ಮುಂಬೈ: ಜೀವಂತವಾಗಿರಲು ಬಯಸಿದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಹಣ ಕೊಡಿ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದಿದೆ. ಈ ಸಂಬಂಧ ಮುಂಬೈ ಪೊಲೀಸರಿಗೆ ವಾಟ್ಸಪ್ ಸಂದೇಶ ಬಂದಿದೆ. ಒಂದು ವಾರದಲ್ಲಿ ಸಲ್ಮಾನ್ ಖಾನ್‌ಗೆ ಬಂದ ಎರಡನೇ ಕೊಲೆ ಬೆದರಿಕೆ ಇದಾಗಿದೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ. ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಕಳುಹಿಸಲಾದ ಸಂದೇಶದಲ್ಲಿ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮಾತನಾಡಿದ್ದಾರೆ ಎನ್ನಲಾಗಿದೆ. ‘ಸಲ್ಮಾನ್ ಖಾನ್ ಬದುಕಬೇಕಾದರೆ, ಅವರು ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆಯಾಚಿಸಬೇಕು. https://ainlivenews.com/be-careful-before-swallowing-dolo-650-pill-for-all-minor-diseases-see-this-story/ ಇಲ್ಲವೇ 5 ಕೋಟಿ ರೂ. ನೀಡಬೇಕು. ಹಾಗೆ ಮಾಡದಿದ್ದರೆ ನಾವು ಅವನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್ ಸಕ್ರಿಯವಾಗಿದೆ’ ಎಂದು ಬೆದರಿಕೆ ಹಾಕಿದ್ದಾರೆ. ಕಳೆದ ವಾರ, ಅ.30 ರಂದು ಮುಂಬೈ ಸಂಚಾರ ನಿಯಂತ್ರಣವು ಸಲ್ಮಾನ್ ಖಾನ್ ವಿರುದ್ಧ ಇದೇ ರೀತಿಯ ಬೆದರಿಕೆಯನ್ನು ಸ್ವೀಕರಿಸಿತ್ತು. 2 ಕೋಟಿಗೆ ಬೇಡಿಕೆಯಿತ್ತು.…
Author: AIN Author
ದಾವಣಗೆರೆ: ಭ್ರಷ್ಟ ತುಘಲಕ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ನಮ್ಮ ಹೋರಾಟ ಅಲ್ಪಸಂಖ್ಯಾತರ ವಿರುದ್ಧದ ಹೋರಾಟ ಅಲ್ಲ. ನಮ್ಮ ಹಕ್ಕುಗಳಿಗಾಗಿ, ನಮ್ಮ ರೈತರ, ಮಠ ಮಾನ್ಯಗಳ ಸರ್ಕಾರಿ ಜಮೀನುಗಳನ್ನು ಕಬಳಿಸಿದವರ ವಿರುದ್ಧದ ಹೋರಾಟವಾಗಿದೆ. ಜಮೀರ್ ಅಹಮ್ಮದ್ ಒಬ್ಬ ಮತಾಂದ. ವಸತಿ ಸಚಿವ ಎನ್ನುವುದು ಮರೆತು ಕಾನೂನು ಬಾಹಿರವಾಗಿ ಆಸ್ತಿ ಕಬಳಿಕೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. https://ainlivenews.com/be-careful-before-swallowing-dolo-650-pill-for-all-minor-diseases-see-this-story/ ಸಿಎಂ ಸಿದ್ದರಾಮಯ್ಯನವರಿಗೆ ಕುರ್ಚಿ ಕಂಟಕ ಇದೆ. ಉಪ ಚುನಾವಣೆ ಮುಗಿದ ತಕ್ಷಣ ನಿಮ್ಮನ್ನು ನಿಮ್ಮವರೇ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿ ಹೋಗಿದೆ. ಸಿಎಂ ಮೇಲೆ ಮುಡಾ ಹಗರಣದಲ್ಲಿ ಕಾನೂನು ತೂಗುಗತ್ತಿ ನೇತಾಡುತ್ತಿದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು:- ಫ್ಯಾಷನ್ ಡಿಸೈನರ್ ಸಂಧ್ಯಾ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೇಸ್ ವಾಪಸ್ ಪಡೆಯಲು ಆರೋಪಿಯಿಂದ ಹಣದ ಆಮೀಷ ಒಡ್ಡಲಾಗಿದೆ. ಎಸ್, ಕೆಂಗೇರಿ ಬಸ್ ನಿಲ್ದಾಣದ ಬಳಿ ಬೆಂಜ್ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆಯೊಬ್ಬರು ಸಾವನ್ನಪ್ಪಿದರು. ಫ್ಯಾಷನ್ ಡಿಸೈನರ್ ಆಗಿರುವ ಸಂಧ್ಯಾ ಅವರು ಬಟ್ಟೆ ಅಂಗಡಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಶನಿವಾರ ಕೆಲಸ ಮುಗಿಸಿ ರಾತ್ರಿ 7 ಗಂಟೆ ಸುಮಾರಿಗೆ ಕೆಂಗೇರಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದರು. https://ainlivenews.com/another-popular-serial-in-kannada-is-shed-reference-about/ ಈ ವೇಳೆ ಮದ್ಯದ ಮತ್ತಿನಲ್ಲಿ ಬೆಂಜ್ ಕಾರು ಚಲಾಯಿಸಿಕೊಂಡು ಬಂದ ಯುವಕ, ಸಂಧ್ಯಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರು ಸಂಧ್ಯಾ ಅವರನ್ನು 5 ಮೀಟರ್ ಉಜ್ಜಿಕೊಂಡು ಹೋಗಿದೆ. ಅಪಘಾತದ ರಭಸಕ್ಕೆ ಸಂಧ್ಯಾ ತಲೆಗೆ ತೀವ್ರ ಪೆಟ್ಟಾಗಿ, ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಅಪಘಾತದ ಬಳಿಕ ಯುವಕ ಪರಾರಿಯಾಗಲು ಯತ್ನಿಸಿದ್ದಾನೆ. ಆಗ, ಸ್ಥಳೀಯರು ಯುವಕನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಆರೋಪಿ ಕಡೆಯಿಂದ ಯಾರೊ ಒಬ್ಬರು…
ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲದೇ ಇಡೀ ದೇಶದಾದ್ಯಂತ ಸದ್ದು ಮಾಡಿದೆ. ಮೊದಲು ‘ಶಾಂತಂ ಪಾಪಂ’ ಧಾರಾವಾಹಿಯಲ್ಲಿ ದರ್ಶನ್ ಪ್ರಕರಣವನ್ನು ಹೋಲುವ ರೀತಿಯಲ್ಲಿ ಎಪಿಸೋಡ್ ಮಾಡಲಾಗಿತ್ತು. https://ainlivenews.com/there-are-cowardly-attempts-to-intimidate-indian-diplomats-pm/ ಇದೀಗ ಮತ್ತೆ ಜನಪ್ರಿಯ ಧಾರವಾಹಿಯಲ್ಲಿ ಎಪಿಸೋಡ್ ಮಾಡಲಾಗಿದೆ. ಆದಾಗ್ಯೂ ಧಾರಾವಾಹಿಗಳಲ್ಲಿ ಶೆಡ್ ಹಾಗೂ ಮೋರಿಗಳ ಪದ ಬಳಕೆ ತಪ್ಪಿಲ್ಲ. ಈಗ ಕನ್ನಡದ ಮತ್ತೊಂದು ಜನಪ್ರಿಯ ಧಾರಾವಾಹಿಯಲ್ಲಿ ಈ ರೀತಿಯ ಪದ ಬಳಕೆ ಆಗಿದೆ. ದರ್ಶನ್ ಹಾಗೂ ಅವರ ಗ್ಯಾಂಗ್ ರೇಣುಕಾಸ್ವಾಮಿಯನ್ನು ಶೆಡ್ನಲ್ಲಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಇದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿ ಮೋರಿಯ ಬದಿಯಲ್ಲಿ ಹಾಕಲಾಗಿತ್ತು. ಈಗ ‘ಅಮೃತಧಾರೆ’ ಧಾರಾವಾಹಿಯಲ್ಲೂ ಶೆಡ್ ಬಗ್ಗೆ ಉಲ್ಲೇಖ ಇದೆ. ಕಥಾ ನಾಯಕ ಗೌತಮ್ (ರಾಜೇಶ್ ನಟರಂಗ) ತಾಯಿ ಬದುಕಿದ್ದಾಳೆ ಎಂಬ ವಿಚಾರವನ್ನು ಹೇಳಲು ಧನ್ಯಾ ಎಂಬುವವಳು ಬಂದಿದ್ದಳು. ಆದರೆ, ಈ ಸತ್ಯ ಗೊತ್ತಾಗಬಾರದು ಎನ್ನುವ ಕಾರಣಕ್ಕೆ ಗೌತಮ್ ಮಲತಾಯಿ ಶಂಕುತಲಾ ದೇವಿ ಪ್ರಯತ್ನಿಸುತ್ತಾಳೆ. ಹೀಗಾಗಿ, ತಮ್ಮ ಒಡೆತನದ…
ನವದೆಹಲಿ: ಕೆನಡಾದ ಹಿಂದೂ ದೇವಾಲಯದ ಮೇಲೆ ಉದ್ದೇಶಪೂರ್ವಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ. ಕಳೆದ ವಾರ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿ ಹಿಂದೂ ದೇವಾಲಯದ ಮೇಲೆ ಕೆಲವರು ದಾಳಿ ನಡೆಸಿದ್ದರು. ಆ ದೇಶದಲ್ಲಿನ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ಟೀಕಿಸಿದ್ದಾರೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾದ ಸರ್ಕಾರವು ನ್ಯಾಯವನ್ನು ಖಚಿತಪಡಿಸುತ್ತದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ. https://ainlivenews.com/be-careful-before-swallowing-dolo-650-pill-for-all-minor-diseases-see-this-story/ ಭಾರತ ಸರ್ಕಾರವು, ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರದ ಕೃತ್ಯಗಳನ್ನು ಖಂಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯವು ಟೀಕಿಸಿತ್ತು. ಅದರ ಬೆನ್ನಲ್ಲೇ, ಪ್ರಧಾನಿಯವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಎಲ್ಲಾ ಪೂಜಾ ಸ್ಥಳಗಳನ್ನು ಸಮರ್ಪಕವಾಗಿ ರಕ್ಷಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೆನಡಾ ಆಡಳಿತ ವ್ಯವಸ್ಥೆಗೆ ಒತ್ತಾಯಿಸಿದ್ದಾರೆ. ಇಂತಹ ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದನ್ನು ನಾವು ನಿರೀಕ್ಷಿಸುತ್ತೇವೆ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಕೆನಡಾದಲ್ಲಿರುವ ತನ್ನ ನಾಗರಿಕರ…
ಬೆಂಗಳೂರು:- HD ಕುಮಾರಸ್ವಾಮಿ, ಪುತ್ರ ನಿಖಿಲ್ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲಾಗಿದ್ದು, ಕೇಂದ್ರ ಸಚಿವರೇ A1 ಆರೋಪಿ ಆಗಿದ್ದಾರೆ. https://ainlivenews.com/this-is-the-reason-for-bloating-in-girls-during-period-here-is-the-expert-information/ ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು. ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು. ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್‌ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಹಿಳೆಯರಿಗೆ ಪ್ರತಿ ತಿಂಗಳು ಮುಟ್ಟಿನ ಸಮಸ್ಯೆಯಿಂದ ನೋವು ಹಾಗೂ ಸಂಕಟಗಳು ಕಾಡುವುದು ಸಾಮಾನ್ಯ. ಮುಟ್ಟಿನ ಸಂದರ್ಭದಲ್ಲಿ ಗರ್ಭಾಶಯದ ಸ್ನಾಯುಗಳು ಸಂಕುಚಿತಗೊಂಡು, ಅಂತರ್ನಿರ್ಮಿತ ಒಳಪದರಗಳನ್ನು ಹೊರಹಾಕುವ ಕಾರ್ಯದಲ್ಲಿ ತೊಡಗಿಕೊಂಡಿರುತ್ತದೆ. ಅಂತಹ ಸಂದರ್ಭದಲ್ಲಿ ಸ್ನಾಯುಗಳು ತೀವ್ರವಾದ ಸೆಳೆತ ಮತ್ತು ನೋವಿಗೆ ಒಳಗಾಗುತ್ತದೆ. ಕೆಲವರು ಋತುಚಕ್ರದ ಸಂದರ್ಭದಲ್ಲಿ ವಾಕರಿಕೆ, ಅತಿಸಾರ, ತಲೆನೋವು ಮತ್ತು ಬೆನ್ನು ನೋವಿನಂತಹ ಸಮಸ್ಯೆಗಳಿಂದ ಜರ್ಜರಿತರಾಗುತ್ತಾರೆ. https://ainlivenews.com/do-you-sleep-less-at-night-if-so-beware-of-these-diseases/ ಇನ್ನೂ ಋತುಚಕ್ರ ಬರುವ ಮುನ್ನ ದೇಹದಲ್ಲಿ ಅನೇಕ ಹಾರ್ಮೋನ್ ಬದಲಾವಣೆಗಳು ಸಂಭವಿಸುತ್ತವೆ. ಈ ಕಾರಣದಿಂದಾಗಿ, ದೇಹದಲ್ಲಿ ಗ್ಯಾಸ್ ಮತ್ತು ಇತರ ಜಠರಗರುಳಿನ (ಜಿಐ) ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಅವಧಿಗೆ ಮುನ್ನ ಅಥವಾ ಅವಧಿಯಲ್ಲಿ ಅತಿಯಾದ ಅನಿಲ ಉತ್ಪಾದನೆಯು ಅನೇಕ ದೈಹಿಕ ಸಮಸ್ಯೆಗಳನ್ನು ಉಂಟುಮಾಡಬಹುದು. ಈ ಕಾರಣದಿಂದಾಗಿ, ಕರುಳಿನಲ್ಲಿ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಮುಟ್ಟಿನ ಮೊದಲು ಗ್ಯಾಸ್ ರಚನೆಯು PMS ನ ಸಾಮಾನ್ಯ ಲಕ್ಷಣವಾಗಿದೆ ಮತ್ತು ಸಾಮಾನ್ಯವಾಗಿ ಹಾರ್ಮೋನುಗಳ ಏರಿಳಿತಗಳಿಂದ ಉಂಟಾಗುತ್ತದೆ. ಈಸ್ಟ್ರೊಜೆನ್: ಹೆಚ್ಚುತ್ತಿರುವ ಈಸ್ಟ್ರೊಜೆನ್ ಮಟ್ಟಗಳು ನಿಮ್ಮ ಕರುಳಿನಲ್ಲಿ ಅನಿಲ, ಮಲಬದ್ಧತೆ ಮತ್ತು ಅನಿಲವನ್ನು ಉಂಟುಮಾಡಬಹುದು.…
ರಾಮನಗರ: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಅಕ್ಕೂರು ಹೊಸಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಉಪ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಭಾರೀ ಉಮೇದಿನಿಂದ ನಮ್ಮ ವಿರುದ್ಧ ದ್ವೇಷ ಸಾಧನೆ ಮಾಡುತ್ತಿದೆ. ಇದಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಕೊಡುತ್ತೇನೆ ಎಂದರು. ಎಫ್ ಐಆರ್ ಪ್ರತಿಯನ್ನು ಓದಿದೆ. ಅದರಲ್ಲಿರುವ ದೂರಿನ ಸಾರಾಂಶವನ್ನೂ ಓದಿದೆ. ಅದು ಸಂಪೂರ್ಣ ಹಾಸ್ಯಾಸ್ಪದ ಹಾಗೂ ದುರದ್ದೇಶಪೂರಿತ ಎನ್ನುವುದು ನನಗೆ ಅರ್ಥವಾಯಿತು. ಅಲ್ಲಿ ದೂರುದಾರರೇ ಹೇಳಿಕೊಂಡಿದ್ದಾರೆ, ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ಮಾಡಿ ನನ್ನ ವಿರುದ್ಧ ಆರೋಪ ಮಾಡಿದರು. ಅದಕ್ಕೆ ಕ್ರಮ ಕೈಗೊಳ್ಳಿ ಎಂದು ಕೇಳಿದ್ದಾರೆ. ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದೇನೆ ಎಂದು ಹೇಳಿಕೊಂಡಿದ್ದಾರೆ? ಬೇಕಾದರೆ ನನ್ನ ಮಾಧ್ಯಮಗೋಷ್ಠಿಯ ವಿಡಿಯೋ…
