ಬೆಂಗಳೂರು: ರೆಬಲ್ಸ್ ನಾಯಕರ ತಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಕ್ಫ್ ವಿರುದ್ಧ ಪ್ರತ್ಯೇಕ ಹೋರಾಟ ಆರಂಭಿಸಿದೆ.ಇದೀಗ ಯತ್ನಾಳ್ ಪ್ರತ್ಯೇಕ ಹೋರಾಟವನ್ನು ಕೈಬಿಡುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ ಬಿಟ್ಟು ನಮ್ಮ ಜೊತೆ ಕೈಜೋಡಿಸಿ ಎಂದು ವಿಜಯೇಂದ್ರ ವಿನಂತಿ ಮಾಡಿಕೊಂಡರು. ಆದರೆ, ಅವರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಈಗಲಾದರೂ ಜಾಗೃತರಾಗಿ, ಅವರೆಲ್ಲರೂ ಸೇರಿ ಪಕ್ಷವನ್ನು ಬಲಪಡಿಸಲು ಸಹಕಾರ ಕೊಡಬೇಕೆಂದು ನಾನು ವಿನಂತಿ ಮಾಡುತ್ತೇನೆ. https://ainlivenews.com/these-habits-of-women-are-the-reason-for-the-destruction-of-the-entire-family/ ನಾವು ಮನವಿ ಮಾಡುತ್ತೇವೆ. ಆದರೆ ಉಳಿದದ್ದು ಅವರಿಗೆ, ಕೇಂದ್ರ ನಾಯಕರಿಗೆ ಬಿಟ್ಟಿದ್ದು. ಇದೆಲ್ಲ ಹೈಕಮಾಂಡ್ ಗಮನಕ್ಕೂ ಬಂದಿದೆ. ಏನು ಮಾಡುತ್ತಾರೆ ನೋಡೋಣ ಎಂದು ಯತ್ನಾಳ್ ಪ್ರತ್ಯೇಕ ಹೋರಾಟವನ್ನು ಕೈಬಿಡುವಂತೆ ಮನವಿ ಮಾಡಿಕೊಂಡರು. ಇನ್ನೂ ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಏನು ಕೊರತೆ ಆಗಿದೆ ಎನ್ನುವ ಕುರಿತು ಎಲ್ಲರೂ…
Author: AIN Admin
ಬೆಂಗಳೂರು: ರಾತ್ರೋ ರಾತ್ರಿ ಬೂದಿಗೆರೆ ಕೆರೆ ನೀರು ಮುಳುಗಡೆ ಪ್ರದೇಶ ಒತ್ತುವರಿ ಮಾಡಿದ್ದವರ ವಿರುದ್ಧ ಸುದ್ದಿ ಪ್ರಸಾರ ಮಾಡಿದ್ದ ಬೆನ್ನಲ್ಲೇ ಅಧಿಕಾರಿಗಳು ಎಚ್ಛೆತ್ತುಕೊಂಡಿದ್ದಾರೆ …ಅಂದಹಾಗೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬೂದಿಗೆರೆ ಯ ಕೆರೆ ಯಲ್ಲಿ ರಿಯಲ್ ಎಸ್ಟೇಟ್ ಮಾಫಿಯ ದ ಭಾಸ್ಕರ್ ರೆಡ್ಡಿ ಅಂಡ್ ಪಟಾಲಂ ನಿಂದ ಸುಮಾರು ಎರಡು ಎಕರೆ ಕೆರೆ ನೀರು ಮುಳುಗಡೆ ಪ್ರದೇಶವನ್ನು ಒತ್ತುವರಿ ಮಾಡಲಾಗಿತ್ತು, https://ainlivenews.com/these-habits-of-women-are-the-reason-for-the-destruction-of-the-entire-family/ ನಮ್ಮಲ್ಲಿ ಸುದ್ದಿ ಪ್ರಚಾರ ವಾಗಿತ್ತಿದ್ದಂತೆ ಬೆಳ್ಳಂ ಬೆಳೆಗ್ಗೆ ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ನೇತೃತ್ವದಲ್ಲಿ ಕಂದಾಯ, ಸರ್ವೇ ಹಾಗೂ ಪೋಲೀಸ್ ಇಲಾಖೆಯ ಜಂಟಿ ಕಾರ್ಯಚರಣೆಯಿಂದ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ಮತ್ತು ತೆಂಗಿನ ಮರಗಳನ್ನು ತೆರವು ಮಾಡಿದ್ದಾರೆ ಹಾಗೂ ಒತ್ತುವರಿದಾರರ ವಿರುದ್ಧ ಎಫ್ಐಆರ್ ಸಹ ದಾಖಲು ಮಾಡಿದ್ದಾರೆ..
ಮುಂಬೈ: ವಿಧಾನಸಭಾ ಫಲಿತಾಂಶದ ಬಳಿಕ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸುವ ವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದರು. ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಶಿಂಧೆ ರಾಜಭವನಕ್ಕೆ ಭೇಟಿ ರಾಜೀನಾಮೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದೆ. ಬಿಜೆಪಿ, https://ainlivenews.com/these-habits-of-women-are-the-reason-for-the-destruction-of-the-entire-family/ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟವು 288 ಸದಸ್ಯ ಬಲದ ವಿಧಾನಸಭೆಯಲ್ಲಿ 230 ಸ್ಥಾನಗಳೊಂದಿಗೆ ಭಾರಿ ಗೆಲುವು ಸಾಧಿಸಿದೆ. ಆದರೂ, ಮುಂದಿನ ಸಿಎಂ ಯಾರಾಗಬೇಕೆಂಬುದರ ಬಗ್ಗೆ ಆಡಳಿತಾರೂಢ ಒಕ್ಕೂಟದ ನಾಯಕರಲ್ಲಿ ಇದುವರೆಗೆ ಒಮ್ಮತ ಮೂಡಿಲ್ಲ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇಬರ್ಬರವಾಗಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಂದಿರಾನಗರ ರಾಯಲ್ ಇನ್ ಅಪಾರ್ಟ್ಮೆಂಟ್ ಅಲ್ಲಿ ಬರ್ಬರ ಹತ್ಯೆಯಾಗಿದೆ. ಅಸ್ಸಾಂ ಮೂಲದ ಮಾಯಾ ಗೊಗಾಯ್ ಕೊಲೆಯಾದ ಯುವತಿ ಯುವತಿಯಾಗಿದ್ದು, ಆರವ್ ಅನಾಯ್ ಕೊಲೆ ಆರೋಪಿಯಾಗಿದ್ದಾನೆ. https://ainlivenews.com/these-habits-of-women-are-the-reason-for-the-destruction-of-the-entire-family/ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಮೂಲತಃ ಕೇರಳದವನಾದ ಆರೋಪಿ ದಿ ರಾಯಲ್ ಲಿವಿನ್ಸ್ ನಲ್ಲಿ ಸರ್ವೀಸ್ ಅಪಾರ್ಟ್ಮೆಂಟ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ಈ ಘಟನೆ ಸಂಬಂಧ ಸ್ಥಳಕ್ಕೆ ಇಂದಿರಾ ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ ಸಪ್ಲೈ ಮಾಡುತ್ತಿದ್ದ ನೈಜೀರಿಯನ್ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ಕೌಸಾಕಿ ಜೂಲ್ಸ್ ಎನ್ ಹುಸೇನ್ ಬಂಧಿತ ಆರೋಪಿಯಾಗಿದ್ದು, https://ainlivenews.com/these-habits-of-women-are-the-reason-for-the-destruction-of-the-entire-family/ ಬೆಂಗಳೂರಿನಲ್ಲಿ ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್ ಗೆ 15000 ಸಾವಿರಕ್ಕೆ ಎಂಬಂತೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 515 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತೆಲಂಗಾಣ: ಪೂರಿ ಎಂದರೆ ತುಂಬಾ ಜನರಿಗೆ ಇಷ್ಟವಾದ ಉಪಾಹಾರ. ಬಹುತೇಕ ಎಲ್ಲಾ ಮಕ್ಕಳು ಬೆಳಗ್ಗೆ ಏನು ತಿಂಡಿ ಬೇಕು ಎಂದು ಕೇಳಿದ್ರೆ ಪೂರಿನೇ ಬೇಕು ಅಂತಾ ಹೇಳುತ್ತಾರೆ. ಹೋಟೆಲ್‍ಗಳಿಗೆ ಹೋದರೂ ಪೂರಿ ಬೇಕು ಅಂತಾ ಹಟ ಹಿಡಿಯುತ್ತಾರೆ. ಅದೇ ರೀತಿ ಇಲ್ಲೊಬ್ಬ ಬಾಲಕ ಇಷ್ಟ ಪಟ್ಟು ಪೂರಿ ಸೇವಿಸಲು ಹೊಗಿ ಮಸಣ ಸೇರಿರುವ ಘಟನೆ ತೆಲಂಗಾಣದ ಸಿಕಂದರಾಬಾದ್‌ನ ಶಾಲೆಯೊಂದರಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ. https://ainlivenews.com/why-is-november-26-celebrated-as-constitution-day-its-history-here-is-the-information/ ಸಿಕಂದರಾಬಾದ್‌ನ ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುವಾಗ ಈ ಘಟನೆ ಸಂಭವಿಸಿದೆ. ಶಾಲೆಯಲ್ಲಿ ಮಧ್ಯಾಹ್ನ ಊಟದ ವೇಳೆ ಮೂರು ಪೂರಿ ಒಟ್ಟಿಗೆ ತಿಂದ ಪರಿಣಾಮ ಬಾಲಕನಿಗೆ ಉಸಿರುಗಟ್ಟಿ ನೆಲಕ್ಕೆ ಕುಸಿದಿದ್ದಾನೆ. ಎಷ್ಟೇ ಎಚ್ಚರಗೊಳಿಸಿದರೂ ಪ್ರಜ್ಞೆ ಬರದ ಕಾರಣ ಆತನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ವೈದ್ಯರು ತಪಾಸಣೆ ಮಾಡಿ ಸಾವನ್ನಪ್ಪಿರುವುದಾಗಿ…
ಬೆಂಗಳೂರು: ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಮೂರಕ್ಕೆ ಮೂರೋ ಕ್ಷೇತ್ರಗಳನ್ನು ಗೆದ್ದಿರುವುದು ಸಿಎಂಗೆ ಖುಷಿಯಾಗಿದ್ರು ಮುಡಾ ಟೆನ್ಷನ್ ಮಾತ್ರ ಕಡಿಮೆ ಆಗ್ತಿಲ್ಲ. ಯಾಕಂದ್ರೆ ಮುಡಾಕೇಸ್ ಅನ್ನು ಸಿಬಿಐ ವಹಿಸಬೇಕು ಅಂತ ಹೈಕೋರ್ಟ್ ಗೆ ಹೋಗಿರುವ ಸ್ನೇಹಮಯಿಕೃಷ್ಣರ ಅರ್ಜಿ ಇಂದು ಮತ್ತೆ ವಿಚಾರಣೆ ನಡೆದಿದೆ. ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ಬಳಿಕ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು. https://ainlivenews.com/why-is-november-26-celebrated-as-constitution-day-its-history-here-is-the-information/ ಆ ಅರ್ಜಿ ಸಂದರ್ಭದಲ್ಲಿ ಇದನ್ನು ಮುಂದೂಡಬೇಕು ಅಂತ ಹೇಳಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್ ತಿಳಿಸಿದರು. ಅಲ್ಲದೇ, ಇಂದು ಲೋಕಾಯುಕ್ತ ವರದಿ ಪಡೆಯಿರಿ ಎಂದು ರಾಘವನ್ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಇವತ್ತು ಅರ್ಜಿ ವಿಚಾರಣೆ ನಡುತ್ತಿಲ್ಲ. ಹೀಗಾಗಿ ಡಿ.10…
