ಬೆಂಗಳೂರು: ಸಿಎಂ ಸಿದ್ದರಾಮಯ್ಯ ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಡಿಸಿಎಂ ಡಿಕೆಶಿವಕುಮಾರ್ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಸಿಎಂ ಅವರು ಕಾನೂನಿಗೆ ಗೌರವ ಕೊಟ್ಟಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ್ರು, ಚುನಾವಣೆ ಪ್ರಚಾರ ಇದ್ದರೂ ಕೂಡ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಕಾನೂನಿಗೆ ಗೌರವ ಕೊಡಬೇಕು ಎಂದು ಪ್ರಚಾರವನ್ನು ಕೈಬಿಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. https://ainlivenews.com/here-are-super-tips-to-keep-tomatoes-fresh-for-longer-without-spoiling/ ಸಿಎಂ ಅವರು ಒಂದು ವಾರ ವಿನಾಯಿತಿ ಕೇಳಬಹುದಿತ್ತು. ಆದರೆ ಅಧಿಕಾರದಲ್ಲಿ ಇದ್ದುಕೊಂಡು ಅಧಿಕಾರ ದುರುಪಯೋಗ ಮಾಡಬಾರದು ಎಂದು ಹೇಳಿ ಕಾನೂನಿಗೆ ಗೌರವ ಕೊಟ್ಟು ಹೋಗಿದ್ದಾರೆ. ಸಿಎಂ ಏನು ತಪ್ಪು ಮಾಡಿಲ್ಲ. ಲೋಕಾಯುಕ್ತ ಏನು ಕೇಳುತ್ತಾರೋ ಅದಕ್ಕೆ ಉತ್ತರ ಕೊಡುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಲೋಕಾಯುಕ್ತ ಕೇಳಿರುವ ಪ್ರಶ್ನೆಗಳ ಕುರಿತು ಮುಡಾದಲ್ಲಿ ಹಗರಣದಲ್ಲಿ ಏನಿದೆ? ಏನು ಇಲ್ಲ? ಮಂಜೂರು ಮಾಡಿಲ್ಲ, ಸಹಿಯೂ ಹಾಕಿಲ್ಲ ಎಂದು ನೀವು ಲೋಕಾಯುಕ್ತ ಅಧಿಕಾರಿಗಳಿಗೆ ಕೇಳಬೇಕು.…
Author: AIN Author
ಬೆಂಗಳೂರು: ಬಿಜೆಪಿಯವರು ವಕ್ಫ್ ವಿವಾದವನ್ನು ಕೋಮುವಾದದ ದೃಷ್ಟಿಯಿಂದ ನೋಡ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬಿಜೆಪಿಯವರು ದುರುದ್ದೇಶದಿಂದ ಚುನಾವಣೆವಾಗಿ ವಕ್ಫ್ ವಿವಾದ ಮಾಡುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಆ ವಿಷಯ ಕೈ ಬಿಡುತ್ತಾರೆ. ವಕ್ಫ್ ವಿಚಾರದಲ್ಲಿ ಅನೇಕ ಚರ್ಚೆಗಳು ಆಗಿವೆ. ಈ ಹಿಂದೆ ಅನೇಕ ದಾನಗಳು ಆಗಿವೆ. ಅದರಲ್ಲಿ ಏನಾದರೂ ದೋಷ ಇದ್ದರೆ ಸರಿಪಡಿಸಿಕೊಳ್ಳುವುದಕ್ಕೆ ನಮ್ಮ ಸರ್ಕಾರ ಇದೆ. ಬಿಜೆಪಿಯವರು ಸುಮ್ಮನೆ ಅದನ್ನು ಕೋಮುವಾದದ ದೃಷ್ಟಿಯಿಂದ ನೋಡ್ತಿದ್ದಾರೆ. ಬಿಜೆಪಿಯವರಿಗೆ ದ್ವೇಷವನ್ನು ಹೆಚ್ಚು ಮಾಡಬೇಕು, ಮುಸ್ಲಿಮರನ್ನು ಟಾರ್ಗೆಟ್ ಮಾಡಬೇಕು. ಅದು ಬಿಟ್ಟು ಇನ್ನೇನೂ ಇಲ್ಲ ಎಂದು ಕಿಡಿಕಾರಿದ್ದಾರೆ. https://ainlivenews.com/here-are-super-tips-to-keep-tomatoes-fresh-for-longer-without-spoiling/ ಇವರದ್ದೇ ಸರ್ಕಾರದ ಅವಧಿಯಲ್ಲಿ ಅನೇಕ ನೋಟಿಸ್‌ಗಳನ್ನು ಕೊಡಲಾಗಿದೆ. ಅದನ್ನೆಲ್ಲಾ ಕಾನೂನು ಪ್ರಕಾರ ತೀರ್ಮಾನ ಮಾಡಬೇಕೇ ಹೊರತು ಕೋಮುವಾದದ ಲೇಪವನ್ನು ಹಾಕೋದು ಸರಿಯಲ್ಲ. ಗೊಂದಲ ಸೃಷ್ಟಿ ಮಾಡಿ ರಾಜಕೀಯ ಲಾಭಕ್ಕಾಗಿ ಮಾಡೋದು ಸರಿಯಲ್ಲ. ಚುನಾವಣೆ ಮುಗಿದ ಮೇಲೆ ಯಾರೂ ಕಾಣಲ್ಲ. ಸಮಾಜವನ್ನು ಹಾಳು ಮಾಡುತ್ತಿದ್ದಾರೆ…
ವಿಜಯಪುರ: ಭಾರತದಲ್ಲಿ ಈಗಲೇ ಒಂದು ಪಾಕಿಸ್ತಾನ ನಿರ್ಮಾಣ ಆಗಿದೆ. ಭಾರತದ ವಕ್ಫ್ ಆಸ್ತಿ ಪಾಕಿಸ್ತಾನದಷ್ಟಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಇನ್ನೊಂದು ಪಾಕಿಸ್ತಾನ ನಿರ್ಮಾಣ ಆಗಿದೆ. ದಿನದಿಂದ ದಿನಕ್ಕೆ ಆಸ್ತಿ ವಕ್ಫ್ ಪಾಲಾಗುತ್ತಿದೆ. ನಾಲಾಯಕ್ ಕಾಂಗ್ರೆಸ್ ಮಾಡಿದ ಕಾನೂನು ಇದಾಗಿದೆ. ವಕ್ಫ್ ವಿರುದ್ಧ ದೊಡ್ಡ ಸಂಗ್ರಾಮ ಆಗಬೇಕಿದೆ. ದೆಹಲಿಯಲ್ಲಿ ಮೌಲ್ವಿ ಚಂದ್ರಬಾಬು ನಾಯ್ಡು, ನಿತೇಶ್‌ಗೆ ಧಮ್ಕಿ ಹಾಕಿದ್ದಾನೆ. ಬಿಲ್‌ಗೆ ಬೆಂಬಲ ನೀಡಿದರೆ 5 ಲಕ್ಷ ಜನ ಸೇರಿಸುತ್ತೇನೆ ಎಂದಿದ್ದಾನೆ ಎಂದು ಹೇಳಿದರು. https://ainlivenews.com/here-are-super-tips-to-keep-tomatoes-fresh-for-longer-without-spoiling/ ಅಂದು ಕುಂಕುಮ ಹಚ್ಚದ ಸಿಎಂ ಈಗ ಕುಂಕುಮ ಹಚ್ಚಿಕೊಳ್ಳುತ್ತಿದ್ದಾನೆ. ಚಾಮುಂಡೇಶ್ವರಿ ಬಳಿ ಹೋಗಿ ಈಗ ಕುಂಕುಮ ಹಚ್ಚಿ ಎನ್ನುತ್ತಿದ್ದಾನೆ. ವಿಜಯಪುರದ ವಾಗ್ದೇವಿ ದೇಗುಲದ ಒಳಗೆ ಸಿಎಂ ಹೋಗಲಿಲ್ಲ. ವಾಗ್ದೇವಿ ಶಾಪದಿಂದಲೇ ಮುಡಾದಲ್ಲಿ ಸಿಎಂ ಸಿಕ್ಕಿಹಾಕಿಕೊಂಡಿದ್ದಾನೆ. ಆದರೆ ವಿಜಯಪುದಲ್ಲಿ ಮತಾಂಧ ಮೌಲ್ವಿ ಮನೆಗೆ ಹಲ್ಲು ಕಿರಿಯುತ್ತಾ ಹೋಗುತ್ತಾನೆ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ರಾಮನಗರ: ಕರ್ನಾಟಕ ಉಪ ಕದನದ ಕುರುಕ್ಷೇತ್ರ ರಂಗೇರುತ್ತಿದೆ. ನಾಡಿನ ನಾಡಿಮಿಡಿತ ಏನು ಅನ್ನೋ ಚಿತ್ರಣ ಕಟ್ಟಿಕೊಡುವ ಈ 3 ವಿಧಾನಸಭಾ ಉಪ ಚುನಾವಣೆ ಪ್ರತಿಷ್ಠೆ, ಅಸ್ತಿತ್ವದ ಹೋರಾಟಕ್ಕೆ ಸಾಕ್ಷಿ ಆಗಲಿದೆ. 136 ಕ್ಷೇತ್ರಗಳನ್ನ ಗೆದ್ದು ಬೀಗುತ್ತಿರುವ ಕಾಂಗ್ರೆಸ್. ಉಪಕದನದಲ್ಲಿ ಮೂರೂ ಕ್ಷೇತ್ರಗಳನ್ನ ಗೆದ್ದು ಶಕ್ತಿಯನ್ನ ಮತ್ತಷ್ಟು ಹೆಚ್ಚಿಸಿಕೊಳ್ಳುವ ಹಠಕ್ಕೆ ಬಿದ್ದಿದೆ. ಇದರ ಬೆನ್ನಲ್ಲೇ ಉಪಚುನಾವಣೆಗೂ ಮುನ್ನ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಹೆಚ್ ಡಿ ಕುಮಾರಸ್ವಾಮಿ ಆಡಿಯೋ ಲೀಕ್ ಆಗಿದೆ. ಮಾಜಿ ಸಂಸದ ಡಿಕೆ ಸುರೇಶ್ ಅವರು ಕುಮಾರಸ್ವಾಮಿಯವರ ಆಡಿಯೋ ಸಿಡಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಜನರ ಬಳಿ ಹೆಚ್ಚು ಹೋಗಬಾರದು, ಮತದಾನಕ್ಕೆ ಇನ್ನೆಂಟು ದಿನ ಇರುವಾಗ ಹೋಗಿ ಪ್ರಚಾರ ಮಾಡಬೇಕು ಎಂದು ಕುಮಾರಸ್ವಾಮಿ ಈ ಹಿಂದೆ ಹೇಳಿದ್ದ ಆಡಿಯೋ ಸಿಡಿಯೊಂದನ್ನು ಬಹಿರಂಗಪಡಿಸಿ ಟೀಕಿಸಿದ್ದಾರೆ. https://ainlivenews.com/no-matter-what-you-do-keep-the-chapati-soft-while-the-dough-is-kneading-follow-these/ ಚನ್ನಪಟ್ಟಣ ಚುನಾವಣಾ ಪ್ರಚಾರ ವೇಳೆ ಆಡಿಯೋ ಬಿಡುಗಡೆ ಮಾಡಿದ ಡಿ. ಕೆ ಸುರೇಶ್, ಅಭಿವೃದ್ಧಿ ಗೆ ಜನ ಮತ ಹಾಕಲ್ಲ, ಎಂಟು ದಿನದ ಹಿಂದೆ…
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾದಾಗಿನಿಂದ ಇಲ್ಲಿಯವರೆಗೂ ಸಾಕಷ್ಟು ಬಡ ಪ್ರತಿಭೆಗಳು ಬೆಳಕಿಗೆ ಬಂದಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ತಮ್ಮ ಮಿಂಚಿನ ಪ್ರದರ್ಶನದ ಮೂಲಕ ಕ್ರಿಕೆಟ್ ವೃತ್ತಿ ಜೀವನವನ್ನು ಅಂತಾರಾಷ್ಟ್ರೀಯ ಮಟ್ಟದವರೆಗೂ ವಿಸ್ತರಿಸಿಕೊಂಡಿರುವ ಹಲವು ಕ್ರಿಕೆಟಿಗರು ನಮ್ಮ ಕಣ್ಣ ಮುಂದೆ ಇದ್ದಾರೆ. ಅದರಂತೆ ಕೋಲ್ಕತಾ ನೈಟ್ ರೈಡರ್ಸ್ ತಂಡದ ರಿಂಕು ಸಿಂಗ್ ಕೂಡ ಒಬ್ಬರು. ಕಳೆದ 2022ರ ಐಪಿಎಲ್ ಟೂರ್ನಿಯಲ್ಲಿ ಗುರುತಿಸಿಕೊಂಡಿದ್ದ ರಿಂಕು ಸಿಂಗ್, ಹಲವು ಪಂದ್ಯಗಳಲ್ಲಿ ಕೆಕೆಆರ್ ತಂಡವನ್ನು ಗೆಲ್ಲಿಸಿದ್ದರು. https://ainlivenews.com/no-matter-what-you-do-keep-the-chapati-soft-while-the-dough-is-kneading-follow-these/ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ 13 ಕೋಟಿಗೆ ಉಳಿಸಿಕೊಂಡಿದೆ. ಇದರ ಬೆನ್ನಲ್ಲೇ ಐಷಾರಾಮಿ ಬಂಗಲೆಯನ್ನು ಕ್ರಿಕೆಟರ್ ಖರೀಸಿದ್ದಾರೆಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆಗಿದೆ. ಐಪಿಎಲ್ 2023 ರಲ್ಲಿ ಯಶ್ ದಯಾಳ್ ಬೌಲಿಂಗ್‌ಗೆ ಐದು ಸಿಕ್ಸರ್‌ಗಳನ್ನು ಚಚ್ಚಿದ ರಿಂಕು ಪವರ್-ಹಿಟ್ಟರ್ ಎಂದು ಖ್ಯಾತಿ ಗಳಿಸಿದರು. ರಿಂಕು ಸಿಂಗ್ ಈಗ ತಂಡದ ಅಗ್ರ ರೀಟೈನ್ ಆಗಿದ್ದಾರೆ. ಐಪಿಎಲ್ ಧಾರಣೆಯನ್ನು ಘೋಷಿಸಿದ ನಂತರ, ಅಲಿಘರ್‌ನ ಓಝೋನ್ ಸಿಟಿಯಲ್ಲಿರುವ ದಿ ಗೋಲ್ಡನ್…
ನವದೆಹಲಿ: ಲಘು ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಗಳು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನವನ್ನು ಚಲಾಯಿಸಲು ಅರ್ಹನಾಗಿರುತ್ತಾನೆ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಕ ಪೀಠ ಆದೇಶ ನೀಡಿದೆ. ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಈ ಆದೇಶ ನೀಡಿದೆ. ಲಘು ಮೋಟಾರು ವಾಹನದ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು 7,500 ಕೆಜಿಗಿಂತ ಹೆಚ್ಚಿಲ್ಲದ ಭಾರವಿಲ್ಲದ ಸಾರಿಗೆ ವಾಹನವನ್ನು ಓಡಿಸಲು ಅರ್ಹರೇ ಎಂಬ ಕಾನೂನು ಪ್ರಶ್ನೆಗೆ ಪೀಠವು ಉತ್ತರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ರಾಯ್ ಅವರೊಂದಿಗೆ ಪೀಠದಲ್ಲಿ ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ, ಪಂಕಜ್ ಮಿಥಾಲ್ ಮತ್ತು ಮನೋಜ್ ಮಿಶ್ರಾ ಕೂಡ ಇದ್ದರು. https://ainlivenews.com/no-matter-what-you-do-keep-the-chapati-soft-while-the-dough-is-kneading-follow-these/ ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಎಲ್‌ಎಂವಿ ಪರವಾನಗಿ ಹೊಂದಿರುವವರು ಕಾರಣ ಎಂದು ಸಾಬೀತುಪಡಿಸಲು ಯಾವುದೇ ಡೇಟಾ ಲಭ್ಯವಿಲ್ಲ. ಈ ಸಮಸ್ಯೆಯು ಲಘು ಮೋಟಾರು ವಾಹನ ಪರವಾನಗಿ ಹೊಂದಿರುವ ಚಾಲಕರ ಜೀವನೋಪಾಯಕ್ಕೆ ಸಂಬಂಧಿಸಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.…
ನವದೆಹಲಿ: ರಾಜ್ಯದಲ್ಲಿ ಬೆಂಬಲ ಬೆಲೆಯೊಂದಿಗೆ ಹೆಚ್ಚುವರಿ ಹೆಸರು ಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಖರೀದಿಗೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಈಗಾಗಲೇ 22,215 ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಿದೆ. ರಾಜ್ಯದಲ್ಲಿ ಹೆಸರು ಕಾಳು ಹೆಚ್ಚುವರಿಯಾಗಿ ಬೆಳೆದಿರುವ ಹಿನ್ನೆಲೆ ಸರ್ಕಾರದಿಂದ ಖರೀದಿಗೆ ರೈತರು ಮನವಿ ಮಾಡಿದ್ದರು. ಈ ಹಿನ್ನೆಲೆ 16,105 ಮೆಟ್ರಿಕ್ ಟನ್ ಹೆಚ್ಚುವರಿಯಾಗಿ ಖರೀದಿಸಲು ಕೃಷಿ ಸಚಿವರ ಜೊತೆಗೆ ಮಾತುಕತೆ ನಡೆಸಲಾಗಿತ್ತು. https://ainlivenews.com/no-matter-what-you-do-keep-the-chapati-soft-while-the-dough-is-kneading-follow-these/ ಮನವಿ ಮೇರೆಗೆ ಕೃಷಿ ಸಚಿವಾಲಯವೂ ಅನುಮತಿ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದಾಗಿ ಈ ಬಾರಿ ಒಟ್ಟು 38,320 ಮೆಟ್ರಿಕ್ ಟನ್ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಗೆ ಅನುಮತಿ ನೀಡಿದಂತಾಗಲಿದೆ. ಶೀಘ್ರದಲ್ಲಿ ಎಫ್‌ಎಕ್ಯೂ ಗುಣಮಟ್ಟದಲ್ಲಿ ಕೇಂದ್ರದ ಸಂಸ್ಥೆಗಳು ಹೆಸರು ಕಾಳು ಖರೀದಿ ಮಾಡಲಿದೆ ಎಂದು ವಿವರಿಸಿದರು.
ಬೆಂಗಳೂರು: ಸ್ಕೂಲ್, ಕಾಲೇಜುಗಳಲ್ಲಿ ಇತ್ತೀಚೆಗೆ ಹಿಡನ್ ಕ್ಯಾಮೆರಾ ಅಳವಡಿಸಿ, ಚಿತ್ರೀಕರಣ ಮಾಡಿರುವ ಬಗ್ಗೆ ಸುದ್ದಿಗಳು ಕೇಳುತ್ತಲೇ ಇದ್ದೇವೆ. ಇದೀಗ ಬೆಂಗಳೂರಿನ ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್ಬಾಯ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಲ್ಲಾಲಿಂಗ ಬಂಧಿತ ಆರೋಪಿ. ತಿಲಕನಗರದ ಆಸ್ಪತ್ರೆಯಲ್ಲಿ ವಾರ್ಡ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.ಅಕ್ಟೋಬರ್ 31 ರಂದು ಬೆಳಗ್ಗೆ 8.20ರ ಸುಮಾರಿಗೆ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ವಾಶ್ರೂಂನ ಕಿಟಕಿಯ ಮೇಲೆ ಮೊಬೈಲ್ ಇರುವುದನ್ನು ಕಂಡರು. ಅದನ್ನು ಅನ್ಲಾಕ್ ಮಾಡಿದ ಬಳಿಕ ಹಲವು ರೆಕಾರ್ಡಿಂಗ್ಸ್ಗಳನ್ನು ನೋಡಿ ಗಾಬರಿಗೊಂಡಿದ್ದರು. https://ainlivenews.com/no-matter-what-you-do-keep-the-chapati-soft-while-the-dough-is-kneading-follow-these/ ಅವಳು ಹೊರಗೆ ಬಂದಾಗ ಯಲ್ಲಾಲಿಂಗ ಆ ಫೋನ್ ನನ್ನದು ನನಗೆ ವಾಪಸ್ ಕೊಡು ಎಂದು ಕೇಳಿದ್ದಾನೆ, ಆದರೆ ಸಿಬ್ಬಂದಿ ನಿರಾಕರಿಸಿದಾಗ ಆಕೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತಿಲಕನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಕಾಯ್ದೆಯ ಸೆಕ್ಷನ್ 77 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಕುರಿತು ಕೇಳಿದಾಗ ತಪ್ಪಾಗಿ ತನ್ನ ಮೊಬೈಲ್ನ್ನು…
ಸಂಡೂರು ನ 7: ಅನ್ನಪೂರ್ಣಮ್ಮ ನನ್ನ ಆತ್ಮೀಯ ಸ್ನೇಹಿತನ ಮಗಳು. ಇವರನ್ನು ಗೆಲ್ಲಿಸಿ ಕಳುಹಿಸಿ*ಮೂರೂವರೆ ವರ್ಷ ನಮ್ಮದೇ ಸರ್ಕಾರ ಇರತ್ತೆ: ಸಂಡೂರಿನ ಅಭಿವೃದ್ಧಿ ಜೋರಾಗತ್ತೆ. ಕಾಂಗ್ರೆಸ್ ಗೆಲ್ಲಿಸಿ ಕಳುಹಿಸಿ: ಸಂಡೂರು ವಿಧಾನಸಭಾ ಕ್ಷೇತ್ರದ ಬೊಮ್ಮಘಟ್ಟದಲ್ಲಿ ನಡೆದ ಬೃಹತ್ ಜನ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ಅವರ ಗೆಲುವಿಗೆ ಪ್ರಚಾರ ನಡೆಸಿ ಮಾತನಾಡಿದರು. ಈ.ತುಕಾರಾಮ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಕಾತರಿಸುತ್ತಾ ಕೆಲಸ ಮಾಡುವ ಶಾಸಕರಾಗಿದ್ದರು, ಈಗ ಸಂಸದರಾಗಿದ್ದಾರೆ. ಸಂಡೂರಿನಲ್ಲಿ ಈಗ ಆಗಿರುವ ಎಲ್ಲಾ ಅಭಿವೃದ್ಧಿಗಳೂ ಈ.ತುಕಾರಾಮ್ ಮತ್ತು ಸಂತೋಷ್ ಲಾಡ್ ಅವರ ಅವಧಿಯಲ್ಲಿ ಆಗಿರುವಂಥವು. ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟದ ಅವಧಿಯಿಂದಲೂ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿದೆ. ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲೂ ಜನರ ಪರವಾಗಿ ಇರಲಿಲ್ಲ. ಈಗಲೂ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು “ನಾ ಖಾವೋಂಗಾ-ನಾ ಖಾನೆ ದೂಂಗಾ” ಎಂದು ಭಾಷಣ ಮಾಡುತ್ತಾರೆ. ಆದರೆ ಜನಾರ್ಧನರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಂಡಿದ್ದಾರೆ. ಜನಾರ್ದನ ರೆಡ್ಡಿಯನ್ನು ನ್ಯಾಯಲಯವೇ ಅಪರಾಧಿ ಎಂದು ಘೋಷಿಸಿ ಜೈಲಿಗೆ ಹಾಕಿತ್ತು. ಬಿಜೆಪಿಗಾಗಲಿ,…
ಹಾವೇರಿ: ಲೋಕಾಯುಕ್ತರ ಸಂಸ್ಥೆ ಎಷ್ಟು ಬೇಗ ಕ್ಲೀನ್‌ಚೀಟ್ ಅನ್ನೋದು ವಿಚಾರ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಲೋಕಾಯುಕ್ತರ ಸಂಸ್ಥೆ ಎಷ್ಟು ಬೇಗ ಕ್ಲೀನ್‌ಚೀಟ್ ಅನ್ನೋದು ವಿಚಾರ ಮಾಡಿದೆ. ರಾಜ್ಯದ ಮುಖ್ಯಮಂತ್ರಿ ಆರೋಪಿ ಸ್ಥಾನದಲ್ಲಿದ್ದಾರೆ. ನ್ಯಾಯಾಲಯಕ್ಕೆ ಗೌರವಕ್ಕೆ ಕೊಡಬೇಕು. ಅವರು ನ್ಯಾಯವಾದಿ ಸಹ ಗೌರವ ಕೊಡಬೇಕು. ನ್ಯಾಯಾಲಯದ ತೀರ್ಪಿಗೆ ಗೌರವ ಕೊಡಬೇಕು ಎಂದರು. ಮೈಸೂರಿನಲ್ಲಿ ಒಂದು ಮನೆ ಇಲ್ಲ ಎನ್ನುವ ಕಾರಣಕ್ಕಾಗಿ ಶ್ರೀಮತಿ ಹೆಸರಿನಲ್ಲಿ 14 ಸೈಟ್ ತೆಗೆದುಕೊಂಡಿದ್ದಾರೆ. ಲೋಕಾಯುಕ್ತರು ತರಾತುರಿಯಲ್ಲಿ ವಿಚಾರ ಮಾಡಿ ಕ್ಲೀನ್ ಚೀಟ್ ಕೊಡಲು ದಿನೇಶ ಅನ್ನೋ ಅಧಿಕಾರಿಯನ್ನ ಬಚ್ಚಿಟ್ಟಿದ್ದಾರೆ. ಸಿದ್ದರಾಮಯ್ಯ ಭಂಡರಿದ್ದಾರೆ. ಅವರಿಗೆ ಆತಂಕ ಕಾಡುತ್ತಿದೆ. ಈಗ ಗೌರವ ಹರಾಜು ಆಗಿದೆ. ಹಾಗಾಗಿ ಮುಖ್ಯಮಂತ್ರಿಗಳು ವಿಚಲಿತರಾಗಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು. https://ainlivenews.com/great-job-opportunity-in-karnataka-lokayukta-apply-today/ ಸಿಎಂ ಸಿದ್ದರಾಮಯ್ಯ ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ ಸಿಬಿಐ ವಹಿಸಿಬೇಕಿತ್ತು. ಐದು ವರ್ಷ ಅಧಿಕಾರ ಪೂರ್ಣಗೊಳಿಸುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ತಿರ್ಮಾನ ಮಾಡಿದೆ. ಮುಖ್ಯಮಂತ್ರಿ ಕೆಳಗೆ ಇಳಿಸಲು ದೆಹಲಿಯಲ್ಲಿ…