Author: AIN Admin

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ವೇಳಾಪಟ್ಟಿಯನ್ನು  ಪಾಕಿಸ್ತಾನ ಐಸಿಸಿ ಅನುಮತಿಗಾಗಿ ತಾತ್ಕಾಲಿಕ ವೇಳಾಪಟ್ಟಿ ಸಲ್ಲಿಸಿದ್ದು, ಅಂತಿಮ ವೇಳಾಪಟ್ಟಿ ಇದೇ ವಾರ ಬಿಡುಗಡೆಯಾಗುವ ಸಾಧ್ಯತೆಯಿದೆ. ಪ್ರಸಕ್ತ ಟೂರ್ನಿಗೆ ಪಾಕಿಸ್ತಾನದ ಮುಲ್ತಾನ್‌, ರಾವಲ್ಪಿಂಡಿ ಹಾಗೂ ಲಾಹೋರ್‌ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಪಾಕ್‌, ಭಾರತದ ಎಲ್ಲ ಪಂದ್ಯಗಳನ್ನು ಲಾಹೋರ್‌ ಕ್ರೀಡಾಂಗಣದಲ್ಲಿ ನಿಗದಿಪಡಿಸಿದೆ. https://ainlivenews.com/50-subsidy-for-construction-of-shed-for-mushroom-farmers-apply-today/ ಹೈಬ್ರಿಡ್‌ ಮಾದರಿಗೆ ಒಪ್ಪಲು ಒತ್ತಡ: 2025ರ ಚಾಂಪಿಯನ್ಸ್‌ ಟ್ರೋಫಿಗಾಗಿ ಟೀಂ ಇಂಡಿಯಾ  ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಹಾಗಾಗಿ ಹೈಬ್ರಿಡ್‌ ಮಾದರಿಗೆ ಒಪ್ಪಿಕೊಳ್ಳುವಂತೆ ಐಸಿಸಿಯ ಉನ್ನತ ಅಧಿಕಾರಿಗಳು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಆದ್ರೆ ಇದ್ಯಾವುದಕ್ಕೂ ಕಿವಿಗೊಡದ ಪಿಸಿಬಿ ಈ ಬಾರಿ ಭಾರತ, ಬರಲಿ ಬರದೇ ಇರಲಿ, ಪಾಕ್‌ ನಲ್ಲೇ ಟೂರ್ನಿ ನಡೆಯಲಿದೆ ಎಂದು ಹೇಳಿದೆ. 8 ತಂಡಗಳು 2 ಗುಂಪು: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ್…

Read More

ವಾಷಿಂಗ್ಟನ್‌: ಶ್ರೀಮಂತ ಉದ್ಯಮಿಯಾಗಿರುವ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಇದರಿಂದ ಗೌತಮ್‌ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ (ಅಂದಾಜು 2238 ಕೋಟಿ ರೂ.) ಹೆಚ್ಚು ಲಂಚದ ಭರವಸೆ ನೀಡಿದ್ದಾರೆ ಎಂದು ಆರೋಪಿಸಿದೆ. ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ನ್ಯೂಯಾರ್ಕ್​ನ ಡಿಸ್ಟ್ರಿಕ್ಟ್ ಕೋರ್ಟ್​ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧ ಸಿವಿಲ್ ಚಾರ್ಜ್ ಹಾಕಿದೆ. ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿರುವುದು ರಾಯ್ಟರ್ಸ್ ಸುದ್ದಿಸಂಸ್ಥೆಯ ವರದಿಯಿಂದ ತಿಳಿದುಬಂದಿದೆ. https://ainlivenews.com/50-subsidy-for-construction-of-shed-for-mushroom-farmers-apply-today/ ನ್ಯೂಯಾರ್ಕ್‌ ಕೋರ್ಟ್‌ ಗೌತಮ್ ಅದಾನಿ ಮತ್ತು ಸಾಗರ್ ಅದಾನಿಗೆ ಬಂಧನ ವಾರೆಂಟ್‌ ಹೊರಡಿಸಿದೆ. ಆ ವಾರೆಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ವರದಿಯಾಗಿದೆ. ಗೌತಮ್ ಅದಾನಿ, ಸೈರಿಲ್ ಕೆಬನೆಸ್,  ಸಾಗರ್ ಅದಾನಿ,…