ಬೆಂಗಳೂರು: ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊಲೆಯಾದ ಟೈಂ ನಲ್ಲಿ ದಾಸ ಪಟ್ಟಣಗೆರೆ ಶೆಡ್ ನಲ್ಲಿ ಇದ್ದ ಅನ್ನೋದಕ್ಕೆ ಪೂರಕವೆಂಬಂತೆ ಸಾಕ್ಷಿಗಳು ಸಿಕ್ಕಿವೆ. ಎಫ್ ಎಸ್ ಎಲ್ ರಿಪೋರ್ಟ್ ನಲ್ಲಿ ರಿಟ್ರೀವ್ ಆಗಿರುವ ಪೋಟೊ ಗಳೇ ಸಾರಿ ಸಾರಿ ಹೇಳ್ತಿವೆ.ಇತ್ತ ಖಾಕಿ ಟೀಮ್ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವ ಪೋಲೀಸರು ಇದಕ್ಕೆ ಪೂರಕವೆಂಬ ಗೃಹ ಸಚಿವರು ಕೂಡ ಸಾಥ್ ನೀಡಿದ್ದಾರೆ. ಇಂದು ಹೈಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಅಲ್ಲಿ ಈ ಎಲ್ಲಾ ವಿಚಾರಗಳು ಮತ್ತೊಮ್ಮೆ ಚರ್ಚೆಗೆ ಬರೋ ಸಾಧ್ಯತೆ ಇದೆ. https://ainlivenews.com/why-is-november-26-celebrated-as-constitution-day-its-history-here-is-the-information/ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಹೈಕೋರ್ಟ್ ಪೀಠದಲ್ಲಿ ದರ್ಶನ್, ಪವಿತ್ರಾಗೌಡ, ನಾಗರಾಜು ಆರ್., ಅನುಕುಮಾರ್, ಲಕ್ಷ್ಮಣ್ ಎಂ. ಹಾಗೂ ಜಗದೀಶ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ವೇಳೆ ಯಾವ ರೀತಿಯ ವಾದ ವಿವಾದಗಳು ನಡೆಯುತ್ತವೆ ಎನ್ನುವ ಕುತೂಹಲ ಮೂಡಿದೆ. ಅನಾರೋಗ್ಯ ಕಾರಣಕ್ಕೆ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದಾರೆ.…
ಬೆಂಗಳೂರು: ಆಟೋ ಡ್ರೈವರ್ ಆಗಿದ್ದವನು ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದಿರುವ ಘಟನೆ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬುಲ್ ಪಾಷಾ(34) ಬಂಧಿತ ಆರೋಪಿಯಾಗಿದ್ದು, ಆಟೋ ಡ್ರೈವರ್ ಆಗಿದ್ದ ಅಬುಲ್ ಪಾಷಾ 5 ವರ್ಷದಿಂದ ಬೆಂಗಳೂರಲ್ಲಿ ವಾಸವಾಗಿದ್ದನು. https://ainlivenews.com/why-is-november-26-celebrated-as-constitution-day-its-history-here-is-the-information/ ಲೇಬರ್ ಶೆಡ್ ನಲ್ಲಿ ಪ್ಯಾಕೇಟ್ ಮಾಡಿ ಗಾಂಜಾ ಮಾರಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಬಂಧಿತನಿಂದ 7.5 ಲಕ್ಷ ಮೌಲ್ಯದ 10 ಕೆ.ಜಿ ಗಾಂಜಾ ವಶಕ್ಕೆ ಪಡೆದು, ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ವಿಜಯನಗರ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಂದ ನಂತರ, ಕೆಲವು ಕಾಂಗ್ರೆಸ್ ಶಾಸಕರು ಪಂಚ ಗ್ಯಾರಂಟಿಯ ಬಗ್ಗೆ ಅಪಸ್ವರವನ್ನು ಎತ್ತಿದ್ದರು. ಇದೀಗ ರಾಜ್ಯ ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕ ತಿರುಗಿ ಬಿದ್ದಿದ್ದು, ಗ್ಯಾರಂಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ. https://ainlivenews.com/why-is-november-26-celebrated-as-constitution-day-its-history-here-is-the-information/ ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದರು.