ಧಾರವಾಡ: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಳಾಳಕರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಪ್ರಕರಣ ಕುರಿತು ಒಸಿಐಡಿಯಿಂದ ಪರಿಷತ್ ಸ್ಥಳ ಮಹಜರು ಮಾಡಲುನಾವು ಇನ್ನೂ ಅನುಮತಿ ಕೊಟ್ಟಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. https://ainlivenews.com/condemnation-of-amit-shahs-statement-mandya-mysore-bandh/ ಈ ಕುರಿತು ಅವರು ಏನೂ ಹೇಳಿಲ್ಲ ಏನು ಪಂಚನಾಮೆ ಮಾಡ್ತಾರೆ ತಿಳಿಸಬೇಕು ಅದನ್ನು ನೋಡಿ ಅನುಮತಿ ಬಗ್ಗೆ ವಿಚಾರ ಮಾಡ್ತೇವೆ ಸದ್ಯ ನಾವು ಅನುಮತಿ ಕೊಡೊದಿಲ್ಲ ಎಂದು ನಿರಾಕರಿಸಿದ್ದೇವೆ. ಹಿಂದೆ ಯಾವತ್ತೂ ಹೀಗೆ ಆಗಿಲ್ಲ.ಈಗ ಆಗಿದ್ದುಏನು ಮಾಡಲುಆಗುವುದಿಲ್ಲ ಆಗಿದ್ದನ್ನು ಎದರುಸುತ್ತಿದ್ದೇವೆ ಎಂದರು. ಲಕ್ಷ್ಮೀ ಹೆಬ್ಬಾಳಕರ ಪುನರ್ ವಿಚಾರಣೆಗೆ ಮನವಿ ವಿಚಾರ: ಪ್ರಕರಣವನ್ನ ಪುನರ್ ಪರಿಶೀಲನೆಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ಮನವಿ ಕೊಟ್ಟಿದ್ದಾರೆ. ಈ ಸಂಬಂಧ ಸೆಕ್ರೆಟರಿ ಹಂತದಲ್ಲಿ ಸಭೆ ಮಾಡ್ತಾರೆ. ಸಭೆ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ. ಸಿಐಡಿಗೆ ಸರ್ಕಾರ ತನಿಖೆಗೆ ಕೊಟ್ಟಿದ್ದೇನ. ಮ್ಮನ್ನೇನು ಅವರು ಕೇಳಿ ಕೊಟ್ಟಿಲ್ಲ ಬಂಧನಕ್ಕೆ…
Author: AIN Author
ಮೈಸೂರು:- ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ಇಂದು ಮೈಸೂರು ಹಾಗೂ ಮಂಡ್ಯ ಬಂದ್‌ಗೆ ಕರೆ ನೀಡಿವೆ. https://ainlivenews.com/bengaluru-dateline-for-aero-india-2025-when/ ಆದರೆ, ಮೈಸೂರಿನಲ್ಲಿ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದ್ದು, ಜನರಿಗೆ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಹಜ ಸ್ಥಿತಿ ಇದೆ. ಮಂಡ್ಯದಲ್ಲಿ ಕೂಡ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ನಡೆಯುತ್ತಿದೆ. ಸಾರಿಗೆ ಬಸ್ಗಳು ಮಂಡ್ಯದಿಂದ ಬೇರೆಡೆಗೆ ತೆರಳುತ್ತಿವೆ. ವ್ಯಾಪಾರ ವಹಿವಾಟು ಕೂಡ ಎಂದಿನಂತೆಯೇ ಆರಂಭವಾಗುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇನ್ನೂ ಬಂದ್ ಬಿಸಿ ಆರಂಭವಾಗಿಲ್ಲ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ. ದಲಿತ, ರೈತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟದಿಂದ ಬಂದ್‌ಗೆ ಕರೆ ನೀಡಲಾಗಿದೆ.
ಬೆಂಗಳೂರು:- 15ನೇ ಆವೃತ್ತಿಯ ಏರೋ ಇಂಡಿಯಾ-2025ಕ್ಕೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14ರ ವರೆಗೆ ನಡೆಯಲಿದೆ. https://ainlivenews.com/continued-leopard-attack-in-nelamangala-people-are-worried/ ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್’- ಬಿಲಿಯನ್ ಅವಕಾಶಗಳಿಗೆ ರನ್ ವೇ ಎಂಬ ವಿಶಾಲ ಧೇಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮ ವಿದೇಶಿ ಮತ್ತು ಭಾರತೀಯ ಸಂಸ್ಥೆಗಳ ನಡುವಿನ ಪಾಲುದಾರಿಕೆಯನ್ನು ರೂಪಿಸಲು ಮತ್ತು ಜಾಗತಿಕ ಮೌಲ್ಯ ಸರಣಿಯಲ್ಲಿ ದೇಶೀಕರಣ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಹೊಸ ಮಾರ್ಗಗಳ ಅನ್ವೇಷಣೆಗೆ ವೇದಿಕೆಯನ್ನು ಒದಗಿಸುತ್ತದೆ. ಕಾರ್ಯಕ್ರಮದ ಮೊದಲ ಮೂರು ದಿನಗಳು ವ್ಯವಹಾರದ ದಿನಗಳಾಗಿರುತ್ತವೆ. ಆದರೆ 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ರಮ ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ ಮತ್ತು ಸ್ಥಿರ ಪ್ರದರ್ಶನಗಳನ್ನು ಒಳಗೊಂಡಿದೆ.
ನೆಲಮಂಗಲ: ನೆಲಮಂಗಲದಲ್ಲಿ ಚಿರತೆ ದಾಳಿ ಮುಂದುವರಿದಿದೆ. ಹೆಸರುಘಟ್ಟದ ತೋಟಗಾರಿಕೆಯಲ್ಲಿ ಚಿರತೆ ಕಂಡುಬಂದಿದ್ದು, ಐವರಕಂಡವಪುರದ ತೋಟಗಾರಿಕೆ ಪ್ರದೇಶದ ಮೇಲೆ ಚಿರತೆ ಪ್ರತ್ಯೇಕ ದಾಳಿ ಮಾಡಿದೆ. https://ainlivenews.com/collecting-money-in-the-name-of-mylaralinga-fake-swamijis-arrested/ ನೆನ್ನೆ ಸಂಜೆ ಹಸುವಿನ ದಾಳಿ ಮಾಡಿದ್ದ ಚಿರತೆ ಮತ್ತೆ ದಾಳಿ ಮಾಡಿ ಜನರಲ್ಲಿ ಆತಂಕ ಮೂಡಿಸಿದೆ. ಐವರಕಂಡರಪುರ ಹೆಸರುಘಟ್ಟ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಚಿರತೆ ದಾಳಿಯಿಂದ ಸಾರ್ವಜನಿಕರು ಭಯ ಬೀಳುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಹಿಡಿಶಾಪ ಹಾಕುತ್ತಿದ್ದಾರೆ. ಹಳ್ಳಿ ಪ್ರದೇಶದಿಂದ ಕೂಡಿರುವ ಹೂರು ನಗರದತ್ತ ಚಿರತೆ ಪ್ರವೇಶ ಮಾಡುತ್ತಿದ್ದು, ನಗರಕ್ಕೆ ಪ್ರವೇಶ ಮಾಡಿದ್ರೆ ಬಾರಿ ಅನಾಹುತ ಆಗುವ ಸಾಧ್ಯತೆ ಇದೆ.
