‘ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಆದೇಶಿಸಿದ ಮಧು ಬಂಗಾರಪ್ಪ. ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಕ್ರಮ ಕೈಗೊಳ್ಳುವಂತೆ ಸಚಿವ ಮಧು ಬಂಗಾರಪ್ಪ ಆಗ್ರಹ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಶಿಕ್ಷಣ ಸಚಿವರ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. https://www.youtube.com/watch?v=v9xt5YNVgbA&t=55s
Author: AIN Admin
ಬೆಂಗಳೂರು: ಅವ್ರು ಒಂದು ರೇಂಜ್ ನ ರ್ಯಾಂಕಿಂಗ್ ಅಧಿಕಾರಿಗಳು.. ಇಲಾಖೆಗಳಲ್ಲಿ ಕೆಲಸ ಮಾಡಿ ಕೋಟಿ ಕುಳ ಅನ್ನಿಸಿಕೊಂಡಿದ್ದವರು.. ಆದಾಯಕ್ಕೂ ಮೀರಿ ಅಸಮತೋಲನ ಆಸ್ತಿ ಗಳಿಸಿರೋ ಆರೋ ಹೊತ್ತಿರೋರು.. ಆ ಭ್ರಷ್ಟ ಅಧಿಕಾರಿಗಳು ಕಣ್ಬಿಡ್ತಿದ್ದಂತೆಯೇ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ರು. ಹೌದು.. ಇವತ್ತು ಬೆಳ್ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ.. ನಾಲ್ವರು ಭ್ರಷ್ಟಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಬೆಳ್ಳಗ್ಗೆ ಏಳು ಗಂಟೆಗಳಿಂದ್ಲೂ ಪರಿಶೀಲನೆ ನಡೆಸ್ತಿದ್ದಾರೆ.. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಮಂಗಳೂರಿನ 25ಕಡೆ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟಿಯಾಡಿದ್ದಾರೆ.. ಅಂದ್ಹಾಗೆ ಕನಕಪುರ ರಸ್ತೆಯ ವಾಜರಹಳ್ಳಿ ಬಳಿ ಇರೋ ಅಬಕಾರಿ ಸೂಪರಿಂಟೆಂಡೆಂಟ್ ಮೋಹನ್ ವಿಲ್ಲಾ ಮೇಲೆ ಮತ್ತು ಗಿರಿನಗರ ಬಳಿಯ ಡೈರೆಕ್ಟರ್ ಆಫ್ ಟೌನ್ ಪ್ಲಾನಿಂಗ್ ಡೈರೋಕ್ಟರಿಯಲ್ ಕೆ ತಿಪ್ಪೇಸ್ವಾಮಿ ಬಂಗಲೆ ಮೇಲೆ ಲೋಕಾಯುಕ್ತ ಟೀಂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.. ಇಬ್ಬರ ವಿರುದ್ಧವೂ ಭ್ರಷ್ಟಚಾರ, ಅಸಮತೋಲನ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿತ್ತು.. ಆರೋಪ…
ಮಂಗಳೂರು: ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 15% ರಿಂದ 20% ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ. ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯವರೆಗೂ ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುವುದಾಗಿ ಹೇಳಿದರು. https://ainlivenews.com/do-you-know-how-many-health-benefits-of-eucalyptus-leaves-2/ ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು: ಅಧಿಕಾರಕ್ಕೆ ಬಂದ ಮೊದಲ ದಿನವೇ ಅನ್ನಭಾಗ್ಯ ಯೋಜನೆ ಕೊಟ್ಟಿದ್ದು ಸಿದ್ದರಾಮಯ್ಯ ಎಂದು ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮೊದಲ ದಿನವೇ ಅನ್ನಭಾಗ್ಯ ಯೋಜನೆ ಕೊಟ್ಟಿದ್ದು ಸಿದ್ದರಾಮಯ್ಯನವರು. ದೇಶದಲ್ಲಿ ಈ ಆಹಾರ ಭದ್ರತೆ ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ ಎಂದು ಹೇಳಿದರು. https://ainlivenews.com/do-you-have-a-500-rupee-note-you-are-an-agbodu-millionaire-in-no-time/ ಇನ್ನೂ ಬಿಎಸ್ ವೈ ಅಧಿಕಾರಕ್ಕೆ ಬಂದ್ಮೇಲೆ ಏಳರಿಂದ ಐದು ಕೆಜಿಗೆ ಇಳಿಸಿದ್ರು. ದೇಶದಲ್ಲಿ ಐದು ಕೋಟಿ ಎಂಟು ಲಕ್ಷ ಕಾರ್ಡ್ ಗಳನ್ನ ಕೇಂದ್ರ ಸರ್ಕಾರ ರದ್ದು ಮಾಡಿದೆ. ಗೊಂದಲಕ್ಕೆ ಅವಕಾಶ ಕೊಡಬಾರದು ಅಂತಾ ಈ ನಿರ್ಣಯ ತೆಗೆದುಕೊಂಡಿದ್ದೀವಿ. ಎಪಿಎಲ್ ನವ್ರು ಯಥಾಸ್ಥಿತಿಯಲ್ಲಿ ಇರ್ತಾರೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು. ಬಿಪಿಎಲ್ ಕಾರ್ಡ್ದಾರರನ್ನು ಎಪಿಎಲ್ಗೆ ಸೇರ್ಪಡೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ, ಎಲ್ಲ ಗೊಂದಲದ ಹೊಣೆ ನಾನೇ ಹೊರುವೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡುವೆ. ಯಾವುದೇ ಅರ್ಹ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು. ವಾದ, ಪ್ರತಿವಾದದ ಬಳಿಕ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಲಾಯ್ತು. ವಿಚಾರಣೆ ವೇಳೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಅವರು ದರ್ಶನ್ಗೆ ಮಧ್ಯಂತರ ಜಾಮೀನಿನ ನೀಡಿದ ವೇಳೆ ಸೂಚಿಸಲಾಗಿದ್ದ ಕೆಲ ನಿಯಮಗಳನ್ನು ಪಾಲಿಸಿಲ್ಲವ ಎಂದು ವಾದ ಮಂಡಿಸಿದರು. ದರ್ಶನ್ ಪರ ವಕೀಲರು ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ನ್ಯಾಯಮೂರ್ತಿಗಳು ಸೂಚಿಸಿದರು. ಇದೇ ವೇಳೆ ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದರು. 6 ವಾರಗಳ ಅವಧಿಗೆ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ, ಆದರೆ ಸರ್ಜರಿಯ ದಿನಾಂಕ ತಿಳಿಸಿಲ್ಲವೆಂದು ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ಅದೇ ವೇಳೆಗೆ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಮತ್ತೊಂದು ವೈದ್ಯಕೀಯ ವರದಿಯನ್ನು ಹೈಕೋರ್ಟ್ಗೆ ಸಲ್ಲಿಕೆ ಮಾಡಿದರು. https://ainlivenews.com/do-you-know-how-many-health-benefits-of-eucalyptus-leaves-2/ ಅದೇ…
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳೂರಿನ ಶರಾವತಿ ಬಾರ್ ಸಮೀಪ ನಡೆದಿದೆ. ಮದುರೈ ಮೂಲದ ಅಲಗರಾಜ್(31) ಕೊಲೆಯಾದ ವ್ಯಕ್ತಿಯಾಗಿದ್ದು, ಅರೆನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನ್ನು ಘಟನಾ ಸ್ಥಳದಲ್ಲಿ TVS ಎಕ್ಸೆಲ್ ಬೈಕ್, ಹಾಗೂ ತುಪ್ಪದ ಟಿನ್ ಪತ್ತೆಯಾಗಿದ್ದು, https://ainlivenews.com/do-you-have-a-500-rupee-note-you-are-an-agbodu-millionaire-in-no-time/ ಶವ ಬಿದ್ದಿರುವುದನ್ನು ಬಾಟಲ್, ಚಿಂದಿ ಆಯುವವರು ನೋಡಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು, ಶ್ವಾನದಳ, ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಳೇ ವೈಷಮ್ಯದ ಹಿನ್ನೆಲೆ ತಲೆಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ದೊಡ್ಡಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ 6 ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ. ರೂಪ (29) ಮೃತ ದುರ್ದೈವಿಯಾಗಿದ್ದು, ಎರಡು ವರ್ಷಗಳ ಹಿಂದೆ ಪ್ರೀತಿಸಿ ಸುರೇಶ್ ನೊಂದಿಗೆ ಮದುವೆಯಾಗಿದ್ದಳು. ಸುರೇಶ್ ಸಾಸಲು ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟಿಂಗ್ ಆಗಿ ಕೆಲಸ ಮಾಡುತ್ತಿದ್ದನು. ಸುರೇಶ್ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ಹಣ ಖರ್ಚು ಮಾಡಿದ್ದೇವೆ ಆ ಹಣವನ್ನು ತೆಗೆದುಕೊಂಡು ಬಾ ಎಂದು ಕಿರುಕುಳ ಕಿರಿಕುಳ ನೀಡುತ್ತಿದ್ದರು. https://ainlivenews.com/do-you-have-a-500-rupee-note-you-are-an-agbodu-millionaire-in-no-time/ ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಲ್ಲದೇ ಸಾವಿಗೂ ಮುನ್ನ ರೂಪಾ ಡೆತ್ ನೋಟ್ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ. ಸದ್ಯ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿ ಸುರೇಶ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ತಲೆಮರಿಸಿಕೊಂಡಿರುವ ಸುರೇಶ್ ತಂದೆ ತಾಯಿಗಾಗಿ ಶೋಧ ನಡೆಸುತ್ತಿದ್ದಾರೆ.
ತಮಿಳುನಾಡು: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ತರಗತಿಗೆ ನುಗ್ಗಿ ಮಕ್ಕಳ ಎದುರೇ ಶಿಕ್ಷಕಿಯ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ರಮಣಿ (26) ಕೊಲೆಯಾದ ಶಿಕ್ಷಕಿಯಾಗಿದ್ದು, ಹತ್ಯೆಗೈದ ಆರೋಪಿಯನ್ನು ಮದನ್ (30) ಎಂದು ಗುರುತಿಸಲಾಗಿದೆ. ಆತ ರಮಣಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅವರ ಕುತ್ತಿಗೆಗೆ ಆಳವಾದ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. https://ainlivenews.com/do-you-have-a-500-rupee-note-you-are-an-agbodu-millionaire-in-no-time/ ರಮಣಿಯವರು ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಮಣಿ ಹಾಗೂ ಮದನ್ ಕುಟುಂಬ ಭೇಟಿಯಾಗಿ ಮದುವೆಯ ವಿಚಾರ ಚರ್ಚಿಸಿದ್ದರು. ಈ ವೇಳೆ ಮದುವೆ ಪ್ರಸ್ತಾಪವನ್ನು ರಮಣಿಯವರು ತಿರಸ್ಕರಿಸಿದ್ದರು ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮಿಳಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ತಕ್ಷಣವೇ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸುವಂತೆ ಆದೇಶಿಸಿದ್ದಾರೆ. ಅಲ್ಲದೇ ಶಾಲೆಯ ಭೇಟಿಗೆ ತೆರಳಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.
ಆಕ್ರಮಣಕಾರಿ ಟೆನಿಸ್ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಸ್ಪೇನ್ ಚಾಂಪಿಯನ್ ಆಟಗಾರ ಹಾಗೂ ಕಿಂಗ್ ಆಫ್ ಕ್ಲೇ ಖ್ಯಾತಿಯ ರಾಫೆಲ್ ನಡಾಲ್ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಕಿಂಗ್ ಆಫ್ ಕ್ಲೇ ಎಂದೇ ಪ್ರಸಿದ್ಧಿಯಾಗಿರುವ ರಫೆಲ್ ನಡಾಲ್ ನ.19 ರಂದು ನಡೆದ ನೆದರ್‌ಲ್ಯಾಂಡ್ ವಿರುದ್ಧದ ಡೇವಿಸ್ ಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದರು. ಈ ಮೂಲಕ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಿಸಿದರು. ನಿವೃತ್ತಿ ಘೋಷಿಸಿದ ಬಳಿಕ ಸ್ಪ್ಯಾನಿಷ್ ರಾಷ್ಟ್ರಗೀತೆಯ ಸಂದರ್ಭದಲ್ಲಿ ರಫೆಲ್ ಭಾವುಕರಾದರು. ಇನ್ನೂ 10,000ಕ್ಕೂ ಹೆಚ್ಚು ಅಭಿಮಾನಿಗಳು “ರಾಫಾ, ರಾಫಾ” ಎಂದು ಕೂಗಿ ಹುರಿದುಂಬಿಸಿದರು. https://ainlivenews.com/do-you-have-a-500-rupee-note-you-are-an-agbodu-millionaire-in-no-time/ ಈ ಕುರಿತು ರಫೆಲ್ ಮಾತನಾಡಿ, ಇಂದು ನನ್ನ ಭಾವನಾತ್ಮಕ ದಿನ, ವೃತ್ತಿಪರನಾಗಿ ಇಂದು ನನ್ನ ಕೊನೆಯ ಪಂದ್ಯ. ಕೊನೆಯ ಬಾರಿ ಈ ರೀತಿಯಾಗಿ ರಾಷ್ಟ್ರಗೀತೆಯನ್ನು ಕೇಳುವುದು ಒಂದು ವಿಶೇಷ ಭಾವನೆ ಎಂದು ತಿಳಿಸಿದರು. 2004ರಲ್ಲಿ ವೃತ್ತಿಜೀವನಕ್ಕೆ ಕಾಲಿಟ್ಟ ರಫೆಲ್ 30 ಡೇವಿಸ್ ಕಪ್ ಸಿಂಗಲ್ಸ್ ಪಂದ್ಯಗಳಲ್ಲಿ 29 ಪಂದ್ಯಗಳನ್ನು…
vvvvvvccc