Read More

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲೂ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಬೆಂಗಳೂರಿನ ನಗರ ಯೋಜನಾ ಘಟಕದ ನಿರ್ದೇಶಕ ತಿಪ್ಪೇಸ್ವಾಮಿ ನಿವಾಸ ಹಾಗೂ ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ತಿಪ್ಪೇಸ್ವಾಮಿ ಪತ್ನಿಯ ತವರು ಮನೆಯಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದ ಮನೆಯಲ್ಲಿ ಲೋಕಾ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. https://ainlivenews.com/50-subsidy-for-construction-of-shed-for-mushroom-farmers-apply-today/ ದಾವಣಗೆರೆ ಲೋಕಾಯುಕ್ತ ಇನ್ಸ್ ಪೆಕ್ಟರ್ ಪ್ರಭು ನೇತ್ರತ್ವದಲ್ಲಿ ಶೋಧ ನಡೆಯುತ್ತಿದೆ. ಅಲ್ಲದೆ ಮಾವನ ಮನೆಯಲ್ಲಿ ತಿಪ್ಪೇಸ್ವಾಮಿ ಅವರಿಗೆ ಸೇರಿದ ಆಸ್ತಿ ದಾಖಲೆಗಳು ಏನಾದರೂ ಸಿಗಬಹುದು ಎಂದು ಲೋಕಾ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.  ಗಿರಿನಗರದಲ್ಲಿ ಇರುವ ಬಂಗಲೆಗೆ ಎಸ್‌ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಬಂಗಲೆಯಲ್ಲಿ ಪರಿಶೀಲನೆ ನಡೆಯುತ್ತಿದೆ. ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ತೂಕ ಹಾಕಲು ಲೋಕಾ ಅಧಿಕಾರಿಗಳು ತಿಪ್ಪೇಸ್ವಾಮಿ ಮನೆಗೆ ಅಕ್ಕಸಾಲಿಗನನ್ನು ಕರೆಸಿದ್ದಾರೆ.…

Read More

ಬೆಳಗಾವಿ: ಗೂಡ್ಸ್ ವಾಹನ‌ ಮತ್ತು ಕಬ್ಬು ತುಂಬಿದ ಟ್ರಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕ್ಲಿನರ್ʼಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ  ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧಾರವಾಡದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ನಿಂತಿದ್ದ ಟ್ರಾಕ್ಟರ್ ಗೆ ಹಿಂದಿನಿಂದ ಬಂದು ಗೂಡ್ಸ್ ವಾಹನ ಚಾಲಕ ಗುದ್ದಿದ್ದಾನೆ. https://ainlivenews.com/50-subsidy-for-construction-of-shed-for-mushroom-farmers-apply-today/ ಗೂಡ್ಸ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನೂ ವಾಹನದಲ್ಲಿ ಸಿಲುಕಿಕೊಂಡಿದ್ದ ಕ್ಲಿನರ್ ರವಿಕುಮಾರ ಕಾಲಿನ ಮೂಳೆ ಮುರಿತಗೊಂಡಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದ ರಭಸಕ್ಕೆ ಗೂಡ್ಸ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜು ಆಗಿದ್ದು, ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.    

Read More

ಯಾದಗಿರಿ: ಕಟಾವಿಗೆ ಬಂದಿದ್ದ 4 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಪುತ್ರ ಎಂಬ ರೈತನಿಗೆ ಸೇರಿದ ಕಬ್ಬಿನ ಬೆಳೆಯಾಗಿದೆ. ಜಮೀನಿನಲ್ಲಿರುವ ಪಂಪ್ ಸೆಟ್ ನ ವಿದ್ಯುತ್ ವೈಯರ್ ನಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ದುರ್ಘಟನೆ ನಡೆದಿದೆ. https://ainlivenews.com/50-subsidy-for-construction-of-shed-for-mushroom-farmers-apply-today/ ಬೆಂಕಿ ನಂದಿಸಲು ಗ್ರಾಮಸ್ಥರಿಂದ ಹರಸಾಹಸ ಪಟ್ಟಿದ್ದಾರೆ. ಆದ್ರೆ ಬೆಂಕಿ‌ ನಂದಿಸುವಷ್ಟರಲ್ಲಿ ಕಬ್ಬಿನ ಬೆಳೆ ಸುಟ್ಟು ಕರಕಲಾಗಿದೆ. ಇನ್ನೂ ಬೆಳೆ ಕಳೆದುಕೊಂಡು ಅನ್ನದಾತ‌ ಶಿವಪುತ್ರಪ್ಪ ಕಂಗಲಾಗಿದ್ದು, ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

Read More

ಬೆಳಗಾವಿ: ಬುಲೇರೋ ವಾಹನ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಮಹೇಶ ಕರಿಕಟ್ಟಿ (32) ಮೃತ ದುರ್ಧೈವಿಯಾಗಿದ್ದು, https://ainlivenews.com/50-subsidy-for-construction-of-shed-for-mushroom-farmers-apply-today/ ನಿನ್ನೆ ತಡರಾತ್ರಿ ಬೈಕ್ ಮೇಲೆ ಸಂಚರಿಸುವಾಗ ಬುಲೇರೋ ವಾಹನ ಓವರ್ ಟೇಕ್ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ವಾಹನ ಚಕ್ರಕ್ಕೆ ಸಿಲುಕಿದ ಬೈಕ್ ಸವಾರನ ಮೃತದೇಹ ಚಿದ್ರ ಚಿದ್ರವಾಗಿದ್ದು, ಬೈಲಹೊಂಗಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.    

Read More

ಚೆನ್ನೈ: ಕಳ್ಳಭಟ್ಟಿ ಸಾರಾಯಿ ಸೇವಿಸಿ 68 ಜನ ಮಂದಿ ಮೃತಪಟ್ಟ ಘಟನೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಿಂದ ವರದಿಯಾಗಿತ್ತು. ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯದ ಪರಿಣಾಮದಿಂದ ಆಗಿರುವ ದುರಂತವಾಗಿದೆ ಎಂದು ಬಿಜೆಪಿ ಮುಖಂಡ ಕೆ ಅಣ್ಣಾಮಲೈ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಅಕ್ರಮ ಮದ್ಯ ದುರಂತ ಪ್ರಕರಣವನ್ನು ಕೇಂದ್ರ ತನಿಖಾ ದಳದ ನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಡಿಎಂಕೆ ಸರ್ಕಾರ ಈ ಪ್ರಕರಣವನ್ನು ಈಗಾಗಲೇ ಸಿಐಡಿಯ ಕ್ರೈಂ ಬ್ರಾಂಚ್ ವಿಭಾಗಕ್ಕೆ ವರ್ಗಾಯಿಸಿತ್ತು. ಇನ್ನೂ ಸಿಬಿಐ ತನಿಖೆಗೆ ಈ ಪ್ರಕರಣದ ವರ್ಗಾವಣೆಯನ್ನು ವಿರೋಧಿಸಿತ್ತು. ಈ ಸಂಬಂಧ ಐಎಡಿಎಂಕೆ, ಪಿಎಂಕೆ ಮತ್ತು ಬಿಜೆಪಿ ನ್ಯಾಯಾಲಯದ ಮೊರೆ ಹೋಗಿದ್ದವು. ಇದೀಗ ಆಡಳಿತಾರೂಢ ಡಿಎಂಕೆಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. https://ainlivenews.com/50-subsidy-for-construction-of-shed-for-mushroom-farmers-apply-today/ ಪ್ರಕರಣ ಸಂಬಂಧ 24 ಜನರನ್ನು ಬಂಧಿಸಲಾಗಿದೆ. ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಎಸ್ಪಿಯನ್ನು ಅಮಾನತು ಮಾಡಲಾಗಿದೆ. ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ನ್ಯಾಯಾಲಯದಲ್ಲಿ ಸರ್ಕಾರದ ಪರ ವಕೀಲರು ವಾದ…

Read More

ಬೆಂಗಳೂರು: ರಾಜ್ಯ ಸರ್ಕಾರದ ಅಸಮರ್ಥ, ಆ್ಯಕ್ಟೀವ್ ಇಲ್ಲದ ಸಚಿವರನ್ನ ಸಂಪುಟದಿಂದ ಕೈಬಿಡುವ ಚಿಂತನೆ ನಡೆದಿದೆ.ಆರೇಳು ಮಂದಿ ಸಚಿವರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಚರ್ಚೆ ಜೋರಾಗ್ತಿದೆ.ಜನವರಿಯಲ್ಲಿ ಬಹುತೇಕ ಸಂಪುಟ ಪುನಾರಚನೆ ಮಾಡುವ ಚಿಂತನೆ ಸಿಎಂ ಮುಂದಿದೆ ಎನ್ನಲಾಗ್ತಿದೆ.ಜೊತೆಗೆ ಹೈಕಮಾಂಡ್ ಮಟ್ಟದಲ್ಲೂ ಇದು ಮುನ್ನೆಲೆಗೆ ಬಂದಿದೆ. ಯಸ್..ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸ್ತಿದೆ.ಇದೇ ವೇಳೆ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡುವ ಲಕ್ಷಣಗಳು ಶುರುವಾಗಿವೆ.ಡಿಸೆಂಬರ್ ನಂತರ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಅಂತ ಹೇಳಲಾಗ್ತಿದೆ.ಮೊನ್ನೆ ನಡೆದ ಹಿರಿಯ‌ ಸಚಿವರ ಸಭೆಯಲ್ಲೂ ಈ ವಿಚಾರ ಪ್ರಸ್ತಾಪ ಆಗಿದ್ದು, ಹಿರಿಯ ಸಚಿವರಿಗೆ ಈ ಬಗ್ಗೆ ಸುಳುವು ನೀಡಿದ್ದಾರೆಂಬ ಮಾತಿದೆ.. ಆರೇಳು ಸಚಿವರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಸಿಎಂ ಕೂಡ ಮುಕ್ತಮನಸ್ಸಿನಲ್ಲಿದ್ದಾರೆ.ಹೈಕಮಾಂಡ್ ಕೂಡ ಈ ಬಗ್ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗ್ತಿದೆ. https://ainlivenews.com/50-subsidy-for-construction-of-shed-for-mushroom-farmers-apply-today/ ಇನ್ನು ಸಂಪುಟ ಪುನಾರಚನೆ ಮಾಡಿ ಸುಮಾರು ಆರೇಳು ಸಚಿವರನ್ನ ಕೈಬಿಡೋಕೆ ಸಿಎಂ ಚಿಂತಿಸಿದ್ದಾರೆ.ಮೂಡಾ ಹಗರಣ,ವಕ್ಫ್ ವಿವಾದ,ವಾಲ್ಮೀಕಿ ಹಗರಣಗಳವೇಳೆ…

Read More

ಕೋಲಾರ : ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಾವಯವ ಉತ್ಪನ್ನಗಳ ಹಾಗೂ ಸಿರಿಧಾನ್ಯಗಳ ಕುರಿತು ರೈತರಿಗೆ ಮತ್ತು ಗ್ರಾಹಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಂಗವಾಗಿ ‘ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ’ ಜಾಗೃತಿ ಜಾಥಾ ನಗರದಲ್ಲಿ ಇಂದು ನಡೆಯಿತು. ನಗರದ ಜ್ಯುನಿಯರ್ ಕಾಲೇಜು ಆವರಣದಿಂದ ಆರಂಭವಾದ ನಡಿಗೆ ಬಂಗಾರಪೇಟೆ ವೃತ್ತ ಮಾರ್ಗವಾಗಿ ಪರಿವಿಕ್ಷಣ ಮಂದಿರ ತಲುಪಿತು. ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಆಕ್ರಂಪಾಷ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಸಿರಿಧಾನ್ಯದ ಮಹತ್ವ ಅರಿವು ಹೆಚ್ಚಾಗುತ್ತಿದೆ. ಭಾರತ ಸಿರಿಧಾನ್ಯಗಳ ತವರೂರಾಗಿದೆ. ಜಗತ್ತಿನಲ್ಲಿ ಬೆಳೆಯುವ ಸಿರಿಧಾನ್ಯಗಳ ಪೈಕಿ ಶೇ. 42 ರಷ್ಟು ಸಿರಿಧಾನ್ಯವನ್ನು ನಮ್ಮ ದೇಶದಲ್ಲೇ ಬೆಳೆಯ ಲಾಗುತ್ತಿದ್ದು, ಸಿರಿಧಾನ್ಯ ಬೆಳೆಯುವಲ್ಲಿ ನಮ್ಮ ರಾಜ್ಯ ಮುಂದಿದೆ ಎಂದರು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಿರಿಧಾನ್ಯ ಅತ್ಯುತ್ತಮ ಔಷಧಿ. ಬಹಳ ಕಡಿಮೆ ನೀರಿನಲ್ಲೂ ಸಿರಿಧಾನ್ಯ ಬೆಳೆಯ ಬಹುದಾಗಿದೆ. ರೋಗಮುಕ್ತ ಜೀವನಕ್ಕಾಗಿ ಎಲ್ಲರೂ ಸಿರಿ ಧಾನ್ಯಗಳ ಬಳಕೆಗೆ ಮುಂದಾಗಬೇಕು. ಸಿರಿಧಾನ್ಯಗಳು ಭೂಮಿಗೂ…

Read More

ಚಿತ್ರದುರ್ಗ:  ಎತ್ತುಗಳ ಮೆರವಣಿಗೆ ಮಾಡುವಾಗ ಎತ್ತಿನ ಮೇಲಿದ್ದ ಅಂಬೇಡ್ಕರ್ ಫೋಟೋಗೆ ಕಲ್ಲೆಸೆದು ಯವಕನೋರ್ವ  ಕಿಡುಗೇಡಿತನ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸೊಂಡೆಕೆರೆ ಗ್ರಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ ಮಾಡುತ್ತಿದ್ದರು. ಈ ವೇಳೆ ಎತ್ತುಗಳಿಗೆ ಅಲಂಕಾರ ಮಾಡಿ ಮೆರವಣಿಗೆ ಮಾಡುವುದು ವಾಡಿಕೆ. ಇದೇ ವೇಳೆ ಎತ್ತಿನ ಮೈ ಮೇಲಿಟ್ಟಿದ್ದ ಅಂಬೇಡ್ಕರ್ ಫೋಟೋಗೆ ಗ್ರಾಮದ ಕಿಡುಗೇಡಿ ಯುವಕ ಕಲ್ಲೆಸೆದು ವಿರೂಪ ಮಾಡಿದ್ದಾನೆ. https://ainlivenews.com/family-dispute-sister-in-law-fights-over-her-own-marriage/ ಇದನ್ನು ಕಂಡ ಇನ್ನುಳಿದ ಗ್ರಾಮದ ಜನರು ಹಿಡಿದು ಗಲಾಟೆ ಮಾಡಿದ್ದಾರೆ. ಇದರಿಂದ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿ ಆಗಿತ್ತು. ಯುವಕನ ನಡೆಗೆ ಸಿಟ್ಟಿಗೆದ್ದ ಅಂಬೇಡ್ಕರ್ ಯುವಕ ಸಂಘದ ಯುವಕರು ಅವನಿಗೆ ಕ್ಲಾಸ್ ತೆಗೆದುಕೊಂಡು  ಪ್ರಶ್ನೆ ಮಾಡಿ  ಕ್ರಮಕ್ಕೆ ಆಗ್ರಹಿಸಿದ್ದಾರೆ.

Read More