ಬೆಂಗಳೂರು:- ಸಿಎಂ ಮುಂದೆ ಶರಣಾಗತ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. https://ainlivenews.com/vaikunth-ekadashi-vehicular-traffic-restrictions-on-these-roads-in-bangalore/ ಹೈ ಸೆಕ್ಯೂರಿಟಿ ಬ್ಯಾರಕ್‌ಗೆ ಪುರುಷ ನಕ್ಸಲರು ಹಾಗೂ ಮಹಿಳಾ ಬ್ಯಾರಕ್‌ಗೆ ಮಹಿಳಾ ನಕ್ಸಲರು ಶಿಫ್ಟ್ ಆಗಿದ್ದಾರೆ. ಹೈ ಸೆಕ್ಯೂರಿಟಿ ಫೋರ್ಸ್‌ನಲ್ಲಿ ಪೊಲೀಸರು ಕರೆತಂದರು. ಮೂರು ಕೆಎಸ್‌ಆರ್‌ಪಿ, ಐದಕ್ಕೂ ಹೆಚ್ಚು ವಾಹನಗಳ ಹೈ ಸೆಕ್ಯೂರಿಟಿ ಇತ್ತು. ಬಿಗಿ ಭದ್ರತೆಯೊಂದಿಗೆ ಆರು ಮಂದಿ ಶರಣಾಗತ ನಕ್ಸಲರು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಶರಣಾಗತರಾದ ನಕ್ಸಲರನ್ನು ಗುರುವಾರ ಮಧ್ಯಾಹ್ನ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. 6 ಮಂದಿಗೂ ಜ.30 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ
Author: AIN Author
ಬೆಂಗಳೂರು:- ವೈಕುಂಠ ಏಕಾದಶಿ ಹಿನ್ನೆಲೆ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದ್ದು, ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿದೆ. https://ainlivenews.com/illegal-stay-in-mangalore-bangla-citizen-arrested/ ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ನಸುಕಿನ ಜಾವದಿಂದಲೇ ಭೇಟಿ ನೀಡುತ್ತಿದ್ದಾರೆ. ಇದರಿಂದ, ದೇವಸ್ಥಾನದ ಅಕ್ಕ-ಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಿಷೇಧ ಮಾಡಲಾಗಿದೆ. ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ:- ಕೆ.ಆರ್.ಪುರ ಕಾ ಮತ್ತು ಸು ಪೊಲೀಸ್ ಠಾಣೆ ರಸ್ತೆ ರಾಮಮೂರ್ತಿನಗರ ಮುಖ್ಯರಸ್ತೆಯಿಂದ ಕಲ್ಕೆರೆ ಕಡೆಗೆ ಹೋಗುವ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗ: ಕೆ.ಆರ್.ಪುರ ಗ್ರಾಮದ ಒಳಗೆ ಹೋಗುವ ವಾಹನ ಸವಾರರು ಜಿ.ಆರ್.ಟಿ. ಕ್ರಾಸ್ ಮತ್ತು ಸರ್ಕಾರಿ ಕಾಲೇಜ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ. ಕಲ್ಕೆರೆ ಕಡೆ ಹೋಗುವ ಮತ್ತು ಬರುವ ವಾಹನ ಸವಾರರು ರಾಮಮೂರ್ತಿನಗರ ಹಳೆ ಪೋಸ್ಟ್…
ಮಂಗಳೂರು:- ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಬಂಧಿಸಲಾಗಿದೆ. ನಿವಾಸಿ ಅನರುಲ್ ಶೇಖ್ ಬಂಧಿತ ಆರೋಪಿ. https://ainlivenews.com/vaikuntha-ekadashi-crowds-at-lakshmi-venkateswara-temple-in-nelamangala/ ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ನೆಲಮಂಗಲ: ವೈಕುಂಠ ಏಕಾದಶಿ ಹಿನ್ನೆಲೆ ತಿಮ್ಮಪ್ಪನ ದೇವಾಲಯಗಳಲ್ಲಿ ಜನಸಾಗರ ತುಂಬಿ ತುಳುಕುತ್ತಿದೆ. ವಿವಿಧ ಹೂಗಳಿಂದ ತಿಮ್ಮಪ್ಪ ದೇವಾಲಯ ಅಲಂಕಾರ ಮಾಡಲಾಗಿದೆ. https://ainlivenews.com/surrendered-naxals-have-hidden-weapons-in-a-secret-place-in-the-forest/ ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ತಿರುಪತಿ ತಿಮ್ಮಪ್ಪ ದೇವರ ರೀತಿಯಲ್ಲಿ ಲಕ್ಷ್ಮೀ ವೆಂಕಟೇಶ್ವರ ದೇವರು ಕಾಣಿಸುತ್ತಿದ್ದೈರೆ. ಉತ್ತರದ ವೈಕುಂಠ ದ್ವಾರ ಪ್ರವೇಶ ಸ್ವರ್ಗದ ಬಾಗಿಲ ಪ್ರಾಪ್ತಿ ಹಿನ್ನೆಲೆ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಭಕ್ತ ಸಾಗರ ನೆರೆದಿದೆ. ಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಸಾವಿರಾರು ಭಕ್ತರಿಗೆ ಲಡ್ಡು ಹಾಗೂ ಅನ್ನ ಪ್ರಸಾದ ವಿತರಣೆ ಮಾಡಲಾಗಿದೆ.
ಬೆಂಗಳೂರು:- CM ಸಮ್ಮುಖದಲ್ಲಿ ಶರಣಾಗತರಾದರೂ ಕಾಡಿನ ರಹಸ್ಯ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ನಕ್ಸಲರು ಅಡಗಿಸಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. https://ainlivenews.com/cinematic-stylelvi-knife-pointing-businessman-kidnapping/ ಯಾವೊಬ್ಬ ನಕ್ಸಲರು ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ. ಮುಂದಿನ ವಾರ ಪೊಲೀಸರು ನಕ್ಸಲರ ವಶಕ್ಕೆ ಪಡೆಯಲಿದ್ದು ಬಳಿಕ ಅಡಗಿಸಿಟ್ಟ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ ಕೆಲವರು ಅರಣ್ಯದ ರಹಸ್ಯ ಅಡಗಿಸಿ ಇಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸ್ಥಳಗಳ ಮಾಹಿತಿ ಪೊಲೀಸರಿಗೆ ಇಲ್ಲ. ಹೀಗಾಗಿ ಪೊಲೀಸರು ಬಾಡಿ ವಾರಂಟ್ ಪಡೆದು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ ಬಳಿಕ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ. ಎಕೆ 47, ಮಿಷಿನ್ ಗನ್‌ಗಳನ್ನು ಇವರು ಬಳಸುತ್ತಿದ್ದರು. ಸಿಎಂ ಮುಂದೆ ಶರಣಾದ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಕಾಡಿನಲ್ಲಿಯೇ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರ ಎದುರು ಬುಧವಾರ ರಾತ್ರಿ ಶರಣಾದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಟಿ.ಎನ್. ಜಿಶಾ, ಕೆ.ವಸಂತ್, ಮಾರೆಪ್ಪ ಅರೋಲಿ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ
ಕಾರವಾರ:- ಆಗಂತುಕರು ಸಿನಿಮೀಯ ರೀತಿಯಲ್ಲಿ ಉದ್ಯಮಿಯನ್ನು ಅಪಹರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿ ಜರುಗಿದೆ. https://ainlivenews.com/the-famous-singer-p-who-sang-many-songs-including-olavina-gadama-kodalenu-jayachandran-passed-away/ ದರ್ಗಾವಾಲೆ ಎಂಬಾತ ಅಪಹರಣಕ್ಕೊಳಗಾದ ವ್ಯಕ್ತಿ. ಪಟ್ಟಣ ಮಾದರಿ ಶಾಲೆಯ ಎದುರು ಸ್ಕೂಟಿಯಲ್ಲಿ ಸ್ನೇಹಿತನ ಜೊತೆ ತೆರಳುತ್ತಿದ್ದಾಗ ಬಿಳಿ ಕಾರೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಈತನನ್ನು ಬೀಳಿಸಿದ್ದಾರೆ. ಸ್ಕೂಟಿಯಲ್ಲಿ ಸ್ನೇಹಿತನ ಜೊತೆ ತೆರಳುತ್ತಿದ್ದಾಗ ಬಿಳಿ ಕಾರೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಈತನನ್ನು ಬೀಳಿಸಿದ್ದಾರೆ. ಬಿದ್ದಾಗ ಈತನ ಮೇಲೆ ಹಲ್ಲೆ ಮಾಡಿ ಕಾರಿನೊಳಗೆ ಹಾಕಿಕೊಂಡಿದ್ದು, ಇನ್ಬೊಬ್ಬನಿಗೆ ಚಾಕು ತೋರಿಸಿ ಓಡಿಸಿದ್ದಾರೆ. ನಂತರ ಹಾವೇರಿ ಮಾರ್ಗವಾಗಿ ಟೋಲ್ ದಾಟಿ ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ. ಈತನನ್ನು ಅಪಹರಣ ಮಾಡಲು ಕಾರಣ ತಿಳಿಯಬೇಕಿದ್ದು, ಅಪಹರಣ ಮಾಡಿದವರು ಹಾವೇರಿ ಭಾಗದವರೆಂದು ಶಂಕಿಸಲಾಗಿದೆ. ಪೊಲೀಸರು ಸಹ ವಾಹನದ ಟ್ರಾಕ್ ಮಾಡಿ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಬುಧವಾರ ಶರಣಾದ ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ. ಪೊಲೀಸರು ಚಿಕ್ಕಮಗಳೂರು ಕೋರ್ಟ್ ಮುಂದೆ ನಕ್ಸಲರನ್ನು ಹಾಜರುಪಡಿಸಿದ್ದರು. ಸರ್ಕಾರದ ಪ್ಯಾಕೇಜ್ ಒಪ್ಪಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮುಂದೆ 6 ನಕ್ಸಲರು ಶರಣಾಗಿದ್ದರು https://ainlivenews.com/big-shock-for-bpl-beneficiaries-siddaramaiah-khadak-notice-for-cancellation-of-ineligible-cards/ ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಆ ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಇನ್ನು ಶರಣಾಗತ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ನಿನ್ನೆಯಷ್ಟೇ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಶರಣಾಗತರಾಗಿದ್ದ ಆರು ಮಂದಿ ನಕ್ಸಲೀಯರನ್ನು ಕಾನೂನು ಪ್ರಕ್ರಿಯೆ ಅನ್ವಯ ಗುರುವಾರ ಇಲ್ಲಿನ…
ಬೆಂಗಳೂರು:- ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಆತಂಕ ಹೆಚ್ಚಾಗಿದೆ. ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಒಂದಿಲ್ಲೊಂದು ಸಮಸ್ಯೆಗಳು ಬರುತ್ತಿದೆ. ಕಳೆದ ಎರೆಡು ತಿಂಗಳು ಹಿಂದೆ ಗೃಹಲಕ್ಷ್ಮಿ ಯೋಜನೆಯಲ್ಲಿ 16 ಸಾವಿರ ಜಿಎಸ್ಟಿ ಹಾಗೂ ಐಟಿ ಇದ್ದ ಕಾರ್ಡ್ಗಳನ್ನ ರದ್ದು ಮಾಡಿ ಗೃಹಿಣಿಯರಿಗೆ ಮಹಿಳಾ ಅಭಿವೃದ್ಧಿ ಇಲಾಖೆ ಶಾಕ್ ಕೊಟ್ಟಿತ್ತು. ಇದರ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ ಇದೀಗ ಅನರ್ಹ BPL ಕಾರ್ಡ್ ರದ್ದತಿಗೆ ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರೆ. https://ainlivenews.com/sanju-weds-geetha-2-release-canceled-at-the-last-moment-audience-disappointed-by-film-crew/ ಎಸ್, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ಕೊಟ್ಟಿದ್ದಾರೆ. ನಿನ್ನೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ…
ಬೆಂಗಳೂರು :- ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ಟಿನ್ ಟೌನ್‍ನಲ್ಲಿ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪೇದೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. ಘಟನೆಗೆ ಕೌಟುಂಬಿಕ ಕಲಹ ಎಂದು ತಿಳಿದು ಬಂದಿದೆ. https://ainlivenews.com/bamaidunas-scalp-flowed-from-the-well-for-a-trivial-matter/ ಗೋವಿಂದ.ಕೆ ಆತ್ಮಹತ್ಯೆಗೆ ಶರಣಾದ ಪೇದೆ. ಅವರು ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಬೇಸತ್ತು ನಗರದ ಕ್ವಾಟ್ರಸ್‍ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಡಿಕೇರಿ:- ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ವಿಚಾರಕ್ಕೆ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಇಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ಜರುಗಿದ್ದು, ಬಾಮೈದುನನ ಕತ್ತು ಕತ್ತರಿಸಿ ಬಾವ ಕೊಲೆಗೈದಿರುವ ಘಟನೆ ಜರುಗಿದೆ. https://ainlivenews.com/current-cut-in-this-area-of-bangalore-today-is-this-your-area/ ಕೋಳಿ ಕಾಲು ಸುಡದಿದ್ದಕ್ಕೆ ಬಾಮೈದುನನ ಕತ್ತು ಕತ್ತರಿಸಿ ಬಾವ ಕೊಲೆಗೈದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕದೆಮುಳ್ಳೂರು ತೋರ ಗ್ರಾಮದಲ್ಲಿ ಜರುಗಿದೆ. ಮೃತ ದುರ್ದೈವಿಯನ್ನು ಮಂಜು ಎಂದು ಗುರುತಿಸಲಾಗಿದೆ. ಅಭಿ ಕೊಲೆ ಮಾಡಿದ ಆರೋಪಿ. ಮೃತ ಮಂಜು ತೋರ ಗ್ರಾಮದ ತೋಟದ ಅಚ್ಚಯ್ಯ ಎಂಬವರ ಲೈನ್ ಮನೆಯಲ್ಲಿ ವಾಸವಿದ್ದ. ಮೃತ ಮಂಜು ತಂಗಿ ಕಾವ್ಯಳನ್ನು ಆರೋಪಿ ಅಭಿ ವಿವಾಹವಾಗಿದ್ದ. ಜ.07 ಮಂಗಳವಾರದಂದು ತೋಟದ ಕಾರ್ಮಿಕರಿಗೆ ಮುಂಗಡ ಸಂಬಳವನ್ನು ನೀಡಲಾಗಿತ್ತು. ಅಂದು ಸಂಜೆ ಮಂಜು ಮತ್ತು ಅರೋಪಿ ಅಭಿ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದರು. ತೋಟದ ಮಾಲೀಕರ ನಿರ್ದೇಶನದ ಮೇರೆಗೆ ರಾತ್ರಿ ಕಾಫಿ ಕಣದಲ್ಲಿ ಕಾವಲು ಕಾಯುವಂತೆ ತಿಳಿಸಿದ್ದರು. ಈ ವೇಳೆ ಕಾಫಿ ಕಣದಲ್ಲಿ ಕೋಳಿ ಕಾಲು ಸುಡಲು ಇಬ್ಬರು…