Author: AIN Admin

ಗದಗ: ಲಾರಿ ಹರಿದು ಹತ್ತಾರು ಕುರಿಗಳು ಸಾವನ್ನಪ್ಪಿ, 20 ಕ್ಕೂ ಹೆಚ್ಚು ಕುರಿಗಳಿಗೆ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಟೋಲ್ ಗೇಟ್ ಬಳಿ ರಾತ್ರಿ ನಡೆದಿದೆ. ಕಕ್ಕೂರು ಗ್ರಾಮದ ಮಂಜುನಾಥ್ ದಳವಾಯಿ ಎಂಬುವರಿಗೆ ಸೇರಿದ ಕುರಿಗಲಾಗಿದ್ದು, ಮೈಲಾರಲಿಂಗೇಶ್ವರ ಶುಗರ್ಸ್ ಫ್ಯಾಕ್ಟರಿಯಿಂದ ಮುಂಡರಗಿ ಪಟ್ಟಣದತ್ತ ಲಾರಿ ಬರುತ್ತಿತ್ತು‌ ಎನ್ನಲಾಗಿದೆ. https://ainlivenews.com/you-can-get-health-coverage-of-rs-5-lakh-with-just-this-one-card-apply-like-this/ ರಾತ್ರಿಯಾಗಿದ್ದರಿಂದ ವೇಗವಾಗಿ ಬಂದ ಲಾರಿ ಕುರಿಗಳ ಮೇಲೆ, ಹರಿದು ಎದುರಿನಲ್ಲಿದ್ದ ಮತ್ತೊಂದು ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ತಮಿಳನಾಡು ಮೂಲದ‌ ಲಾರಿ ಹಾಗೂ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.  

Read More

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು ಸಾದಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ನಂ.29 ಕ್ಕೆ ನ.23 ರಂದು ಮತದಾನ ನಡೆದಿತ್ತು. https://ainlivenews.com/you-can-get-health-coverage-of-rs-5-lakh-with-just-this-one-card-apply-like-this/ ಇಂದು ಮತ ಎಣಿಕೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಭಾಗಪ್ಪ ಏಳಗಂಟಿ 1,759 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಗಿರೀಶ್​ 2,754 ಮತಗಳನ್ನು ಪಡೆದು, 995 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಫಲಿತಾಂಶ ಬರುತ್ತಲೇ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮಾಡಿದರು.

Read More

ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪ ಚುನಾವಣೆ ಸರ್ಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ. ಕಾಂಗ್ರೆಸ್ ನವರು ಇದು ಸರ್ಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅವಗತ್ಯವಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಆಗಿಲ್ಲ ಅಂತ ಭ್ರಮ ನಿರಸನಗೊಂಡಿದ್ದಾರೆ. ಈ ಚುನವಣೆ ಫಲಿತಾಂಶ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಿದರು. https://ainlivenews.com/these-habits-of-women-are-the-reason-for-the-destruction-of-the-entire-family/ ಇನ್ನು ಗ್ಯಾರೆಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ತಮ್ಮ ಪಕ್ಷದ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ಸಿದ್ದತೆ ಮಾಡಿಕೊಳ್ಳದೇ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಉಡುಪಿ: ಸೂರ್ಯ ಅಭಿನಯದ  ಬಿಗ್ ಬಜೆಟ್ ಸಿನಿಮಾ ‘ಕಂಗುವ’ ಹೀನಾಯ ಸೋಲು ಕಂಡ ಬೆನ್ನಲ್ಲೇ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, https://ainlivenews.com/these-habits-of-women-are-the-reason-for-the-destruction-of-the-entire-family/ ದೇವರ ದರ್ಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ವೇಳೆ, ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅಂದಹಾಗೆ, ಸೂರ್ಯ ನಟನೆಯ ‘ಕಂಗುವ’ ಸಿನಿಮಾ ನ.14ರಂದು ರಿಲೀಸ್ ಆಗಿತ್ತು.

