ಹಾವೇರಿ: ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. https://ainlivenews.com/what-is-waqf-amendment-act-how-will-the-farmers-suffer-here-is-the-complete-information/ ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ಕಾರಣಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಗುರುವಾರ ಹುಬ್ಬಳ್ಳಿಯಲ್ಲಿ ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೊಲೀಸರು ಹಾಗೂ ಜಿಲ್ಲಾಡಳಿತ ಈಗ ಸ್ಪಷ್ಟನೆ ನೀಡಿದೆ.…
Author: AIN Author
ಶಿವಮೊಗ್ಗ: ಮೆಸ್ಕಾಂ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಡೆದಿದೆ. ನಂದೀಶ್ (38) ಮೃತ ದುರ್ದೈವಿ, https://ainlivenews.com/what-is-waqf-amendment-act-how-will-the-farmers-suffer-here-is-the-complete-information/ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಇನ್ನೂ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಐಪಿಎಲ್ ಮೆಗಾ ಹರಾಜಿನ ಸಿದ್ದತೆಯ ನಡುವೆಯೇ ವನಿತಾ ಪ್ರೀಮಿಯರ್ ಲೀಗ್ ಗೂ ಬಿಸಿಸಿಐ ಸಿದ್ದತೆ ನಡೆಸುತ್ತಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನಲ್ಲಿ ಉಳಿಸಿಕೊಳ್ಳಲು ಬಯಸುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರ್ ಸಿಬಿಯು ಈ ಬಾರಿ ಆರು ಆಟಗಾರರನ್ನು ಬಿಡುಗಡೆ ಮಾಡುತ್ತಿದೆ. https://ainlivenews.com/actor-shahrukh-khans-life-threatened-where-did-the-call-come-from-do-you-know-who-that-person-is/ ಆರ್ಸಿಬಿ ಮಿನಿ ಹರಾಜಿಗೂ ಮುನ್ನ 7 ಆಟಗಾರ್ತಿಯರನ್ನು ತಂಡದಿಂದ ಬಿಡುಗಡೆ ಮಾಡಿದ್ದು, ಉಳಿದಂತೆ 14 ಆಟಗಾರ್ತಿಯರನ್ನು ತನ್ನಲ್ಲೇ ಉಳಿಸಿಕೊಂಡಿದೆ.ಆದರೆ ಐಪಿಎಲ್ನಂತೆ ಡಬ್ಲ್ಯುಪಿಎಲ್ನಲ್ಲಿ ಮೆಗಾ ಹರಾಜು ಇರುವುದಿಲ್ಲ. ಬದಲಿಗೆ ಮಿನಿ ಹರಾಜು ಇರಲಿದೆ. ಹೀಗಾಗಿ ಫ್ರಾಂಚೈಸಿಗಳು ಗರಿಷ್ಠ ಆಟಗಾರ್ತಿಯರನ್ನು ತಮ್ಮಲ್ಲೇ ಉಳಿಸಿಕೊಂಡು, ಕೆಲವೇ ಕೆಲವು ಆಟಗಾರ್ತಿಯರನ್ನು ತಂಡದಿಂದ ಕೈಬಿಟ್ಟಿವೆ. ಬಿಸಿಸಿಐ ನಿಯಮದಂತೆ ಪ್ರತಿ ಫ್ರಾಂಚೈಸಿ 18 ಆಟಗಾರ್ತಿಯರನ್ನು ತಂಡವನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಅದರಲ್ಲಿ 6 ವಿದೇಶಿ ಆಟಗಾರ್ತಿಯರನ್ನು ಕಡ್ಡಾಯವಾಗಿ ಉಳಿಸಿಕೊಳ್ಳಲೇಬೇಕು. ಹೀಗಾಗಿ ಡ್ಯಾನಿ ವ್ಯಾಟ್ ಅವರನ್ನು ಕೆಲವು ದಿನಗಳ ಹಿಂದಷ್ಟೇ ಟ್ರೆಡಿಂಗ್ ಮೂಲಕ ಖರೀದಿಸಿದ್ದ ಆರ್ಸಿಬಿ ಪಾಳದಲ್ಲಿ ವಿದೇಶಿ ಆಟಗಾರ್ತಿಯರ ಸಂಖ್ಯೆ 8…
ನವದೆಹಲಿ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕಡೆಯಿಂದ ನಟ ಸಲ್ಮಾನ್ ಖಾನ್ಗೆ ಇದಾಗಲೇ ಹಲವಾರು ಬಾರಿ ಕೊಲೆ ಬೆದರಿಕೆ ಬಂದದ್ದೂ ಅಲ್ಲದೇ, ಇದೀಗ ಸಲ್ಮಾನ್ ಖಾನ್ ಗಲಾಟೆಯ ಬಳಿಕ ಶಾರುಖ್ ಅವರಿಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ. ಇನ್ನೂ ರಾಯ್‌ಪುರ ಮೂಲದ ವಕೀಲರೊಬ್ಬರ ಫೋನ್‌ನಿಂದ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ವಕೀಲ ಫೈಜಾನ್ ಖಾನ್ ಎಂಬವರ ಫೋನ್‌ನಿಂದ ಶಾರುಖ್ ಖಾನ್ ಅವರಿಗೆ ಬೆದರಿಕೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಕೀಲ ಶಾರುಖ್ ಖಾನ್ ಅವರಿಗೆ ಬೆದರಿಕೆ ಕರೆ ಬರುವ 3 ದಿನಗಳ ಮೊದಲು ತನ್ನ ಫೋನ್ ಕಳ್ಳತನವಾಗಿದೆ. ಈ ಬಗ್ಗೆ ಎಫ್‌ಐಆರ್ ದಾಖಲಿಸಿದ್ದೇನೆ ಎಂದು ಹೇಳಿದ್ದಾರೆ. ಮಂಗಳವಾರ ಬಾಂದ್ರಾ ಪೊಲೀಸ್ ಠಾಣೆಯ ಫೋನ್‌ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿತ್ತು. ಕರೆ ಮಾಡಿದ್ದ ವ್ಯಕ್ತಿ ನಟನಿಂದ 50 ಲಕ್ಷ ರೂ. ಬೇಡಿಕೆಯಿಟ್ಟಿದ್ದ. ಆ ಹಣವನ್ನು ನೀಡದಿದ್ದರೆ ಭಾರೀ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿತ್ತು. https://ainlivenews.com/what-is-waqf-amendment-act-how-will-the-farmers-suffer-here-is-the-complete-information/ ಈ ಬಗ್ಗೆ ಹೆಚ್ಚಿನ ತನಿಖೆಗಾಗಿ ಮುಂಬೈ ಪೊಲೀಸ್…
ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಟಿ20 ಪಂದ್ಯಗಳ ಸರಣಿಯು ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯ ಡರ್ಬನ್‌ನಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದು, ಯಶ್ ದಯಾಳ್, ವೈಶಾಕ್ ವಿಜಯ್ ಕುಮಾರ್ ಮತ್ತು ರಮಣದೀಪ್ ಸಿಂಗ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. https://ainlivenews.com/farmer-suicide-case-due-to-waqf-notice-clarification-from-district-administration/ ಮುಂಬರುವ ಸರಣಿಯಲ್ಲಿ ಈ ಮೂವರು ಆಟಗಾರರು ಅಂತರಾಷ್ಟ್ರೀಯ ಪದಾರ್ಪಣೆ ಮಾಡುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮೊದಲ ಟಿ20 ಪಂದ್ಯಕ್ಕೆ ಸಜ್ಜಾಗಿರುವ ಡರ್ಬನ್ ಪಿಚ್ ಯಾರಿಗೆ ಹೆಚ್ಚು ಸಹಕಾರಿಯಾಗಲಿದೆ ಎಂಬುದನ್ನು ತಿಳಿಯೋಣ. ಮೇಲೆ ಹೇಳಿದಂತೆ ಸರಣಿಯ ಮೊದಲ ಪಂದ್ಯವು ಡರ್ಬನ್‌ನ ಕಿಂಗ್ಸ್‌ಮೀಡ್ ಮೈದಾನದಲ್ಲಿ ನಡೆಯಲಿದೆ. ಇದು ಹೆಚ್ಚು ಸ್ಕೋರಿಂಗ್ ಮೈದಾನವಾಗಿದ್ದು, ಈ ಹಿಂದೆ ನಡೆದ ಪಂದ್ಯಗಳೇ ಇದಕ್ಕೆ ಸಾಕ್ಷಿಯಾಗಿವೆ. ಇದರಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 153 ರನ್ ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 135 ರನ್‌ಗಳಾಗಿವೆ. ಕಿಂಗ್ಸ್‌ಮೀಡ್ ಮೈದಾನದಲ್ಲಿ ಇದುವರೆಗೆ 18 ಅಂತರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಮೊದಲು…
ಹಾವೇರಿ: ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಪ್ರಕರಣ ವದಂತಿಗೆ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ಕೊಟ್ಟಿದೆ. ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆತ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ ಎಂದು ಸ್ಪಷ್ಟಪಡಿಸಿದೆ. ವಕ್ಫ್ ಅಂತಾ ನಮೂದಾದ ಹಿನ್ನೆಲೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿಲ್ಲ. ವಕ್ಫ್ ಎಂದು ನಮೂದಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಕರಣ ದಾಖಲಾಗಿರುವುದಿಲ್ಲ. ಆದರೆ, ರೈತ ಸಾಲಬಾಧೆಗೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. https://ainlivenews.com/what-is-waqf-amendment-act-how-will-the-farmers-suffer-here-is-the-complete-information/ ನಿನ್ನೆ ಹುಬ್ಬಳ್ಳಿಯಲ್ಲಿ ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ಮೃತ ರೈತ ಚೆನ್ನಪ್ಪ ಕುಟುಂಬಸ್ಥರು ಮನವಿ ಮಾಡಿದ್ದರು. ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ, ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ನವದೆಹಲಿ: ದೂರುದಾರರು ಮತ್ತು ಆರೋಪಿಗಳು ರಾಜಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೌದು ರಾಜಸ್ಥಾನದ ಶಿಕ್ಷಕನೊಬ್ಬನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ದಾಖಲಾಗಿತ್ತು. ಬಳಿಕ ಶಿಕ್ಷಕ, ಸಂತ್ರಸ್ಥೆಯ ಕುಟುಂಬದ ಜೊತೆ ರಾಜಿಯಾಗಿದ್ದ. ಇದಾದ ನಂತರ ಶಿಕ್ಷಕನಿಗೆ ರಾಜಸ್ಥಾನ ಹೈಕೋರ್ಟ್ ಪ್ರಕರಣ ರದ್ದುಗೊಳಿಸಿ ರಿಲೀಫ್ ನೀಡಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಶಿಕ್ಷಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ. 