ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿ ಎಂ ಸಿದ್ದರಾಮಯ್ಯಗೆ ಟೆನ್ಷನ್ ಮಾತ್ರ ಕಡಿಮೆ ಆಗ್ತಿಲ್ಲ. ಪ್ರಕರಣದ ತನಿಖೆಯನ್ನು ಲೋಕಾಯುಕ್ತರು ಒಂದು ಕಡೆ ಮಾಡ್ತಿದ್ರೆ, ಇನ್ನೊಂದು ಕಡೆ ಇಡಿ ಅಧಿಕಾರಿಗಳು ಮುಡಾ ಬೆನ್ನು ಬಿದ್ದಿದ್ದಾರೆ. ಇದು ಸಾಲದು ಅಂತ ಮುಡಾ ಕೇಸ್ ಸಿಬಿಐಗೆ ವಹಿಸಬೇಕು ಅಂತ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ರು. ಇಂದು ಲೋಕಾ ಅಧಿಕಾರಿಗಳು ಪ್ರಕರಣದ ತನಿಖಾ ವರದಿಯನ್ನು ಕೋರ್ಟ್ ಗೆ ಸಲ್ಲಿಸುತ್ತಿದ್ದು ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಮೂರಕ್ಕೆ ಮೂರೋ ಕ್ಷೇತ್ರಗಳನ್ನು ಗೆದ್ದಿರುವುದು ಸಿಎಂಗೆ ಖುಷಿಯಾಗಿದ್ರು ಮುಡಾ ಟೆನ್ಷನ್ ಮಾತ್ರ ಕಡಿಮೆ ಆಗ್ತಿಲ್ಲ. ಯಾಕಂದ್ರೆ ಮುಡಾಕೇಸ್ ಅನ್ನು ಸಿಬಿಐ ವಹಿಸಬೇಕು ಅಂತ ಹೈಕೋರ್ಟ್ ಗೆ ಹೋಗಿರುವ ಸ್ನೇಹಮಯಿಕೃಷ್ಣರ ಅರ್ಜಿ ಇಂದು ಮತ್ತೆ ವಿಚಾರಣೆಗೆ ಬರಲಿದೆ.. ಇದೇ ತಿಂಗಳು 5 ರಂದು ಹೈಕೋರ್ಟ್ ನ ಏಕ ಸದಸ್ಯ ಪೀಠದ ಮುಂದೆ ಬಂದಿದ್ದ ಅರ್ಜಿ ವಿಚಾರಣೆ ಮಾಡಿದ್ದ ನ್ಯಾಯಾಧೀಶರು ಸಿ ಎಂ ಸೇರಿದಂತೆ ಎಲ್ಲರಿಗೂ ನೋಟೀಸ್ ನೀಡುವಂತೆ ಆದೇಶ ಮಾಡಿ ಆಕ್ಷೇಪಣೆ…
Author: AIN Admin
ಬೆಂಗಳೂರು: ಇಂದು ಭಾರತದ ಸಂವಿಧಾನ ದಿನ. ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲು ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ. ನವೆಂಬರ್ 26, 1949 ರಂದು ಭಾರತದ ಸಂವಿಧಾನ ಸಭೆಯು ಔಪಚಾರಿಕವಾಗಿ ಅತ್ಯುನ್ನತ ಕಾನೂನು ದಾಖಲೆಯಾದ ಸಂವಿಧಾನವನ್ನು ಅಂಗೀಕರಿಸಿತು. ಆದ್ದರಿಂದಲೇ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನದ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನವು ಅಧಿಕೃತವಾಗಿ ಜಾರಿಗೆ ಬಂದಿದ್ದು, ಜನವರಿ 26, 1950 ರಂದು. ಆ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಭಾರತದ ಸಂವಿಧಾನದ ಇತಿಹಾಸ 1946 ರಲ್ಲಿ ಕ್ಯಾಬಿನೆಟ್ ಮಿಷನ್ ಭಾರತಕ್ಕೆ ಬಂದಾಗ ಸಂವಿಧಾನ ಸಭೆಯನ್ನು ರಚಿಸಲು ಒಪ್ಪಿಗೆ ದೊರೆಯಿತು. ಅದರಂತೆ ಪ್ರಾದೇಶಿಕ ವಿಧಾನಸಭೆಗಳಿಗೆ ಚುನಾವಣೆ ನಡೆದು 389 ಸದಸ್ಯರು ಚುನಾಯಿತರಾದರು. ಇದರಲ್ಲಿ ರಾಜ-ಮಹಾರಾಜರ ಆಳ್ವಿಕೆಯ 93 ಸದಸ್ಯರೂ ಸೇರಿದ್ದರು. ಇದರ…
ಕುರಿಸಾಕಾಣಿಕೆ ಇತ್ತೀಚೆಗೆ ಎಲ್ಲೆಡೆ ನಿಧಾನವಾಗಿ ಪ್ರಗತಿ ಕಾಣುತ್ತಿರುವ ಕಸುಬಾಗಿದೆ. ಹಸುವಿನ ರೀತಿಯೆ ಕುರಿಯ ಹಲವು ಉತ್ಪನ್ನಗಳು ಮಾನವನಿಗೆ ಬಹಳ ಉಪಯೋಗವಾಗುತ್ತಿದೆ. ಕುರಿಯನ್ನು ಬಡವರ ಸಣ್ಣ ಮತ್ತು ಅತಿ ಸಣ್ಣ ರೈತರ ‘ಕಿರುಕಾಮಧೇನು’ ಎಂದು ಕರೆಯಬಹುದು. ಕುರಿಯ ಉಣ್ಣೆ, ಮಾಂಸ, ಚರ್ಮ, ಗೊಬ್ಬರ ಇತ್ಯಾದಿ ಉಪಯುಕ್ತ ವಸ್ತುಗಳಿಂದ ದೇಶದ ಆರ್ಥಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕುರಿ ಸಾಕಣೆ ಮಾಡುವುದು ಹೇಗೆ? : ದನಗಳಿಗೆ ಬೇಕಾಗಿರುವಂತೆ ಕುರಿಗಳನ್ನು ಸಾಕಲು ಹೆಚ್ಚಿನ ಸ್ಥಳಾವಕಾಶದ ಅಗತ್ಯವೂ ಇರುವುದಿಲ್ಲ ಹಾಗೂ ದನಕರುಗಳನ್ನು ಬೆಳೆಸುವಾಗ ತಗಲುವ ವೆಚ್ಚಕ್ಕಿಂತಲೂ ಕಡಿಮೆ ವೆಚ್ಚದಲ್ಲಿ ಕುರಿ ಸಾಕಣೆ ಮಾಡಬಹುದಾಗಿದೆ. ರಾಜ್ಯದಲ್ಲಿ ಕುರಿಗಳನ್ನು ಅವುಗಳ ಮಾಂಸ, ಹಾಲು ಹಾಗೂ ತುಪ್ಪಳಕ್ಕಾಗಿ ಸಾಕಣೆ ಮಾಡಲಾಗುತ್ತದೆ. ಪ್ರದೇಶದಲ್ಲಿ ಕುರಿ ಮಾಂಸ ಅಥವಾ ಮಟನ್ ಜನಪ್ರಿಯ ಮಾಂಸ ಭಕ್ಷ್ಯವಾಗಿದ್ದು, ಸಾಕಷ್ಟು ಆರೋಗ್ಯಕರ ಪೋಷಕಾಂಶಗಳನ್ನೂ ಸಹ ಹೊಂದಿರುತ್ತದೆ. ಅಲ್ಲದೇ ಕುರಿ ಹಾಲಿನ ಉದ್ಯಮವು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದ್ದು, ಅದರಿಂದ ಹಲವಾರು ವೈವಿಧ್ಯಮಯ ಡೈರಿ ಉತ್ಪನ್ನಗಳನ್ನು ಸಹ ಉತ್ಪಾದಿಸಲಾಗುತ್ತದೆ. ಹಾಗಾಗಿ ಕುರಿಗಳಿಗೆ ಸ್ಥಳೀಯವಾಗಿ…