ಬೆಂಗಳೂರು:- ಕೆಲಸ ಇಲ್ಲದೇ ಖಾಲಿ ಕೂತಿರುವ ಯುವಕ, ಯುವತಿಯರಿಗೆ ಬಂಪರ್ ಅವಕಾಶ ಬಂದಿದೆ. ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಟ್ರೈನಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. https://ainlivenews.com/the-staff-committed-suicide-in-the-tahsildars-room-a-death-note-was-found-at-the-spot/ ಟ್ರೈನಿ ಇಂಜಿನಿಯರ್ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಅಧಿಸೂಚನೆಯಲ್ಲಿ 23 ಟ್ರೈನಿ ಇಂಜಿನಿಯರ್ ಮತ್ತು 54 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಒಳಗೊಂಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಬಿಇಎಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನವೆಂಬರ್ 9 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ * ಟ್ರೈನಿ ಇಂಜಿನಿಯರ್ – 23 ಹುದ್ದೆಗಳು ಪ್ರಾಜೆಕ್ಟ್ ಎಂಜಿನಿಯರ್ – 54 ಹುದ್ದೆಗಳು ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ * ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 2024 ರ ಅಧಿಸೂಚನೆ ಪ್ರಕಾರ ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಬಿ.ಎಸ್‌ಸಿ, ಬಿ.ಇ ಹಾಗೂ ಬಿ.ಟೆಕ್ ಪದವಿ ಹೊಂದಿದವರು…
ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರು ತಂಡಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ. https://ainlivenews.com/muda-scam-high-court-notice-to-cm-siddaramaiah/ ನವೆಂಬರ್ 22ನೇ ತಾರೀಕಿನಿಂದ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ಟ್ರೋಪಿ ಗೆದ್ದಿತ್ತು. 2016 ರಿಂದಲೂ ಟೀಮ್ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲುತ್ತಲೇ ಬಂದಿದೆ. ಟೀಮ್ ಇಂಡಿಯಾ ಈಗಿರೋ ಪರಿಸ್ಥಿತಿ ನೋಡಿದ್ರೆ ಗೆಲ್ಲೋದು ಕಷ್ಟವಾಗಿದೆ. ಆಸೀಸ್ ಸರಣಿಗೆ ಆಟಗಾರರನ್ನು ಸಜ್ಜುಗೊಳಿಸಲು ಸಿದ್ಧತೆ ಆರಂಭಿಸಿರೋ ಬಿಸಿಸಿಐಗೆ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರದ್ದೇ ದೊಡ್ಡ ಚಿಂತೆಯಾಗಿದೆ ಭಾರತ ಇದೇ ತಿಂಗಳು ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪಂತ್ ಬಗ್ಗೆ ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ. ಇದು ಕ್ಯಾಪ್ಟನ್ ರೋಹಿತ್ ಶರ್ಮಾ ಅವರು ಚಿಂತಿಸುವಂತೆ ಮಾಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದೊಡ್ಡ ಹಿನ್ನಡೆ…