Author: AIN Admin

ಬೆಂಗಳೂರು: ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್​ ಯುವ ಘಟಕ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್​ಡಿ ದೇವೇಗೌಡ, ಹೆಚ್​ಡಿ ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನಾನು ಭರವಸೆ ಕೊಟ್ಟಿದ್ದೆ. ಆ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದಲ್ಲ. ನಾನು ಕೊಟ್ಟ ಮಾತನ್ನು ಹಿಂಪಡೆಯಲ್ಲ ಎಂದರು. https://ainlivenews.com/good-news-for-the-unemployed-applications-invited-for-pm-internship-scheme-rs-5000-allowance-per-month/ ನಾನು ರಾಮನಗರದಲ್ಲಿ ಜನಿಸಿಲ್ಲ, ಆದರೆ, ಭಾವನಾತ್ಮಕ ಸಂಬಂಧವಿದೆ. ನಾನು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತೇನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಒಂದು ಸಮುದಾಯದ ಮತದಾರರು ಕಾಂಗ್ರೆಸ್​ ಪರ ನಿಂತಿದ್ದಾರೆ. ಸೋಲಿನಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Read More

ಚಿಕ್ಕೋಡಿ: ಕಾಂಗ್ರೆಸ್ ಪಕ್ಷಕ್ಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವವನ್ನ ಜನ ತಿರಸ್ಕಾರ ಮಾಡಿದ್ದಾರೆ. ವಿಜಯೇಂದ್ರ ಅವರಿಗೆ ಸ್ವಾಭಿಮಾನ ಇದ್ದರೆ ಅವರೇ ರಾಜೀನಾಮೆ ನೀಡಬೇಕು. ವಿಜಯೇಂದ್ರ ನಾಚಿಕೆಗೇಡಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಹರಿಹಾಯ್ದರು. https://ainlivenews.com/the-government-is-providing-90-subsidy-for-the-purchase-of-mini-power-tiller-apply-today/ ಭರತ ಬೊಮ್ಮಾಯಿ ಸೋಲು ನಿಜಕ್ಕೂ ಆಘಾತ ತಂದಿದೆ. ರೌಡಿಯನ್ನ ಜನ ಆಯ್ಕೆ ಮಾಡಿದ್ದಾರೆ. ಜನರ ತೀರ್ಪು ಬಿಜೆಪಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುವುದಿದೆ. ಹೊಸ ನಾಯಕತ್ವ ರಾಜ್ಯಕ್ಕೆ ಮತ್ತು ಬಿಜೆಪಿಗೆ ಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ಗುಡುಗಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಸೋಲು ದುರ್ದೈವ. ಯೋಗೇಶ್ವರ ಅವರಿಗೆ ಟಿಕೆಟ್ ಕೊಡುವಂತೆ ನಾನು ಹೇಳಿದ್ದೆ. ಪಾಪ ಕೊನೆಯ ವರೆಗೂ ಯೋಗೇಶ್ವರ್‌ ಬಿಜೆಪಿ ಪರ ಒಲವು ತೋರಿದ್ದರು. ಜನ ಯೋಗೇಶ್ವರ್‌ ಕೆಲಸ ಮಾಡಿದ್ದನ್ನ ನೋಡಿ ಗೆಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರು ಮುಂದೆ ಯೋಚನೆ ಮಾಡಿ ಪಕ್ಷ ಸಂಘಟನೆ…

Read More

ಬಳ್ಳಾರಿ ಸಂಡೂರು ಕಾಂಗ್ರೆಸ್‌ನ ಭದ್ರಕೋಟೆ ಎನ್ನುವುದು ಮತ್ತೆ ಸಾಭೀತಾಗಿದೆ. ಆದರೆ ಗೆಲುವಿನ ಅಂತರ(9649)ದ ಪ್ರಮಾಣ ತಗ್ಗಿರುವುದು ಗೆಲುವಿನಲ್ಲೂ ಕಾಂಗ್ರೆಸ್ ನಾಯಕರು ಚಿಂತಿಗೀಡಾಗಿದ್ದರೆ, ಬಿಜೆಪಿಗೆ ಹೊಸ ಹುಮ್ಮಸ್ಸು ನೀಡಿದೆ. ನ.13ರಂದು ನಡೆದಿದ್ದ ಸಂಡೂರು ಮತ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದ ಬಳಿಕದ ವಿಶ್ಲೇಷಣೆ ಇದು. ಅಖಂಡ ಬಳ್ಳಾರಿ ಜಿಲ್ಲೆಯಲ್ಲೇ ಸಂಡೂರು ಮೊದಲಿಂದಲೂ ಕಾಂಗ್ರೆಸ್ ಹಿಡಿತಕ್ಕೆ ಒಳಪಟ್ಟಿದೆ. ಲಾಡ್-ಘೋರ್ಪಡೆ ಕುಟುಂಬಗಳ ಪ್ರಾಬಲ್ಯ ಹೊಂದಿರುವ ಕ್ಷೇತ್ರ. ಮತ್ತೊಮ್ಮೆ ಕಾಂಗ್ರೆಸ್‌ನ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಗೆಲುವಿನ ಮೂಲಕ ಎರಡು ಐತಿಹ್ಯ ಘಟನೆಗಳಿಗೆ ಸಾಕ್ಷಿಯಾಗಿದೆ. ಪತಿ ತುಕಾರಂ ಸಂಸದರಿರುವಾಗಲೇ ಪತ್ನಿಯನ್ನು ವಿಧಾನಸಭೆಗೆ ಕಳುಹಿಸಿ ಹೊಸ ಘಟನೆಗೆ ಸಾಕ್ಷಿಯಾಗಿದರೆ, ಸಂಡೂರು ವಿಧಾನ ಸಭೆ ಅಸ್ತಿತ್ವದ ಬಳಿಕ ಇದುವರೆಗೂ ಘೋರ್ಪಡೆಯವರೇ ಅತ್ಯಧಿಕ ಬಾರಿ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆದರೆ ತುಕಾರಂ ಕುಟುಂಬ ಈ ದಾಖಲೆಯ ಹತ್ತಿರ ದಾಪುಗಾಲಿಟ್ಟಿರುವುದು ಎರಡನೇ ಇತಿಹಾಸವಾಗಿದೆ. https://ainlivenews.com/the-government-is-providing-90-subsidy-for-the-purchase-of-mini-power-tiller-apply-today/ ಭದ್ರ ಕೋಟೆ: 1957ರಲ್ಲಿ ಅಸ್ತಿತ್ವಕ್ಕೆ ಬಂದ ಸಂಡೂರಿನಲ್ಲಿ ಎಂ.ವೈ ಘೋರ್ಪಡೆ ಅವರು 30 ವರ್ಷ ಇಲ್ಲಿ ಶಾಸಕರು.…

Read More

ಬಿಜೆಪಿಯ ಕೋಮು ಆಧಾರಿತ ಕ್ಷುಲ್ಲಕ ರಾಜಕಾರಣ ನಡೆಯಲ್ಲ ಎಂಬ ಸಂದೇಶವನ್ನ ಮೂರು ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಮೂಲಕ ತೋರ್ಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಯಲ್ಲಿ ಬಿಜೆಪಿ ಸುಳ್ಳಿನ ಪ್ರಚಾರ ನಡೆಸಿತ್ತು ಎಂದರು. ಒಂದು ಸಮುದಾಯವನ್ನ ಟಾರ್ಗೆಟ್ ಮಾಡುವ ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನ ನಾವು ಒಪ್ಪುವುದಿಲ್ಲ ಎಂಬ ಸಂದೇಶವನ್ನ ಜನರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರು ಸ್ಪಂದಿಸಿದ್ದಾರೆ. ಈ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಒಳ್ಳೆಯ ಕೆಲಸಗಳನ್ನ ಮಾಡಲು ಪ್ರೇರಣೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. https://ainlivenews.com/the-government-is-providing-90-subsidy-for-the-purchase-of-mini-power-tiller-apply-today/ ಸಂಡೂರ ಕಾಂಗ್ರೆಸ್ ಗೆದ್ದ ಕ್ಷೇತ್ರವಾಗಿತ್ತು. ಅಲ್ಲಿ ಗೆಲ್ಲುವ ವಿಶ್ವಾಸವಿತ್ತು. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲುವು ಪಕ್ಷಕ್ಕೆ ಹೆಚ್ಚಿನ ