ಮಾರಕ ಹಾಗೂ ರಾಷ್ಟೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ ಸಂಯೋಗದೊಂದಿಗೆ ಪ್ರತಿಯೊಬ್ಬರು ರಕ್ತ ನೀಡುವ ಮುಖಾಂತರ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಕಿರಿಯ ದಿವಾಣಿ ನ್ಯಾಯಾಧೀಶರಾದ ಗಣೇಶ್ ಎನ್, ವಕೀಲ ಸಂಘದ ಅಧ್ಯಕ್ಷ ಅಣ್ಣಪ್ಪ ಓಲೆಕಾರ್, ದತ್ತಮೂರ್ತಿ ಕುಲಕರ್ಣಿ, ವಿಬಿ ಶಿವನಗೌಡರ್, ರವೀಂದ್ರ ತೋಟಗಂಟಿ. ಕೆ ಬಿ ಗುಡಿಹಾಳ, ಬಿ ವಿ ಪಾಟೀಲ್, ಎಂ ಎಂ. ಚಲವಾದಿ, ಎಂಜಿ ಚೌದರಿ, ಶೋಭಾ ಬಳಿಗೇರ, ಸೀಮಾ ಪಾಟೀಲ್, ಗೀತಾ ಮಟ್ಟಿ, ಚೈತ್ರ ಕೋಟಿ, ನ್ಯಾಯಾಲಯದ…
ಭಾರೀ ನಿರೀಕ್ಷೆ ಹೆಚ್ಚಿಸಿದ್ದ ಅನೀಶ್ ತೇಜೇಶ್ವರ್ ನಟನೆಯ ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕಾಮಿಡಿ ಜೊತೆಗೆ ಎಮೋಷನ್, ಆಕ್ಷನ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. 2 ನಿಮಿಷ 14 ಸೆಕೆಂಡ್ ಇರುವ ಆರಾಮ್ ಅರವಿಂದ್ ಸ್ವಾಮಿ ಟ್ರೇಲರ್ ಫುಲ್ ಫನ್ ಆಗಿ ಕೂಡಿದೆ. ನೋಡೋಕ್ಕೆ ಫುಲ್ ಆರಾಮ್ ಆಗಿ ಇರುವ ಅರವಿಂದ್ ಸ್ವಾಮಿ ಲೈಫ್ ನಲ್ಲಿ ಬರೀ ಟೆನ್ಷನ್ ಗಳೇ ತುಂಬಿವೆ. ಪ್ರೀತಿ, ಮದುವೆ, ದುಡ್ಡ, ಫ್ಯಾಮಿಲಿ ಸುತ್ತ ಕಥೆ ಸಾಗುತ್ತಿದೆ. ಒಂದೇ ಮಾತಿನಲ್ಲಿ ಹೇಳುವುದಾದರೆ ಆರಾಮ್ ಅರವಿಂದ್ ಸ್ವಾಮಿ ಪಕ್ಕ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ.. https://ainlivenews.com/a-lot-of-money-from-the-tomato-crop-you-can-earn-lakhs-and-lakhs-by-spending-less/ ಆರಾಮ್ ಅರವಿಂದ್ ಸ್ವಾಮಿ ಝಲಕ್ ನೋಡ್ತಿದ್ರೆ ಅನೀಶ್ ಗೆ ಬ್ರೇಕ್ ನೀಡುವ ಎಲ್ಲಾ ಲಕ್ಷಣ ಕಾಣ್ತಿದೆ. ಮಿಲನಾ ನಾಗರಾಜ್, ಹೃತಿಕಾ ಶ್ರೀನಿವಾಸ್ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ವೈವಿಬಿ ಶಿವಸಾಗರ್ ಕ್ಯಾಮರಾವರ್ಕ್, ಉಮೇಶ್ ಆರ್.ಬಿ ಸಂಕಲನ ಮಾಡಿದ್ದಾರೆ. ಶ್ರೀಕಾಂತ್…