Read More

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ‌ ಮೆಟ್ರೋ ಬ್ರಿಡ್ಜ್ ನ ಸಿಮಂಟ್ ಬ್ರಿಕ್ಸ್ ಬಿದ್ದು ಕಾರ್ ನ ಗ್ಲಾಸ್ ಡ್ಯಾಮೇಜ್ ಆಗಿರುವ ಘಟನೆ ಮೈಸೂರು ರಸ್ತೆಯ ಪಿಲ್ಲರ್ ನಂಬರ್ ೩೯೩ ಬಳಿ ನಡೆದಿದೆ. ಮೈಸೂರು ರಸ್ತೆಯ ಬಳಿ ಮೆಟ್ರೋ ಬ್ರಿಡ್ಜ್‌ನಿಂದ ಸಿಮೆಂಟಿನ ಕಲ್ಲು ಕಳಚಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಬಿದ್ದ ಪರಿಣಾಮ ಕಾರಿನ ಮಾಲೀಕ ನಮ್ಮ ಮೆಟ್ರೋ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕದ ಬಾಗಲೂರಿನಿಂದ ಮೈಸೂರಿಗೆ ಕಾರ್ಯಕ್ರಮಕ್ಕೆ ನವೀನ್ ರಾಜ್ ಮತ್ತು ಕುಟುಂಬ ಹೋಗುತ್ತಿದ್ದಾಗ ಮೈಸೂರು ರಸ್ತೆಯ ಪಿಲ್ಲರ್ ನಂಬರ್ 393 ಬಳಿ ಈ ಘಟನೆ ನಡೆದಿದೆ. ಮೆಟ್ರೋ ರೈಲು ಹೋಗುತ್ತಿದ್ದಂತೆ ಅಲ್ಲಿನ ವೈಬ್ರೇಷನ್‌ಗೆ ಸಿಮೆಂಟ್ ಕಳಚಿ ಬಿದ್ದಿದೆ. ಖರೀದಿಸಿ ಒಂದು ತಿಂಗಳು ಕೂಡ ಆಗದ ಎಸ್‌ಯುವಿ 700 ಕಾರಿನ ಮುಂದಿನ ಗ್ಲಾಸ್ ಒಡೆದಿದ್ದು, https://ainlivenews.com/these-habits-of-women-are-the-reason-for-the-destruction-of-the-entire-family/ ಕಾರಿನ ಮೇಲ್ಭಾಗ ಹಾನಿಯಾಗಿದೆ. ಕಲ್ಲು ಬಿದ್ದ ರಭಸಕ್ಕೆ ಕಾರಿನಲ್ಲಿದ್ದವರು ಭಯಗೊಂಡಿದ್ದಾದರೂ ಪಾರಾಗಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡುತ್ತಿದ್ದಂತೆ, ಮೆಟ್ರೋ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಘಟನೆ…

Read More

ಬೀದರ್: ಬೀದರ ಔರಾದ ರಾಷ್ಟ್ರೀಯ ಹೆದ್ದಾರಿ ‘161ಎ ‘ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ.. ಘಟನೆಯಲ್ಲಿ ಜೀರ್ಗಾ(ಬಿ) ಗ್ರಾಮದ ವಿದ್ಯಾರ್ಥಿ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ  ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. https://ainlivenews.com/these-habits-of-women-are-the-reason-for-the-destruction-of-the-entire-family/ ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದಿದ್ದಾರೆ. ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.  

Read More

ಬೆಂಗಳೂರು ನ 26: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ವ್ಯಂಗ್ಯವಾಡಿದರು.ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ ಎಂದು ಸಿಎಂ ತಿಳಿಸಿದರು. RSS ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ. ಪೇಜಾವರ ಶ್ರೀಗಳು ಸಂವಿಧಾನ ಬಗ್ಗೆ ಆಡಿದ ಮಾತನ್ನು ಪ್ರಸ್ತಾಪಿಸಿದ ಸಿಎಂ, ಆ ರೀತಿ ಹೇಳುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು. https://ainlivenews.com/these-habits-of-women-are-the-reason-for-the-destruction-of-the-entire-family/ ಇಡೀ ದೇಶದ ಪಾಲಿಗೆ ಇಂದು ಸಂವಿಧಾನ ದಿನ ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ, ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ ಎಂದು…

Read More

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಂಪಿಗೆಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪಶ್ಚಿಮ ಬಂಗಾಳದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದಿದ್ದ ಆರೋಪಿ‌ ಸಂಪಿಗೆಹಳ್ಳಿ ಮುಖ್ಯರಸ್ತೆಯ ನೀಲಗಿರಿ ತೋಪಿನ ಮುಂಭಾಗದ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ. https://ainlivenews.com/these-habits-of-women-are-the-reason-for-the-destruction-of-the-entire-family/ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಸಂಪಿಗೆಹಳ್ಳಿ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿತನಿಂದ ಒಟ್ಟು 2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆ.

Read More

ಬೆಂಗಳೂರು: ರೆಬಲ್ಸ್ ನಾಯಕರ ತಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಕ್ಫ್ ವಿರುದ್ಧ ಪ್ರತ್ಯೇಕ ಹೋರಾಟ ಆರಂಭಿಸಿದೆ.ಇದೀಗ ಯತ್ನಾಳ್ ಪ್ರತ್ಯೇಕ ಹೋರಾಟವನ್ನು ಕೈಬಿಡುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ ಬಿಟ್ಟು ನಮ್ಮ ಜೊತೆ ಕೈಜೋಡಿಸಿ ಎಂದು ವಿಜಯೇಂದ್ರ ವಿನಂತಿ ಮಾಡಿಕೊಂಡರು. ಆದರೆ, ಅವರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಈಗಲಾದರೂ ಜಾಗೃತರಾಗಿ, ಅವರೆಲ್ಲರೂ ಸೇರಿ ಪಕ್ಷವನ್ನು ಬಲಪಡಿಸಲು ಸಹಕಾರ ಕೊಡಬೇಕೆಂದು ನಾನು ವಿನಂತಿ ಮಾಡುತ್ತೇನೆ. https://ainlivenews.com/these-habits-of-women-are-the-reason-for-the-destruction-of-the-entire-family/ ನಾವು ಮನವಿ ಮಾಡುತ್ತೇವೆ. ಆದರೆ ಉಳಿದದ್ದು ಅವರಿಗೆ, ಕೇಂದ್ರ ನಾಯಕರಿಗೆ ಬಿಟ್ಟಿದ್ದು. ಇದೆಲ್ಲ ಹೈಕಮಾಂಡ್ ಗಮನಕ್ಕೂ ಬಂದಿದೆ. ಏನು ಮಾಡುತ್ತಾರೆ ನೋಡೋಣ ಎಂದು ಯತ್ನಾಳ್ ಪ್ರತ್ಯೇಕ ಹೋರಾಟವನ್ನು ಕೈಬಿಡುವಂತೆ ಮನವಿ ಮಾಡಿಕೊಂಡರು. ಇನ್ನೂ ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಏನು ಕೊರತೆ ಆಗಿದೆ ಎನ್ನುವ ಕುರಿತು ಎಲ್ಲರೂ…

Read More

ಬೆಂಗಳೂರು: ರಾತ್ರೋ ರಾತ್ರಿ ಬೂದಿಗೆರೆ ಕೆರೆ ನೀರು ಮುಳುಗಡೆ ಪ್ರದೇಶ ಒತ್ತುವರಿ ಮಾಡಿದ್ದವರ ವಿರುದ್ಧ ಸುದ್ದಿ ಪ್ರಸಾರ ಮಾಡಿದ್ದ ಬೆನ್ನಲ್ಲೇ ಅಧಿಕಾರಿಗಳು ಎಚ್ಛೆತ್ತುಕೊಂಡಿದ್ದಾರೆ …ಅಂದಹಾಗೆ  ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬೂದಿಗೆರೆ ಯ ಕೆರೆ ಯಲ್ಲಿ ರಿಯಲ್ ಎಸ್ಟೇಟ್ ಮಾಫಿಯ ದ ಭಾಸ್ಕರ್ ರೆಡ್ಡಿ ಅಂಡ್ ಪಟಾಲಂ ನಿಂದ  ಸುಮಾರು ಎರಡು ಎಕರೆ ಕೆರೆ ನೀರು ಮುಳುಗಡೆ ಪ್ರದೇಶವನ್ನು ಒತ್ತುವರಿ ಮಾಡಲಾಗಿತ್ತು, https://ainlivenews.com/these-habits-of-women-are-the-reason-for-the-destruction-of-the-entire-family/ ನಮ್ಮಲ್ಲಿ ಸುದ್ದಿ ಪ್ರಚಾರ ವಾಗಿತ್ತಿದ್ದಂತೆ ಬೆಳ್ಳಂ ಬೆಳೆಗ್ಗೆ ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ನೇತೃತ್ವದಲ್ಲಿ ಕಂದಾಯ, ಸರ್ವೇ ಹಾಗೂ ಪೋಲೀಸ್ ಇಲಾಖೆಯ ಜಂಟಿ ಕಾರ್ಯಚರಣೆಯಿಂದ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ಮತ್ತು ತೆಂಗಿನ ಮರಗಳನ್ನು ತೆರವು ಮಾಡಿದ್ದಾರೆ ಹಾಗೂ ಒತ್ತುವರಿದಾರರ ವಿರುದ್ಧ ಎಫ್ಐಆರ್ ಸಹ ದಾಖಲು ಮಾಡಿದ್ದಾರೆ..    

Read More