ಹಾಸನ:- ಮೈಲಾರಲಿಂಗನ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಸ್ವಾಮೀಜಿಗಳನ್ನು ಅರೆಸ್ಟ್ ಮಾಡಲಾಗಿದೆ. https://ainlivenews.com/abvp-protests-in-hubli-condemning-bus-fare-hike/ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ದಾನ ಕೇಳುವ ನೆಪದಲ್ಲಿ ಕಳ್ಳ ಸ್ವಾಮೀಜಿಗಳು ಒಂಟಿ ಮನೆಯೊಂದಕ್ಕೆ ನುಗ್ಗಿದ್ದ ಕಳ್ಳ ಸ್ವಾಮೀಜಿಗಳು, ಮತ್ತವರ ಸಹಚರರನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಜರುಗಿದೆ. ನಾವು ಜೇನುಕಲ್ ಸಿದ್ದೇಶ್ವರಸ್ವಾಮಿ ಮಠದವರಾಗಿದ್ದು, ಹೆಚ್ಚಿನ ಧನ ಸಹಾಯ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡು ತಕ್ಷಣವೆ ಎಚ್ಚೆತ್ತ ಮಹಿಳೆ ಗ್ರಾಮಸ್ಥರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು. ಸ್ಥಳೀಯರು ಬರುತ್ತಿದ್ದಂತೆ ಕಳ್ಳ ಸ್ವಾಮೀಜಿಗಳ ಗ್ಯಾಂಗ್ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಇಬ್ಬರು ನಕಲಿ ಸ್ವಾಮೀಜಿ ಸೇರಿ ಐವರನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಹಣದ ಸಮೇತ ಗ್ರಾಮಸ್ಥರು ಐವರನ್ನು ಪೊಲೀಸರಿಗೊಪ್ಪಿಸಿದ್ದಾರೆ. ಕಳೆದ ವರ್ಷ ನವೆಂಬರ್ 3 ರಂದು ಇದೇ ಗ್ಯಾಂಗ್ ಕಲ್ಲುಂಡಿ ಗ್ರಾಮಕ್ಕೆ ಭಿಕ್ಷೆ ಕೇಳುವ ನೆಪದಲ್ಲಿ ಬಂದಿದ್ದರು. ಆಗ ಪಿಸ್ತೂಲ್ ತೋರಿಸಿ…
ಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹುಬ್ಬಳ್ಳಿ ಮಹಾನಗರದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. https://ainlivenews.com/amit-shah-statement-against-ambedkar-hubli-dharwad-bandh-on-9th-january/ ಪ್ರಯಾಣ ದರ ಹೆಚ್ಚಳ ಮಾಡುವುದರ ಮೂಲಕ ಬಡ, ಕೂಲಿ- ಕಾರ್ಮಿಕರು, ಮಧ್ಯಮವರ್ಗದ ಜನರಿಗೆ ಹೊರೆ ಹೇರಿದಂತಾಗಿದೆ. ಸಾವಿರಾರು ಜನರು ಸರ್ಕಾರಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಆದರೆ ಶೇ. 15ರಷ್ಟು ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದರ ಮೂಲಕ ಆರ್ಥಿಕ ಹೊರೆಯನ್ನು ಜನಸಾಮಾನ್ಯರ ಮೇಲೆ ರಾಜ್ಯ ಸರ್ಕಾರ ಹೇರಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು. ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ರವಾನಿಸಲಾಯಿತು. ಎಬಿವಿಪಿ ಮಹಾನಗರ ಕಾರ್ಯದರ್ಶಿ ಸಿದ್ದಾರ್ಥ ಕೋರಿ, ಸಹ ಕಾರ್ಯದರ್ಶಿ ದಾನೇಶ ಕಿತ್ತೂರ, ರಕ್ಷಿತಾ ಚಂಡಕೆ, ಸಂಜಯ ಉದ್ದೂರು, ಅನ್ನೋಲ್ ಕಲಬುರ್ಗಿ, ವಿಕ್ರಮ್ ಗಳಂದೇ, ವರುಣ ಪಾಗದ ಇದ್ದರು.
ಹುಬ್ಬಳ್ಳಿ;ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಜ. 9ರಂದು ಗುರುವಾರ ಹುಬ್ಬಳ್ಳಿ – ಧಾರವಾಡ ಅವಳಿನಗರ ಬಂದ್‌ಗೆ ಕರೆ ನೀಡಿವೆ. https://ainlivenews.com/celebration-of-republic-day-with-grandeur-and-meaningfulness-in-mandya/ ಈ ಕುರಿತು ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಸ್ವಾಭಿಮಾನಿ ಅಭಿಮಾನಿ ಅನುಯಾಯಿಗಳ ಬಳಗದ ಮುಖಂಡ ಗುರುನಾಥ ಉಳ್ಳಿಕಾಶಿ ಹೇಳಿದರು. ಈ ಬಂದ್ ಗೆ ಸುಮಾರು 100ಕ್ಕೂ ಅಧಿಕ ಸಕಲ ಸಮಾಜದ ಪ್ರಮುಖ ಸಂಘ ಸಂಸ್ಥೆಗಳು ದಿ. 4 ಮತ್ತು 5ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದು, ಅವಳಿನಗರ ಸ್ತಬ್ಧಗಳೊಳ್ಳುವುದು ಖಚಿತ ಎಂದರು. ಬಂದ್ ನಿಮಿತ್ತ ಶಾಂತಿ ಸದ್ಭಾವನೆಯೊಂದಿಗೆ ಬಡಾವಣೆಗಳಿಂದ ಮೆರವಣಿಗೆ ಮೂಲಕ ತಮ್ಮ ವ್ಯಾಪ್ತಿಯ ಬಂದ್ ನೊಂದಿಗೆ ಹುಬ್ಬಳ್ಳಿಯ ಚನ್ನಮ್ಮ ವೃತ್ತ ಮತ್ತು ಧಾರವಾಡದ ಜುಬಿಲಿ ವೃತ್ತದಲ್ಲಿ ಸಮಾವೇಶಗೊಳ್ಳಲು…
ಮಂಡ್ಯ:- ಜಿಲ್ಲೆಯಲ್ಲಿ ಜನವರಿ 26 ರಂದು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. https://ainlivenews.com/have-you-been-to-oyo-room-lovers-be-aware-that-you-may-get-into-trouble/ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. *ಹಾಜರಾತಿ ಕಡ್ಡಾಯ* ಜನವರಿ 26 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಪದವಿ ಪೂರ್ವ ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳೊಂದಿಗೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ತಿಳಿಸಿದರು. *ದೀಪಾಲಂಕಾರ* ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ಕಚೇರಿಗಳು ದೀಪಾಲಂಕಾರ ಮಾಡಿ ವಿಶೇಷವಾಗಿ ಗಣರಾಜ್ಯೋತ್ಸವವನ್ನು ಆಚರಿಸಿ ಎಂದರು. ಕಾರ್ಯಕ್ರಮದ ಕೆಲಸಗಳು ಸುಸೂತ್ರವಾಗಿ ನಡೆಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಸಮಿತಿ, ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಿದರು. ಸ್ವಾಗತ ಸಮಿತಿಯು ತಪ್ಪದಂತೆ ಕನ್ನಡಪರ ಸಂಘ ಸಂಸ್ಥೆ ಹಾಗೂ ಸಂಘಟನೆಗಳು, ಗಣ್ಯರಿಗೆ…
ನವದೆಹಲಿ:- ಓಯೋ ಹೋಟೆಲ್ ಬುಕ್ಕಿಂಗ್ ಕಂಪನಿ ಚೆಕ್ ಇನ್‌ಗೆ ಸಂಬಂಧಿಸಿದಂತೆ ಕೆಲವು ಹೊಸ ಮಾರ್ಪಾಡುಗಳನ್ನು ಮಾಡಿದ್ದು. ಇನ್ನು ಮುಂದೆ ಅವಿವಾಹಿತ ಜೋಡಿಗಳಿಗೆ ರೂಂ ನೀಡುವುದಿಲ್ಲ ಎಂದು ಘೋಷಣೆ ಮಾಡಿದೆ. https://ainlivenews.com/govts-good-news-for-farmers-with-pumpset-you-must-know-this/ ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್ ಬುಕ್ಕಿಂಗ್ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ದೊಡ್ಡ ಜಾಲದಿಂದ ಈ ಓಯೋ ಹೋಟೆಲ್‌ಗಳು ಹೆಸರುವಾಸಿಯಾಗಿವೆ. ಅದರಲ್ಲೂ ಅವಿವಾಹಿತರಿಗೆ ಹೋಟೆಲ್ ಚೆಕ್‌ಇನ್‌ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಇದೀಗ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮ ಜಾರಿಗೊಳಿಸಿದೆ. ಓಯೋ ಹೋಟೆಲ್ ರೂಮ್ ಬುಕ್ ಮಾಡುವ ಮುನ್ನ ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ. ಓಯೋ ಹೊಸ ನಿಯಮದ ಪ್ರಕಾರ, ಗ್ರಾಹಕರು ಚೆಕ್-ಇನ್ ಸಮಯದಲ್ಲಿ ಅಧಿಕೃತ ಗುರುತಿನ ಚೀಟಿ ಮತ್ತು ನಿಮ್ಮೊಂದಿಗೆ ಬರೋವರರ ಸಂಬಂಧ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ನೀವು ಬುಕ್ಕಿಂಗ್ ಆನ್‌ಲೈನ್ ಅಥವಾ ಆಫ್‌ಲೈನ್ ಮಾಡಿದ್ರೂ ಎಲ್ಲಾ…
ನವದೆಹಲಿ:- ರೈತರಿಗಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಆರ್ಥಿಕವಾಗಿ ಹಾಗೂ ಅನುಕೂಲವಾಗಲೆಂದು ಸಾಕಷ್ಟು ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ಜಾರಿಗೆ ತರುತ್ತಿದೆ. ಇನ್ನೂ ನಮ್ಮ ರಾಜ್ಯದಲ್ಲಿ ಪ್ರಸ್ತುತ ನಾಲ್ಕು ಪಾಯಿಂಟ್ ಐದು ಲಕ್ಷ ಪಂಪ್ ಸೆಟ್ ಗಳು ಇವೆಲ್ಲವೂ ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ ಇವೆ ಇದರಲ್ಲಿ ಸುಮಾರು 2.5 ಲಕ್ಷ ಪಂಪ್ ಸೆಟ್ ಗಳಿಗೆ ಅಕ್ರಮ ಸಕ್ರಮ ಯೋಜನೆ ಅಡಿಯ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗುತ್ತೆ. https://ainlivenews.com/unscientific-work-bbmp-left-people-tired-tired/ ಹಾಗೆ ಇನ್ನುಳಿದಿರುವಂತಹ ಎರಡು ಲಕ್ಷ ಕೃಷಿ ಕಂಸಟ್ ಗಳಿಗೆ ಏನು ಮಾಡಬೇಕು ಇವರಿಗಂತಲೇ ರಾಜ್ಯ ಸರ್ಕಾರ ಎರಡು ಲಕ್ಷ ಪಂಪ್ಸೆಟ್ಟುಗಳಿಗೋಸ್ಕರ ವಿದ್ಯುತ್ ಸಂಪರ್ಕಿಸಲು ಏಜೆನ್ಸಿಗಳಿಗೆ ನಿಗದಿಪಡಿಸಲಾಗಿದೆ ಇದರ ಕುರಿತು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ಇಷ್ಟ ಇಲ್ಲದೆ ಕೇಜೆ ಜಾರ್ಜ್ ಅವರು ನಮ್ಮ ರಾಜ್ಯದಲ್ಲಿ ಕೆಲವೊಂದಿಷ್ಟು ತಾಲೂಕುಗಳಲ್ಲಿ ಪದೇಪದೇ ಬರಕ್ಕೆ ತುತ್ತಾಗುತ್ತಿದೆ ಇದರಿಂದ ಅಲ್ಲಿರುವಂತಹ ಪ್ರದೇಶಗಳಿಗೆ ಬಹಳ ತೊಂದರೆ ಆಗುತ್ತೆ ಹೀಗಾಗಿ…