ಆಚಾರ್ಯ ಚಾಣಕ್ಯರನ್ನು ವಿದ್ವಾಂಸರು ಮತ್ತು ಶ್ರೇಷ್ಠ ಶಿಕ್ಷಕರಲ್ಲಿ ಪ್ರಮುಖರೆಂದು ಪರಿಗಣಿಸಲಾಗಿದೆ. ವ್ಯಾಪಾರ, ವೈವಾಹಿಕ ಜೀವನ, ಸಮಾಜ, ಜೀವನ, ಹಣ, ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಪ್ರೇರೇಪಿಸುವ ವಿಷಯಗಳನ್ನು ಚಾಣಕ್ಯ ನೀತಿಯಲ್ಲಿ ಉಲ್ಲೇಖಿಸಲಾಗಿದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಈ ಎಲ್ಲಾ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಚಾಣಕ್ಯ ನೀತಿಯಲ್ಲಿ, ಅವರು ಜೀವನಕ್ಕೆ ಸಂಬಂಧಿಸಿದ ವಿಷಯಗಳನ್ನು ಹೇಳಿದ್ದಾರೆ. ಅದೇ ರೀತಿ ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಚಾಣಕ್ಯ ತನ್ನ ಪುಸ್ತಕದಲ್ಲಿ ಉಲ್ಲೇಖಿಸಿದ್ದಾನೆ. ಮಹಿಳೆಯರ ಕೆಲವು ಅಭ್ಯಾಸಗಳು ತಮ್ಮ ಗಂಡನ ಜೀವನವನ್ನು ತೊಂದರೆಗೆ ಸಿಲುಕಿಸುತ್ತವೆ. ಕಷ್ಟಗಳು/ ಪ್ರತಿಕೂಲ ಪರಿಸ್ಥಿತಿಗಳು ಎಂಬುದು ಜೀವನದ ಒಂದು ಭಾಗವಾಗಿದೆ. ಇದು ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಅನ್ವಯಿಸುತ್ತದೆ. ಕೆಲವು ಅಭ್ಯಾಸಗಳು ಯಾರನ್ನಾದರೂ ಸರುಯೇ ಕಾಡುತ್ತವೆ. ನಕಾರಾತ್ಮಕ ಪರಿಣಾಮಗಳು ಉಂಟಾಗುತ್ತವೆ. ಇದು ದಂಪತಿ ನಡುವಿನ ಸಂಬಂಧದಲ್ಲಿ ಉದ್ವಿಗ್ನತೆ/ ಪ್ರತಿಕೂಲ ಪರಿಸ್ಥಿತಿಯನ್ನು ಉಂಟುಮಾಡಬಹುದು. ಮಹಿಳೆಯರು ತಮ್ಮ ದುಃಖದಲ್ಲಿರುವ ಗಂಡನನ್ನು ಬೆಂಬಲಿಸದಿದ್ದರೆ.. ದಂಪತಿಯ ಜೀವನವು ಕಷ್ಟಗಳಿಂದ ಸುತ್ತುವರೆದಿರುತ್ತದೆ. ರೋಗಗಳನ್ನು ನಿರ್ಲಕ್ಷಿಸುವುದು: ಆಚಾರ್ಯ ಚಾಣಕ್ಯನ ಪ್ರಕಾರ,…
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 16ರಿಂದ 59 ವರ್ಷದೊಳಗಿನವರು ಆಯುಷ್ಮಾನ್ ಭಾರತ ಯೋಜನೆಯಡಿ ವಾರ್ಷಿಕ 5 ಲಕ್ಷ ರೂ. ಆರೋಗ್ಯ ವಿಮೆಗೆ (ಪ್ರತಿ ಕುಟುಂಬಕ್ಕೆ) ಅರ್ಹರಾಗಿದ್ದಾರೆ. 2018ರಲ್ಲಿ ಈ ದರವನ್ನು ನಿಗದಿ ಮಾಡಲಾಗಿದೆ. ಹೆಚ್ಚಿದ ಹಣದುಬ್ಬರ ಹಾಗೂ ಕಸಿ, ಕ್ಯಾನ್ಸರ್‌ನಂತಹ ದುಬಾರಿ ಚಿಕಿತ್ಸೆಗಳಿಗೂ ಅನುಕೂಲವಾಗಲಿ ಎಂದು ಇದೀಗ ವಿಮೆ ದರ ಹೆಚ್ಚಳ ಮಾಡುವ ಚಿಂತನೆ ಇದೆ. ಜೊತೆಗೆ ಇದೀಗ ಸರ್ಕಾರ 70 ವರ್ಷ ಮೇಲ್ಪಟ್ಟವರನ್ನೂ ವಿಮಾ ಸೌಲಭ್ಯದ ವ್ಯಾಪ್ತಿಗೆ ತರಲು ಉದ್ದೇಶಿಸಿದೆ. ಆಯುಷ್ಮಾನ್ ಕಾರ್ಡ್ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ವೈದ್ಯಕೀಯ ವಿಮೆಯನ್ನು ಒದಗಿಸುವ ಯೋಜನೆಯಾಗಿದೆ. ವಾಸ್ತವವಾಗಿ, ಈ ಯೋಜನೆಯ ಮೂಲಕ ನೀವು ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ರೋಗಗಳಿಗೆ ಚಿಕಿತ್ಸೆ ಪಡೆಯಬಹುದು. ನೀವು ಆಯುಷ್ಮಾನ್ ಕಾರ್ಡ್ ಹೊಂದಿದ್ದರೆ, 5 ಲಕ್ಷದವರೆಗಿನ ಚಿಕಿತ್ಸೆಯನ್ನು ನಿಮಗೆ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ. ಆಯುಷ್ಮಾನ್ ಕಾರ್ಡ್‌ನ ಕೆಲವು ಪ್ರಯೋಜನಗಳು • ಯೋಜನೆಯಡಿಯಲ್ಲಿ, ದೇಶದ ಹಲವು ಆಸ್ಪತ್ರೆಗಳಲ್ಲಿ…
ಉತ್ಪತ್ತಿ ಏಕಾದಶಿ ಸೂರ್ಯೋದಯ: 06:31, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ, ಶರದ ಋತು, ಕಾರ್ತಿಕ್ ಮಾಸ, ತಿಥಿ: ಏಕಾದಶಿ, ನಕ್ಷತ್ರ: ಹಸ್ತಾ, ರಾಹು ಕಾಲ: 03:00 ನಿಂದ 04:30 ತನಕ ಯಮಗಂಡ: 09:00 ನಿಂದ 10:30 ತನಕ ಗುಳಿಕ ಕಾಲ: 12:00 ನಿಂದ 01:30 ತನಕ ಅಮೃತಕಾಲ: ರಾ .9:47 ನಿಂದ ರಾ .11:35 ತನಕ ಅಭಿಜಿತ್ ಮುಹುರ್ತ: ಬೆ.11:41 ನಿಂದ ಮ.12:25 ತನಕ ಮೇಷ ರಾಶಿ ಅಧಿಕಾರಿಗಳ ಜೊತೆ ಸ್ನೇಹದಿಂದ ವರ್ತಿಸಿ,ಉದ್ಯೋಗದಲ್ಲಿ ವರ್ಗಾವಣೆಯಿಂದ ಸಂತಸ, ವಕೀಲರಿಗೆ ಉತ್ತಮ ಆದಾಯ ಹಾಗೂ ಅವಕಾಶಗಳು ಲಭ್ಯ, ಕ್ರೀಡಾಕೂಟದ ಪಟುಗಳಿಗೆ ಸಿಹಿಸುದ್ದಿ, ಮ್ಯಾರೇಜ್ ಬ್ಯುರೋ ಸಂಘಟಕರಿಗೆ ಉತ್ತಮ ಆದಾಯ, ನೀನು ತುಂಬಾ ಪ್ರಯತ್ನಿಸುತ್ತಿದ್ದೀರಿ ಆದರೆ ಅದೃಷ್ಟ ಕೈಕೊಡುತ್ತಿದೆ, ಹೈನುಗಾರಿಕೆ ವ್ಯಾಪಾರ ಲಾಭದಾಯಕ,ಉದ್ಯೋಗ ಸಂದರ್ಶನ, ಹಣಕಾಸಿನ ವ್ಯವಹಾರ ಬೇಡ,ಸರಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತುಂಬಾ ಹತ್ತಿರಕ್ಕೆ ಬಂದು ನಿರಾಶೆ ಮೂಡಲಿದೆ,ನಿಮಗೆ ವಿದೇಶದಲ್ಲಿ ಉದ್ಯೋಗ…
ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾ ವಿಶೇಷ ಚೇತನರ ಸಂಘದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ವಿಶೇಷಚೇತನರಿಗೆ ರಾಜ್ಯಾದ್ಯಂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ವಿಆರ್‌ಡಬ್ಲ್ಯೂಗಳಿಗೆ ಖಾಯಮಾತಿ ಹಾಗೂ ಸೇವಾ ಭದ್ರತೆ ಒದಗಿಸಬೇಕು. ಐದಾರು ತಿಂಗಳಿಗೊಮ್ಮೆ ಗೌರವಧನ ಸಿಗುತ್ತಿದ್ದು, https://ainlivenews.com/dont-make-these-mistakes-even-if-its-monday-doing-so-will-cause-trouble/ ಸಮಯಕ್ಕೆ ಸರಿಯಾಗಿ ನೀಡಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿ ದೊರೆಯುವಂತೆ ಮಾಡಬೇಕು. ೫ ಸಾವಿರ ಮಾಸಿಕ ಭತ್ಯೆ, ವಸತಿ ವ್ಯವಸ್ಥೆ, ವಿಶೇಷ ಚೇತನರಿಗೆ ಪ್ರತ್ಯೇಕ ಬಿಪಿಲ್ ಕಾರ್ಡ್ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ಮೌನ ಗುಡ್ಡಮನೆ, ಶರತ್ ಲೋಹಿತಾಶ್ವ, ಕರಿ ಸುಬ್ಬು, ಡ್ರ್ಯಾಗನ್ ಮಂಜು, ಸೀನ ಮುಂತಾದವರು ಸಾಹಸ ಸನ್ನಿವೇಶದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಬಿಡುವಿನ ವೇಳೆ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು. ಹೆಸರೆ ಹೇಳುವಂತೆ ‘ಕುಲದಲ್ಲಿ ಕೀಳ್ಯಾವುದೊ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತಾನಾಡಿದ ನಿರ್ದೇಶಕ ರಾಮನಾರಾಯಣ್, ಹಿರಿಯ ನಿರ್ದೇಶಕ ಯೋಗರಾಜ್ ಭಟ್ ಅವರ ಮಾರ್ಗದರ್ಶನದಲ್ಲಿ ಸಂತೋಷ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಸಾಹಸ ಸನ್ನಿವೇಶದ ಚಿತ್ರೀಕರಣ ವಿನೋದ್ ಮಾಸ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ.…
2025ನೇ ಸಾಲಿನ ಐಪಿಎಲ್ ಮೆಗಾ ಹರಾಜಿನ ಮೊದಲ ದಿನವೇ ಭರ್ಜರಿಯಾಗಿ ಸಾಗಿದೆ. ಎಲ್ಲಾ ಫ್ರಾಂಚೈಸಿಗಳು ಸಾಕಷ್ಟು ಅಳೆದುತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿವೆ. ಇನ್ನೂ ಎರಡನೇ ದಿನದ ಹರಾಜು ಪ್ರಕ್ರಿಯೆಯಲ್ಲಿ RCB ವೇಗಿ ಭುವನೇಶ್ವರ್ ಕುಮಾರ್ ಗೆ 10.75 ಕೋಟಿ ರೂ. ನೀಡಿ ಖರೀದಿಸಿತು. ಐಪಿಎಲ್‌ನ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾದ ಭುವನೇಶ್ವರ್ 2011 ರಿಂದ ಲೀಗ್‌ನಲ್ಲಿ ಆಡುತ್ತಿದ್ದಾರೆ. ಅವರು 2011 ರಲ್ಲಿ ಪುಣೆ ವಾರಿಯರ್ಸ್‌ನೊಂದಿಗೆ ಪಾದಾರ್ಪಣೆ ಮಾಡಿದರು. 