Author: AIN Author

ಹುಬ್ಬಳ್ಳಿ: ವಕ್ಫ್ ಬೋಡ್೯ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತೃತ ವರದಿ ಸಿದ್ಧ ಪಡಿಸಿ ಸ್ಪೀಕರಗೆ ನೀಡಲಾಗುವುದು ಎಂದು ವಕ್ಫ್ ಬೋಡ್೯ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ ತಿಳಿಸಿದರು.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆ ತಿಳಿಸಿದ್ದಾರೆ. ಆದ್ದರಿಂದ ಅಹವಾಲು ಸ್ವೀಕರಿಸಲು ಬಂದಿದ್ದೇನೆ ಎಂದರು.ಉತ್ತರ ಕರ್ನಾಟಕ ಭಾಗದ ಸುಮಾರು ೫೦-೬೦ ವರ್ಷಗಳಿಂದ ಉಳಿಮೆ‌ ಮಾಡಿದ ಜಮೀನು, ಐತಿಹಾಸಿ ದೇವಸ್ಥಾನಗಳ ಕಂಬಳಿಸಲಾಗಿದೆ‌ ಎನ್ನಲಾಗುತ್ತಿದೆ. https://ainlivenews.com/great-job-opportunity-in-karnataka-lokayukta-apply-today/ ಆದ್ದರಿಂದ ಹುಬ್ಬಳ್ಳಿ, ವಿಜಯಪುರ, ಬೀದರ್ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ. ಸದ್ಯ ಹುಬ್ಬಳ್ಳಿಯಲ್ಲಿ ಅದ್ವೈತ್ ಪರಿಷತ ಉತ್ತರ ಕರ್ನಾಟಕ ಹಾಗೂ ರತ್ನ ಭಾರತ ರೈತ ಸಮಾಜದವರು ಮನವಿ ಸಲ್ಲಿಸಿದ್ದು, ಇದನ್ನು ಪರಿಗಣಿಸಲಾಗುವುದು ಎಂದು ತಿಳಿಸಿದರು.

Read More

ಹುಬ್ಬಳ್ಳಿ: ‘ಕರ್ನಾಟಕ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ (ಕೆಎಂಸಿ-ಆರ್‌ಐ) ಭ್ರಷ್ಟಾಚಾರ ನಡೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕಲು ನಿರ್ದೇಶಕರು ವಿಫಲರಾಗಿದ್ದಾರೆ’ ಎಂದು ಆರೋಪಿಸಿ ಆಮ್ ಆದ್ಮ ಪಕ್ಷದ ಕಾರ್ಯಕರ್ತರು ಕೆಎಂಸಿ-ಆರ್‌ಐ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ‘ಸಾರ್ವಜನಿಕರ ಆರೋಗ್ಯ ಸುಧಾರಣೆ ಹಾಗೂ ಆಸ್ಪತ್ರೆ ಅಭಿವೃದ್ಧಿಗಾಗಿ ಸರ್ಕಾರದಿಂದ ಪ್ರತಿವರ್ಷ ವಿವಿಧ ಯೋಜನೆಯಡಿ ಸಾವಿರಾರು ಕೋಟಿ ಅನುದಾನ ಬರುತ್ತದೆ. ಸಮರ್ಪಕವಾಗಿ ಬಳಕೆಯಾಗದೆ ಸೋರಿಕೆಯಾಗುತ್ತಿದೆ. ಇಲ್ಲಿ ನಡೆಯುವ ಅನೇಕ ಸಮಸ್ಯೆಗಳ ಕುರಿತು ಈ ಹಿಂದೆಯೇ ಆಡಳಿತ ಮಂಡಳಿ ನಿರ್ದೇಶಕರಿಗೆ ಮೌಖಿಕವಾಗಿ ಹಾಗೂ ಪತ್ರದ ಮುಖೇನ ತಿಳಿಸಲಾಗಿತ್ತು. ಆದರೂ ಈವರೆಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. https://ainlivenews.com/great-job-opportunity-in-karnataka-lokayukta-apply-today/ ಕೆಎಂಸಿ-ಆರ್‌ಐ ಆವರಣದಲ್ಲಿ ನಾಯಿಕೊಡೆಗಳಂತೆ ಸಾಕಷ್ಟು ಅಂಗಡಿಗಳು ತಲೆ ಎತ್ತಿವೆ. ಅವುಗಳಲ್ಲಿ ಬಹುತೇಕ ಅಂಗಡಿಗಳು ಗುತ್ತಿಗೆ ಪಡೆಯದೇ ಬಾಹಿರವಾಗಿ ವ್ಯಾಪಾರ ನಡೆಸುತ್ತಿವೆ. ಯಾವ ಕಾಗದ ಪತ್ರಗಳು ಸಹ ಅವರ ಬಳಿಯಿಲ್ಲ. ತಕ್ಷಣ ಅವುಗಳನ್ನು ತೆರವುಗೊಳಿಸಬೇಕು. ಉತ್ತರ ಕರ್ನಾಟಕ ಭಾಗದ ವಿಜಯಪುರ, ಕೊಪ್ಪಳ, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ…

Read More

ಹುಬ್ಬಳ್ಳಿ: ಪ್ರಕರಣದ ಆರೋಪದ‌ ಕುರಿತು ತನಿಖೆ ವಿಚಾರದಲ್ಲಿ ಕಾಂಗ್ರೆಸ್ ಗೊಂದು, ಬಿಜೆಪಿ ಗೊಂದು‌ ಕಾನೂನು ಇದೆಯೇ? ಮುಡಾ ಹಗರಣದ ವಿಚಾರದಲ್ಲಿ ಬಿಜೆಪಿಗರು ಆರೋಪಕ್ಕೂ‌ ಆತ್ಮಾವಲೋಕನ‌‌ ಮಾಡಿಕೊಳ್ಳಲಿ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದಲ್ಲಿ ಸಿಎಂ ರಾಜಿನಾಮೆ ನೀಡಿ ವಿಚಾರಣೆ ಎದುರಿಸಲಿ‌ ಎಂಬುದು ಬಿಜೆಪಿಗರ ಒತ್ತಾಯವಾದರೆ, ಚುನಾವಣ ಬಾಂಡ್ ಹಗರಣದಲ್ಲಿ ಪ್ರಧಾನಿ ರಾಜೀನಾಮೆ ನೀಡಬೇಕಲ್ಲ ಎಂದು ಪ್ರಶ್ನಿಸಿದರು.16,000 ಕೋಟಿ ಚುನಾವಣಾ ಬಾಂಡ್ ಹರಣದಲ್ಲಿ‌ ಆರೋಪವಲ್ಲ. ಸುಪ್ರೀಂ ಕೋರ್ಟ್ ತನ್ನ ನಿಲುವು ವ್ಯಕ್ತ‌ಪಡಿಸಿದೆ.ಇಷ್ಟಾದರು‌ ಪ್ರಧಾನಿ ರಾಜೀನಾಮೆ ನೀಡಿಲ್ಲ. https://ainlivenews.com/great-job-opportunity-in-karnataka-lokayukta-apply-today/ ಇನ್ನು‌ ಮುಡಾ ಹೆಸರಲ್ಲಿ‌‌ ಸಿಎಂ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗರಿಗೇನಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆ ಬಗ್ಗೆ ಬಿಜೆಪಿಗರಿಗೆ ಶಂಕೆ ಯಾಕೆ‌ ವ್ಯಕ್ತವಾಗುತ್ತಿದೆ ಗೊತ್ತಿಲ್ಲ. ಸಾವಿರಾರು ಕೋಟಿ ರೂ. ಗಣಿ ಹಗರಣವನ್ನು ಯಶಸ್ವಿ ತನಿಖೆ ನಡೆಸಿದ್ದು ನಮ್ಮ‌ ಲೋಕಾಯುಕ್ತ ಅಲ್ಲವೆ. ಲೋಕಾಯುಕ್ತ ಅಧಿಕಾರಿಗಳ ಮೇಲೆ ಸಿಎಂ ಪ್ರಭಾವ ಬೀರುತ್ತಾರೆ ಎನ್ನುವುದಾದರೆ ಕೇಂದ್ರ ಸಚಿವರ ವಿರುದ್ಧದ ಹಗರಣದ ಬಗ್ಗೆ ಯಾರು ತನಿಖೆ…

Read More

ಹುಬ್ಬಳ್ಳಿ: ರಾಜ್ಯದಲ್ಲಿ ಮೀತಿ ಮೀರಿ ಭ್ರಷ್ಟಾಚಾರ ತಾಂಡವವಾಡುತ್ತಿದೆ.‌ ಪೇ ಡಬಲ್ ಸಿಎಂ ಸಿದ್ಧರಾಮಯ್ಯಾ ಆಗಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅಧಿಕಾರದಲ್ಲಿದ್ದಾಗ ನಮಗೆ 40 ಪರ್ಸೇಂಟ್ ಸರ್ಕಾರ ಅಂತಾ ಹೇಳುತ್ತಾ ಇದ್ದರು. ಆದರೀಗ 40 ಶೇಕಡಾ ಅಲ್ಲಾ ಪೇ ಡಬಲ್ ಪೇಮೆಂಟ್ ಸಿಎಂ ಆಗಿದೆ. ಅಬಕಾರಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. https://ainlivenews.com/great-job-opportunity-in-karnataka-lokayukta-apply-today/ ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಶಿಗ್ಗಾವಿ ಕ್ಷೇತ್ರದ ಅಭಿವೃದ್ಧಿಯನ್ನು ಜನ ಅನುಭವಿಸಿದ್ದಾರೆ. ಕಾಂಗ್ರೆಸ್‌ನವರ ಆಲೋಚನೆಗಳಿಗೂ ಶಿಗ್ಗಾವಿ ಜನರ ಆಲೋಚನೆಗಳಿಗೂ ಬಹಳ ವ್ಯತ್ಯಾಸವಿದೆ. ಸರ್ಕಾರ ಅವರದೇ ಇದೆ. ಶಿಗ್ಗಾವಿಯಲ್ಲಿ ತಾಲೂಕು ಮಟ್ಟದಲ್ಲಿ 200 ಬೆಡ್ ಆಸ್ಪತ್ರೆ, ಟೆಕ್ಸ್ ಟೈಲ್ ಪಾರ್ಕ್…

Read More

ಹುಬ್ಬಳ್ಳಿ: ವಕ್ಫ್ ಬೋರ್ಡ್ ಹೆಸರಿನಲ್ಲಿ ಸಚಿವ ಜಮೀರ್ ಅಹ್ಮದ್ ರೈತರು ಮತ್ತು ಜನಸಾಮಾನ್ಯರ ಆಸ್ತಿ ಕಬಳಿಸುವ ಮೂಲಕ ದೇಶದ್ರೋಹಿ ಕೆಲಸ ಮಾಡುತ್ತಿದ್ದು, ಅವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸುತ್ತಿದ್ದು, ಇದು ಅತ್ಯಂತ ಗಂಭೀರವಾದ ವಿಷಯ. ಇವರಿಗೆ ಅಧಿಕಾರದ ಮದ ಏರಿದೆ. ತನ್ನ ಚಾಮರಾಜಪೇಟೆ ಕ್ಷೇತ್ರದಲ್ಲಿ 25‌ ಸಾವಿರಕ್ಕೂ ಅಧಿಕ ದೇಶದ್ರೋಹಿ ಬಾಂಗ್ಲಾ ಮುಸ್ಲಿಮರನ್ನು ಸಲಹುತ್ತಿದ್ದಾರೆ. ಈತನಿಂದಲೇ ರಾಜ್ಯದಲ್ಲಿ ಧ‌ಂಗೆ, ಗಲಭೆ ನಡೆಯುತ್ತಿವೆ. ಈ ಕಾರಣ ಈತನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು. https://ainlivenews.com/great-job-opportunity-in-karnataka-lokayukta-apply-today/ ಇಡೀ ದೇಶದಲ್ಲಿ ರೈತರ ಭೂಮಿಗಳು,‌ ಮನೆ, ಮಠ, ಸರ್ಕಾರಿ ಆಸ್ಪತ್ರೆ, ಕಚೇರಿ, ರಸ್ತೆಗಳು ವಕ್ಫ್‌ಗೆ ಹೋಗುತ್ತಿವೆ. ಇದು ದೇಶಾದ್ಯಂತ ವೈರಸ್ ರೀತಿ ಹರಡುತ್ತಿದೆ. ಗೂಳಿಯಂತೆ ನುಗ್ಗುತ್ತಿರುವುದು ನೋಡಿದರೆ ದೇಶಕ್ಕೆ ಗಂಡಾಂತರ ಸೃಷ್ಟಿಯಾಗಿದೆ. ದೇಶವನ್ನು ಇಸ್ಲಾಂ ದೇಶ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿನ ಕೆಲ‌ ಮುಸ್ಲಿಂ ಜಿಲ್ಲಾಧಿಕಾರಿ, ತಹಶಿಲ್ದಾರ,…

Read More

ಹುಬ್ಬಳ್ಳಿ: ಸಂಸತ್ತಿನ ಜಂಟಿ ಸಂಸದೀಯ ಸಮಿತಿ ರಚನೆಯಾಗಿರುವುದು ವಕ್ಫ್ ತಿದ್ದುಪಡಿ ಮಸೂದೆ ಕುರಿತು. ಆದರೆ ಇವರು ವಿಜಯಪುರಕ್ಕೆ ಬರುತ್ತಿರುವುದು ಅನಧಿಕೃತ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿ ರಚನೆ ಮಾಡುವ ಅಧಿಕಾರ ಕೇಂದ್ರ ಸರಕಾರಕ್ಕಿದೆ. ಆದರೆ ಜೆಪಿಸಿ ರಚಿಸಿರುವುದು ತಿದ್ದುಪಡಿ ಮಸೂದೆಗಾಗಿ ವಿನಃ ಇಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ಅಲ್ಲ. ಇದರಲ್ಲಿ ಯಾವುದೇ ಗೊಂದಲ ಇರಲಿಲ್ಲ. ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಬೇಕಾದರೆ ಸಮಿತಿ ಮಾಡಲಿ ಎಂದರು. https://ainlivenews.com/great-job-opportunity-in-karnataka-lokayukta-apply-today/ ಬಿಜೆಪಿಯವರಿಗೆ ಚುನಾವಣೆ ಮಾಡಲು ಯಾವುದೇ ವಿಚಾರಗಳಿಲ್ಲ. ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರೂ ಇವರು ಹೋರಾಟ ಮಾಡುತ್ತಿರುವುದು ಚುನಾವಣೆ ಹಾಗೂ ರಾಜಕೀಯಕ್ಕಾಗಿ. ಪ್ರಮೋದ್ ಮುತಾಲಿಕ್, ಬಿಜೆಪಿ ಎರಡು ಒಂದೇ. ಏಕ್ ದಿಲ್ ದೋ ಜಾನ್ ತರಹ. ಅನ್ನ ನೀಡುವ ರೈತರಿಗೆ ತೊಂದರೆ ಕೊಟ್ಟಿಲ್ಲ, ಕೊಡುವುದಿಲ್ಲ. ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಅಂತ ಗೊಂದಲ ಸೃಷ್ಟಿ ಮಾಡಿದರು. ಹೀಗಾಗಿ ವಾಪಸ್ಸು ತೆಗೆದುಕೊಂಡಿದ್ದೇವೆ ಎಂದರು

Read More

ಚಾಮರಾಜನಗರ: ಕಲುಷಿತ ನೀರು ಸೇವಿಸಿ ನಾಲ್ವರು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ 23 ನೇ ವಾರ್ಡ್ನಲ್ಲಿ ನಡೆದಿದೆ. https://ainlivenews.com/great-job-opportunity-in-karnataka-lokayukta-apply-today/ ಕೊಳ್ಳೇಗಾಲ ಪಟ್ಟಣದ  ನೂರ್ ಮೊಹಾಲ್ಲಾ 7 ನೇ ಕ್ರಾಸ್ ವಾಸಿಗಳಾದ ಆಯಾನ್ ಷರೀಪ್  (5), ರಿಜ್ವಾನ್ ಖಾನ್(19) ಐಷಾ(15) ಸಿಮ್ರಾನ್(22) ರವರುಗಳು ವಾಂತಿ ಬೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ‌. ಕುಡಿಯುವ ನೀರಿನ ತೊಂದರೆಯಾಗಿ ಅಯಾಜ್ ಷರೀಪ್, ಐಷಾ ರವರನ್ನು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ  ದೆಹಲಿ ಹಾಗೂ ಮುಂಬೈ ಮೂಲದ ಹಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. https://ainlivenews.com/great-job-opportunity-in-karnataka-lokayukta-apply-today/ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದ ದಾಳಿ ನಡೆದಿದೆ. ಕಂಪನಿಗಳ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಯುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿದೆ.

Read More

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. https://ainlivenews.com/great-job-opportunity-in-karnataka-lokayukta-apply-today/ ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ ಹಾವೇರಿಗೆ ಬಂದಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ವಶಕ್ಕೆ ಪಡೆದು ಅವರಿಗೆ ಒಪ್ಪಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.  

Read More

ಮುಂಬೈ: ಇತ್ತೀಚೆಗಷ್ಟೇ ನ್ಯೂಜಿಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ ಐಸಿಸಿ ಟೆಸ್ಟ್ ರ‍್ಯಾಕಿಂಗ್‌ನಲ್ಲಿ 6ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಇನ್ನೂ 3ನೇ ಸ್ಥಾನದಲ್ಲಿದ್ದ ಯಶಸ್ವಿ ಜೈಸ್ವಾಲ್ 4ನೇ ಸ್ಥಾನಕ್ಕೆ ಕುಸಿದು ನಿರಾಸೆ ಅನುಭವಿಸಿದರೆ, 8 ಸ್ಥಾನ ಕುಸಿತ ಕಂಡಿರುವ ವಿರಾಟ್‌ ಕೊಹ್ಲಿ ಕಳೆದ 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಟಾಪ್‌-20 ರ‍್ಯಾಂಕ್‌ನಿಂದಲೇ ಹೊರಬಿದ್ದಿದ್ದಾರೆ. https://ainlivenews.com/great-job-opportunity-in-karnataka-lokayukta-apply-today/ 750 ರೇಟಿಂಗ್ಸ್‌ ಪಡೆದಿರುವ ರಿಷಬ್‌ ಪಂತ್‌ 5 ಸ್ಥಾನಗಳಲ್ಲಿ ಏರಿಕೆ ಕಂಡು 6ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇನ್ನೂ 3ನೇ ಸ್ಥಾನದಲ್ಲಿರುವ ಯಶಸ್ವಿ ಜೈಸ್ವಾಲ್‌ 777 ರೇಟಿಂಗ್ಸ್‌ನೊಂದಿಗೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಆದ್ರೆ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿರುವ ವಿರಾಟ್‌ 655 ರೇಟಿಂಗ್ಸ್‌ನೊಂದಿಗೆ 22ನೇ ಸ್ಥಾನಕ್ಕೆ ಕುಸಿದಿದ್ದಾರೆ. ಬಿದ್ದು ಎದ್ದು ಗೆದ್ದ ಪಂತ್‌: 2022 ಡಿಸೆಂಬರ್‌ 31ರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಪಂಥ್‌ ಬದುಕುಳಿದಿದ್ದೇ ಪವಾಡವಾಗಿತ್ತು. ಅವರ ಸ್ಥಿತಿ ನೋಡಿ…

Read More