ಬೆಂಗಳೂರು :- ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ಆರೋಪದಡಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainlivenews.com/bakery-snack-lovers-beware-have-you-eaten-the-spicy-mixture-chips-joke-can-be-life-threatening/ ರಘುನಾಥ್ ಬಂಧಿತ ಆರೋಪಿ. ಆರೋಪಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್ ಒಬ್ಬರಿಗೆ ಕರೆ ಮಾಡಿದ್ದ. ಬಳಿಕ ವರ್ಗಾವಣೆ ಮಾಡಿಸಿಕೊಡುವುದಾಗಿ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಇವನ ಮಾತನ್ನು ನಂಬಿದ್ದ ಇಂಜಿನಿಯರ್ 80 ಸಾವಿರ ರೂ. ಹಣ ಕೊಟ್ಟಿದ್ದರು. ಬಳಿಕ ಈತನ ವಂಚನೆ ಬಗ್ಗೆ ತಿಳಿದು ಸಚಿವರ ಆಪ್ತ ಕಾರ್ಯದರ್ಶಿಗಳು ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ
Author: AIN Author
ಬೆಂಗಳೂರು:- ಬೇಕರಿ ತಿಂಡಿ ಪ್ರಿಯರು ಮಿಸ್ ಮಾಡ್ದೆ ಈ ಸುದ್ದಿ ನೋಡಿ. ಖಾರಾ ಮಿಕ್ಚರ್, ಚಿಪ್ಸ್ ಸೇರಿ ಇನ್ನೂ ಇತ್ಯಾದಿ ತಿನ್ನುತ್ತಿದ್ದರೆ ಇಂದೇ ಬಿಟ್ಟುಬಿಡಿ. ಇಲ್ಲಾಂದ್ರೆ ನಿಮ್ಮ ಪ್ರಾಣಕ್ಕೆ ಕಂಟಕ ಆಗಬಹುದು. ಕೇರಳದಿಂದ ಆಮದು ಆಗುವ ಖಾರಾ ಮಿಕ್ಚರ್, ಚಿಪ್ಸ್, ಹಲ್ವಾ, ಮುರುಕು, ರಸ್ಕ್, ಡ್ರೈ ಫ್ರೂಟ್ಸ್ ಸೇರಿದಂತೆ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಸಲಾಗುತ್ತಿದೆ. ಇದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂದು ಇಲಾಖೆ ತಿಳಿಸಿದೆ. https://ainlivenews.com/bengaluru-karnataka-university-students-are-fortunate-to-travel-abroad/ ಕಳೆದ ಮೂರು ತಿಂಗಳುಗಳಲ್ಲಿ ಕೇರಳದಿಂದ ರಾಜ್ಯದ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲಿ ಮಾರಾಟವಾಗುತ್ತಿದ್ದ ಖಾರಾ ಮಿಕ್ಚರ್, ಚಿಪ್ಸ್, ಹಲ್ವಾ, ಮುರುಕು, ರಸ್ಕ್, ಡ್ರೈ ಫೂಟ್ಸ್ಗಳು, ಸಿಹಿತಿಂಡಿಗಳು ಸೇರಿದಂತೆ ಹಲವು ವಿಧದ ಆಹಾರ ಪದಾರ್ಥಗಳ 90 ಮಾದರಿಗಳನ್ನು ಸಂಗ್ರಹಿಸಿ ಇಲಾಖೆ ಪರಿಶೀಲನೆ ನಡೆಸಿದೆ. ಅವುಗಳಲ್ಲಿ 31 ಮಾದರಿಗಳಿಗೆ Alura Red, Carmoisine, Tartrazine, Sunset Yellow ಸೇರಿದಂತೆ ಕೃತಕ ಬಣ್ಣಗಳನ್ನು ಬಳಸಿರುವುದು ವಿಶ್ಲೇಷಣಾ ಫಲಿತಾಂಶದಲ್ಲಿ ಖಚಿವಾಗಿದೆ. ಅಲ್ಲದೇ, ಹಲವಾರು ಆಹಾರ ಪದಾರ್ಥಗಳ ಪೊಟ್ಟಣಗಳ ಮೇಲೆ…
ಬೆಂಗಳೂರು:- ಕರ್ನಾಟಕ ವಿವಿ ವಿದ್ಯಾರ್ಥಿಗಳಿಗೆ ವಿದೇಶಿ ಪ್ರವಾಸ ಭಾಗ್ಯ ಬಂದಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಬ್ರಿಟಿಷ್ ಕೌನ್ಸಿಲ್ನೊಂದಿಗೆ ಮಾಡಿಕೊಂಡಿರುವ ಶೈಕ್ಷಣಿಕ ಒಪ್ಪಂದದ ಹಿನ್ನೆಲೆಯಲ್ಲಿ ರಾಜ್ಯದ ಆರು ವಿಶ್ವವಿದ್ಯಾಲಯಗಳ 30 ವಿದ್ಯಾರ್ಥಿಗಳು ಹಾಗೂ ಆರು ಮಂದಿ ಆಧ್ಯಾಪಕರು ಯುನೈಟೆಡ್ ಕಿಂಗ್ಡಂನ ಈಸ್ಟ್ ಲಂಡನ್ ವಿಶ್ವವಿದ್ಯಾಲಯಕ್ಕೆ ತೆರಳಿದ್ದಾರೆ. https://ainlivenews.com/yoga-teacher-aparan-case-twist-explosive-information-revealed-in-investigation/ ಅಷ್ಟೇ ಅಲ್ಲದೆ, ಕರ್ನಾಟಕದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಕೂಡಾ ಮಾಹಿತಿ ವಿನಿಮಯ ಮಾಡಿಕೊಳ್ಳಲಿದ್ದಾರೆ. ಈ ಪ್ರವಾಸ ಯಶಸ್ವಿಯಾದರೆ ಮುಂದಿನ ವರ್ಷದಿಂದ ರಾಜ್ಯದ ವಿವಿಗಳಿಗೆ ಪ್ರತಿ ವರ್ಷ ವಿದೇಶಿ ಪ್ರವಾಸ ಹಾಗೂ ಕಲಿಕಾ ಚಟುವಟಿ ಖಾತರಿಯಾಗಲಿದೆ. ವಿವಿ ವಿದ್ಯಾರ್ಥಿಗಳ ಭವಿಷ್ಯದ ಕಲಿಕೆಯ ದೃಷ್ಟಿಯಿಂದ ಈ ಅಂತಾರಾಷ್ಟ್ರೀಯ ಪ್ರವಾಸ ಹಾಗೂ ಕಲಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಈಸ್ಟ್ ಲಂಡನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯ ವಿವರಗಳ ಕುರಿತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂಸಿ ಸುಧಾಕರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಆರು ವಿಶ್ವವಿದ್ಯಾಲಯಗಳ 30 ವಿದ್ಯಾರ್ಥಿಗಳು…
ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ಯೋಗ ಶಿಕ್ಷಕಿ ಅಪರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆಯಲ್ಲಿ ಹಲವು ವಿಚಾರ ಬಹಿರಂಗವಾಗಿದೆ. https://ainlivenews.com/onion-prices-rise-again-farmers-are-happy-consumers-are-in-full-shock/ ಶಿಕ್ಷಕಿಯನ್ನು ಅಪಹರಿಸಿ, ಜೀವಂತ ಸಮಾಧಿ ಮಾಡಿದ್ದ ಆರೋಪಿ ಸಂತೋಷನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತಿ ಸಂತೋಷ ಕುಮಾರ್ ಪತ್ನಿ ಬಿಂದು ಹಾಗೂ ಮಕ್ಕಳ ಕಡೆ ತಲೆ ಹಾಕುತ್ತಿರುಲಿಲ್ಲ. ಯೋಗ ಶಿಕ್ಷಕಿಯೊಂದಿಗೆ ಇರುತ್ತಿದ್ದರು. ಇದರಿಂದ ಬೇಸರಗೊಂಡ ಬಿಂದು, ಶಿಕ್ಷಕಿಯ ಕತ್ತಲ್ಲಿ ಇದ್ದ ಮಾಂಗಲ್ಯ ಸರ ಕಿತ್ತು ಹಾಕಲು ಮತ್ತು ಶಿಕ್ಷಕಿ ಕಥೆ ಮುಗಿಸಲು ಸತೀಶರೆಡ್ಡಿಗೆ ನಾಲ್ಕು ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಳು. ಸುಪಾರಿ ಪಡೆದ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯನ್ನು ಮುಗಿಸಲು ಕಳೆದ ಮೂರು ತಿಂಗಳುಗಳಿಂದ ಸ್ಕೇಚ್ ಹಾಕಿದ್ದನು. ಶಿಕ್ಷಕಿಯನ್ನು ಮುಗಿಸಲೆಂದೇ ಸತೀಶ್ ರೆಡ್ಡಿ ಯೋಗ ತರಗತಿಗೆ ಸೇರಿಕೊಂಡಿದ್ದನು. ಮೂರು ತಿಂಗಳುಗಳಲ್ಲಿ ಶಿಕ್ಷಕಿಯ ಜೊತೆ ಸ್ನೇಹ ಬೆಳಸಿ, ವಿಶ್ವಾಸ ಗಳಿಸಿದ್ದನು. ಅಲ್ಲದೇ, ಪಾರ್ಟನರ್ ಶಿಪ್ನಲ್ಲಿ ಜಮೀನು ಖರೀದಿಸೋಣ ಎಂದು ಹೇಳಿದ್ದನು. ನಂತರ, ಅ.23 ರಂದು ಯೋಗ ಶಿಕ್ಷಕಿಯನ್ನು ಅಪಹರಿಸಲು ಪ್ಲಾನ್ ನಿರ್ಧರಿಸಿ, ಸತೀಶ್…