2022ರಲ್ಲಿ ರಾಜಸ್ಥಾನದ ಗಂಗಾಪುರದಲ್ಲಿ ಅಪ್ರಾಪ್ತ ದಲಿತ ಬಾಲಕಿಯೊಬ್ಬಳು ಸರ್ಕಾರಿ ಶಾಲೆಯ ಶಿಕ್ಷಕನ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಳು. ಈ ಪ್ರಕರಣದಲ್ಲಿ ಪೋಕ್ಸೊ ಕಾಯಿದೆ ಮತ್ತು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಅಡಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಅಪ್ರಾಪ್ತೆಯ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿತ್ತು. https://ainlivenews.com/what-is-waqf-amendment-act-how-will-the-farmers-suffer-here-is-the-complete-information/ ಆರೋಪಿ ಶಿಕ್ಷಕ ವಿಮಲ್ ಕುಮಾರ್ ಗುಪ್ತಾ ಎಂಬಾತ ಬಾಲಕಿಯ ಕುಟುಂಬದೊಂದಿಗೆ ರಾಜೀ ಮಾಡಿಕೊಂಡು, ಸ್ಟಾಂಪ್ ಪೇಪರ್‌ನಲ್ಲಿ, ತಪ್ಪು ತಿಳುವಳಿಕೆಯಿಂದ ಪ್ರಕರಣ…
ಬೆಂಗಳೂರು:- ಇತ್ತೀಚೆಗೆ ಕರ್ತವ್ಯದಲ್ಲಿದ್ದಾಗಲೇ BMTC ಸಿಬ್ಬಂದಿಗಳ ಸಾವು ಪ್ರಕರಣ ಹೆಚ್ಚಳವಾಗುತ್ತಿದೆ. ಇದಕ್ಕೆ ಸಿಬ್ಬಂದಿಗಳ ಅತಿಯಾದ ಒತ್ತಡವೇ ಎಂದು ಹೇಳಲಾಗುತ್ತಿದೆ. https://ainlivenews.com/farmers-land-government-office-today-a-waqf-eye-is-also-planted-on-the-cemetery/ ನಿನ್ನೆಯಷ್ಟೇ ಬಸ್ ಚಾಲನೆ ವೇಳೆ ಡ್ರೈವರ್ಗೆ ಹಾರ್ಟ್ ಅಟ್ಯಾಕ್ ಆಗಿ ಪ್ರಾಣ ಬಿಟ್ಟಿದ್ದರು. ಇದಕ್ಕೆ ಅಧಿಕಾರಿಗಳ ಕಿರುಕುಳವೇ ಕಾರಣ. ನಿರಂತರವಾಗಿ ಹಗಲು-ರಾತ್ರಿ ಕೆಲಸ ಮಾಡಿಸಿದ್ದಾರೆ. ಇದರಿಂದ ಕಿರಣ್ ಪ್ರಾಣ ಬಿಟ್ಟಿದ್ದಾನೆ ಎಂದು ಸಾರಿಗೆ ನೌಕರರ ಮುಖಂಡರು ಹೊಸ ಬಾಂಬ್ ಸಿಡಿಸಿದ್ದಾರೆ. ಬಿಎಂಟಿಸಿಯಲ್ಲಿ ನೌಕರರ ಕೊರತೆ ಉಂಟಾಗಿದೆಯಂತೆ. ಇದರಿಂದ ಇರುವಂತಹ ನೌಕರರಿಗೆ ಒಟಿ ಕೊಟ್ಟು ಒತ್ತಡಕ್ಕೆ ಸಿಲುಕಿಸುತ್ತಿದ್ದಾರಂತೆ. ನಿನ್ನೆ ಹೃದಯಾಘಾತದಿಂದ ಮೃತಪಟ್ಟ ಕಿರಣ್ಗೆ ನಿರಂತರವಾಗಿ ಮೂರು ದಿನಗಳ ಕಾಲ ಡೇ ಅಂಡ್ ನೈಟ್ ಡ್ಯೂಟಿ ಮಾಡಿಸಿದ್ದಾರೆ. ಮೊನ್ನೆ ರಾತ್ರಿ ಕಿರಣ್ಗೆ ಜ್ವರ ಬಂದಿತ್ತಂತೆ, ಆದರೂ ಅಧಿಕಾರಿಗಳ ಒತ್ತಡದಿಂದಾಗಿ ಡ್ಯೂಟಿ ಮಾಡಿದ್ದರಿಂದ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾನೆ ಅನ್ನೋದು ಸಾರಿಗೆ ಮುಖಂಡರ ಆರೋಪವಾಗಿದೆ. ಡ್ರೈವರ್, ಕಂಡಕ್ಟರ್ಗಳು ಕೆಲಸ ಮುಗಿಸಿ ಬಂದ್ರು ಅಧಿಕಾರಿಗಳು ಮತ್ತೊಂದು ಶಿಫ್ಟ್ ಕೆಲಸ ಮಾಡಿಸಲು ಆರ್ಡರ್ ಮಾಡ್ತಾರಂತೆ. ಮೃತ…
ಬಾಗಲಕೋಟೆ: ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ರೈತರ ಜಮೀನನ್ನು ವಕ್ಫ್ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಪಹಣಿಗಳಲ್ಲಿದ್ದ ವಕ್ಫ್ ಹೆಸರನ್ನು ಡಿಲೀಟ್ ಮಾಡಲಾಗಿದೆ. ಇದರ ಬೆನ್ನಲ್ಲೇ ಹಿಂದೂ ಸ್ಮಶಾನ ಜಾಗಗಳು ಸಹ ವಕ್ಪ್ ಮಂಡಳಿಗೆ ಸೇರಿದೆ. https://ainlivenews.com/what-is-waqf-amendment-act-how-will-the-farmers-suffer-here-is-the-complete-information/ ಜಮಖಂಡಿ ತಾಲೂಕಿನ ಸನಾಳ ಗ್ರಾಮದ 2 ಎಕರೆ 30 ಗುಂಟೆ ಮತ್ತು ರಬಕವಿ ಬನಹಟ್ಟಿ ತಾಲೂಕಿನ ಹೊಸೂರು ಗ್ರಾಮದ 1 ಎಕ್ರೆ 39 ಗುಂಟೆ ರುದ್ರಭೂಮಿ ಜಾಗಗಳು ವಕ್ಪ್ ಮಂಡಳಿಗೆ ಸೇರಿವೆ ಎಂದು ಪಹಣಿಯಲ್ಲಿ ದಾಖಲಿಸಲಾಗಿದೆ. ಸಾರ್ವಜನಿಕರ ಅವಶ್ಯಕತೆಗಾಗಿ ಹೊಸೂರು ಗ್ರಾಮದ ಸನ್ನವ್ವ ಕೋಲಾರ್ ಎಂಬುವರು ತಮ್ಮ ಜಮೀನನ್ನು ಹಿಂದೂ ರುದ್ರ ಭೂಮಿಗೆ ಕೊಡುಗೆಯಾಗಿ ನೀಡಿದ್ದಾರೆ. ಇಲ್ಲಿ ನಾವು ಅಂತ್ಯಕ್ರಿಯೆ ನಡೆಸುತ್ತಾ ಬಂದಿದ್ದೇವೆ. ಈ ಜಾಗ ವಕ್ಫ್ ಮಂಡಳಿಗೆ ಸೇರಿದ್ದು ಹೇಗೆ ಎಂದು ಪ್ರಶ್ನಿಸಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಿಂದೂ ರುದ್ರಭೂಮಿ ಎಂದು ಉಲ್ಲೇಖವಾಗಿದ್ದ ಜಾಗದ ಪಹಣಿಯಲ್ಲಿ…
ಬೆಂಗಳೂರು:- 136 ಸ್ಥಾನ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲಿನಿಂದಲೂ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಹೇಳಿರುವ ಹೇಳಿಕೆ ಸಂಚಲನ ಮೂಡಿಸಿದೆ. ಸಂಡೂರು ಉಪಚುನಾವಣೆ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಮತಯಾಚನೆ ಮಾಡಿದ ಸಿಎಂ ಸಿದ್ದರಾಮಯ್ಯ ಮುಂದಿನ ಮೂರುವರೆ ವರ್ಷ ಸಿಎಂ ಆಗಿ ಮುಂದುವರಿಯಲಿದ್ದೇನೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. https://ainlivenews.com/a-phone-call-to-stop-child-marriage-a-17-year-old-girls-rescue/ ಸಂಡೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಮೂರುವರೆ ವರ್ಷ ಯಾರು ಅಧಿಕಾರದಲ್ಲಿರುವವರು ಎಂದು ಪ್ರಶ್ನಿಸುತ್ತಾರೆ. ಆಗ ಸಮಾವೇಶದಲ್ಲಿ ನೆರೆದಿದ್ದ ಜನರು, ‘ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಜನರ ಮಾತಿಗೆ ದನಿಗೂಡಿಸಿ ಮಾತನಾಡಿದ ಸಿಎಂ, ‘ಸಿದ್ದರಾಮಯ್ಯ, ಕಾಂಗ್ರೆಸ್’ ಎಂದು ಒತ್ತುಕೊಟ್ಟು ಹೇಳಿದ್ದಾರೆ. ಆ ಮೂಲಕ ಮೂರುವರೆ ವರ್ಷ ನಾನೇ ಸಿಎಂ ಎಂಬ ಸಂದೇಶ ಸಾರಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಅತ್ತ ಚನ್ನಪಟ್ಟಣದಲ್ಲಿ ಪ್ರಚಾರ ನಿರತರಾಗಿರುವ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗಳನ್ನು ಟಿವಿಗಳಲ್ಲಿ ನೋಡಿದೆ.…