2013ರಲ್ಲಿ ಭುವನೇಶ್ವರ್ ಪ್ರಭಾವಿಯಾಗಿ ಆಟವಾಡಿದ್ದರು.. 7ಕ್ಕಿಂತ ಕಡಿಮೆ ಎಕಾನಮಿ ದರವನ್ನು ಕಾಯ್ದುಕೊಂಡು 13 ವಿಕೆಟ್ ಪಡೆದರು. 2014 ರ ಋತುವಿಗೆ ಮುಂಚಿತವಾಗಿ, ಭುವನೇಶ್ವರ್ ಅವರು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಸಹಿ ಹಾಕಿದರು.. ಅಂದಿನಿಂದ ಅವರು SRH ಗಾಗಿ ಆಡುತ್ತಿದ್ದಾರೆ. https://ainlivenews.com/dont-make-these-mistakes-even-if-its-monday-doing-so-will-cause-trouble/ ಇದೀಗ ಪವರ್‌ಪ್ಲೇಯಲ್ಲಿ ಉತ್ತಮ ಪ್ರದರ್ಶನ ನೀಡುವ ಕೆಲವೇ ಕೆಲವು ಭಾರತೀಯ ಸೀಮ್ ಮತ್ತು ಸ್ವಿಂಗ್ ಬೌಲರ್‌ಗಳಲ್ಲಿ ಭುವನೇಶ್ವರ್ ಕುಮಾರ್ ಒಬ್ಬರು. 10 ಕೋಟಿಗಿಂತ ಕಡಿಮೆ ಬೆಲೆಗೆ ಅವರನ್ನು ಖರೀದಿ…
ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ ಜಿ ವೆಂಕಟೇಶ್ ಬಿಡುಗಡೆ ಮಾಡಿದರು. ದಿನಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಮದನ್ ಪಟೇಲ್ ಅವರು ನನ್ನ ಬಹುಕಾಲದ ಗೆಳೆಯರು. ಅವರು ಬರೆದಿರುವ “ತಮಟೆ” ಕಾದಂಬರಿ ಇಂದು ಸಿನಿಮಾ ರೂಪ ಪಡೆದುಕೊಂಡಿದೆ. ಮಯೂರ್ ಪಟೇಲ್ ಅವರು ನಿರ್ದೇಶಿಸಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಮದನ್ ಪಟೇಲ್ ಅವರೆ ಅಭಿನಯಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ತುಂಬಾ ಚೆನ್ನಾಗಿದೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಈ ಚಿತ್ರ ನವೆಂಬರ್ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು ಮಲ್ಲೇಪುರಂ ಜಿ ವೆಂಕಟೇಶ್. https://ainlivenews.com/dont-make-these-mistakes-even-if-its-monday-doing-so-will-cause-trouble/ “ತಮಟೆ” ವಾದ್ಯಗಾರನೊಬ್ಬನ ಜೀವನಾಧಾರಿತ ಈ ಸಿನಿಮಾದಲ್ಲಿ ನಾನೇ ಮುಖ್ಯ ಪಾತ್ರದಲ್ಲಿ…