ಬೆಂಗಳೂರು:- ಕರ್ನಾಟಕದಲ್ಲಿ ಈರುಳ್ಳಿ ದರ ಮತ್ತೆ ಏರಿಕೆ ಆಗಿದ್ದು, ರೈತರು ಫುಲ್ ಖುಷ್ ಆದ್ರೆ, ಗ್ರಾಹಕರು ಶಾಕ್ ಆಗಿದ್ದಾರೆ. https://ainlivenews.com/weekend-power-shock-for-bangaloreans-there-will-be-no-electricity-tomorrow-in-these-areas/ ರಾಜ್ಯದಲ್ಲಿ ಮಳೆ ತಗ್ಗಿದೆ. ಆದರೂ ಕಳೆದ ತಿಂಗಳು ಬಂದಂತಹ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರುಪಾಲಾಗಿದ್ದು, ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ದರ ಏರಿಕೆಯಾಗಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗಾ 60 ರಿಂದ 80 ರೂಪಾಯಿ ವರೆಗೆ ಏರಿಕೆಯಾಗಿದೆ. ಕಳೆದ ಮೂರು ತಿಂಗಳಿನಿಂದ ಈರುಳ್ಳಿಯ ಬೆಲೆ ಏರಿಕೆಯಾಗುತ್ತಲೇ ಇದೆ. ಮಳೆ ಇಲ್ಲದಿದ್ದರೂ ಬೆಲೆ 70 ರ ಗಡಿ ದಾಟಿದೆ. ಕಳೆದ ತಿಂಗಳು ಸುರಿದ ಭಾರಿ ಮಳೆಯ ಪರಿಣಾಮ ನಿರೀಕ್ಷೆಯಷ್ಟು ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ. ಬಂದಂತಹ ಅಲ್ಪಸ್ವಲ್ಪ ಈರುಳ್ಳಿಯ ಗುಣಮಟ್ಟವೂ ಚೆನ್ನಾಗಿಲ್ಲ. ಹೀಗಾಗಿ ಸದ್ಯ ಈರುಳ್ಳಿಯನ್ನು ಮಹಾರಾಷ್ಟದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಆದರೆ, ಮಹಾರಾಷ್ಟ್ರದಿಂದಲೂ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಇದು ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಒಂದೆಡೆ ಪೂರೈಕೆ ಕಡಿಮೆಯಾಗಿದ್ದರೆ, ಮತ್ತೊಂದೆಡೆ ಬೇಡಿಕೆಯೂ…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/this-road-in-bangalore-closed-for-1-month-vehicle-riders-do-not-drive-here/ ಭಾನುವಾರ ಬೆಳಗ್ಗೆ ಬೆಳಗ್ಗೆ 10ಯಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ಬಳಿಯ ಇಸ್ರೋದಲ್ಲೂ ಕೂಡ ವಿದ್ಯುತ್ ಪೂರೈಕೆಯಲ್ಲಿ ಸ್ಥಗಿತ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಲ್ಲೆಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ? ರಾಜಧಾನಿ ಬೆಂಗಳೂರಿನ ಯಾವ ಪ್ರದೇಶಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಲಿದೆ ಅಂತ ನೋಡುವುದಾದರೆ, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ – ಪೊಲೀಸ್ ಠಾಣೆ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಾಸ ಉಂಟಾಗಲಿದೆ. ಇಷ್ಟೇ ಅಲ್ಲದೇ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್ ನಲ್ಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡು ಬರಲಿದೆ. ಇನ್ನು,…
ಬೆಂಗಳೂರು:- ಬಿಬಿಎಂಪಿ ಇತ್ತೀಚೆಗೆ ಕಾಮಗಾರಿ ಕೈಗೊಂಡ ಹಿನ್ನೆಲೆ, ಬೆಂಗಳೂರಿನ ಈ ರಸ್ತೆಯಲ್ಲಿ 1 ತಿಂಗಳು ಸಂಚಾರ ಬಂದ್ ಇರಲಿದೆ ಎನ್ನಲಾಗಿದೆ. ಹೀಗಾಗಿ ವಾಹನ ಸವಾರರು ಅಪ್ಪಿತಪ್ಪಿಯೂ ಇಲ್ಲಿ ಸಂಚರಿಸಬೇಡಿ. https://ainlivenews.com/ipl-2025-who-will-captain-mumbai-team-hardik-or-rohit/ ಎಸ್ ರಾಜಧಾನಿ ಬೆಂಗಳೂರಿನ ಶಿವಾಜಿನಗರದ ಈ ರಸ್ತೆಗಳಲ್ಲಿ ಒಂದು ತಿಂಗಳ ಕಾಲ ಸಂಚಾರ ನಿರ್ಬಂಧಿಸಲಾಗಿದೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ ವತಿಯಿಂದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ ಮತ್ತು ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ. ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜೋತಿ ಕೆಫೆ ,ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ. ಬಾಳೆಕುಂದ್ರಿಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಹಾಗೂ ಎಲ್ಲಾ ಮಾದರಿಯ…
ಐಪಿಎಲ್ 2025ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ಐದು ಆಟಗಾರರನ್ನು ಉಳಿಸಿಕೊಂಡಿದೆ. ರಿಟೇನ್ ಪಟ್ಟಿಯನ್ನು ಸಲ್ಲಿಸುವ ಗಡುವು ಮುಕ್ತಾಯವಾಗುತ್ತಿದ್ದಂತೆ ಎಲ್ಲಾ ಫ್ರಾಂಚೈಸಿಗಳು ತಮ್ಮ ಆಟಗಾರರ ಪಟ್ಟಿಯನ್ನ ಬಿಡುಗಡೆ ಮಾಡಿದ್ದವು. ನಿರೀಕ್ಷೆಯಂತೆ ಮುಂಬೈ ಇಂಡಿಯನ್ಸ್ ತನ್ನ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿದೆ. https://ainlivenews.com/ind-vs-sa-team-india-player-who-wrote-century-cdc-world-record/ ಇನ್ನೂ ಮುಂಬರುವ ಸೀಸನ್ ನಲ್ಲಿ ಮುಂಬೈ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಮುಂದುವರಿಯಲಿದ್ದಾರೆ. ಕಳೆದ ಸೀಸನ್ನಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ನೀಡಿರುವುದು. ಐಪಿಎಲ್ 2024 ರಲ್ಲಿ 14 ಪಂದ್ಯಗಳನ್ನಾಡಿದ್ದ ಮುಂಬೈ ಕೇವಲ 4 ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು. ಹೀಗಾಗಿಯೇ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಬದಲಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ಗೆ ನಾಯಕತ್ವ ಒಲಿಯಲಿದೆ ಎನ್ನಲಾಗಿತ್ತು. ಇದರ ಜೊತೆಗೆ ರೋಹಿತ್ ಶರ್ಮಾಗೆ ಮತ್ತೆ ಕ್ಯಾಪ್ಟನ್ಸಿ ನೀಡುವ ಸುದ್ದಿಗಳು ಕೂಡ ಕಾಣಿಸಿಕೊಂಡಿದ್ದವು. ಆದರೀಗ ಮುಂಬೈ ಇಂಡಿಯನ್ಸ್…
ದಕ್ಷಿಣ ಆಫ್ರಿಕಾದ ಡರ್ಬನ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 61 ರನ್ಗಳ ಭರ್ಜರಿ ಜಯ ದಾಖಲಿಸಿದೆ. ತವರಿನಲ್ಲೇ ಹರಿಣ ಪಡೆಯ ಬೌಲರ್ಗಳ ಬೆಂಡೆತ್ತಿದ ಭಾರತೀಯ ಯುವ ಬ್ಯಾಟರ್ಗಳು 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಗೆದ್ದು ಬೀಗಿದ್ದಾರೆ. https://ainlivenews.com/fire-accident-in-sriram-wood-factory-all-the-materials-are-burnt/ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿಶ್ವ ದಾಖಲೆ ಬರೆದಿದ್ದಾರೆ. ದಕ್ಷಿಣ ಆಫ್ರಿಕಾದ ಡರ್ಬನ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 61 ರನ್ಗಳ ಭರ್ಜರಿ ಜಯ ದಾಖಲಿಸಿದೆ. ತವರಿನಲ್ಲೇ ಹರಿಣ ಪಡೆಯ ಬೌಲರ್ಗಳ ಬೆಂಡೆತ್ತಿದ ಭಾರತೀಯ ಯುವ ಬ್ಯಾಟರ್ಗಳು 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಗೆದ್ದು ಬೀಗಿದ್ದಾರೆ. ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ್ದ ಸ್ಯಾಮ್ಸನ್, ದಕ್ಷಿಣ ಆಫ್ರಿಕಾ ವಿರುದ್ಧ ಮತ್ತೊಮ್ಮೆ ಅದೇ ಸಾಧನೆ ಮಾಡಿದರು. ಉತ್ತಮ ಫಾರ್ಮ್ನಲ್ಲಿರುವ ಸ್ಯಾಮ್ಸನ್, ಸ್ಫೋಟಕ ಇನ್ನಿಂಗ್ಸ್ ಆಡಿದ್ರು. ತನ್ನ ಆರಂಭಿಕ ಜೊತೆಗಾರ ಅಭಿಷೇಕ್…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕಾರ್ಖಾನೆ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. https://ainlivenews.com/terrible-accident-near-kamalapur-four-members-of-the-same-family-died-2/#google_vignette ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ. ಆನೇಕಲ್ ನ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದವು. ಎಕರೆಗಟ್ಟಲೆ ಪ್ರದೇಶದಲ್ಲಿ ಕಾರ್ಖಾನೆ ಇದೆ. ಹೆದ್ದಾರಿಗೆ ಹೊಂದಿಕೊಂಡಿರುವ ಹಿನ್ನೆಲೆ ಆತಂಕ ಮೂಡಿಸಿದೆ. ಭಾರೀ ಪ್ರಮಾಣದಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಲಾಯಿತು. ಆಶೀರ್ವಾದ್ ಕಂಪನಿಯವರು ಹತ್ತು ಕಡೆಗಳಲ್ಲಿ ಬೆಂಕಿ ಆರಿಸಲು ಸಹಕರಿಸಿದರು. ಸಿಬ್ಬಂದಿಯು ಹತ್ತು ಪೈಪ್ ಮೂಲಕ ಪಕ್ಕದ ಕಂಪನಿಯ ಬೆಂಕಿ ಆರಿಸುತ್ತಿದ್ದಾರೆ. ಸದ್ಯ ಒಳಗಡೆ ಯಾರೂ ಇಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ಹರ್ಷದ್ ಪಟೇಲ್ ಎಂವವರಿಗೆ ಸೇರಿದ…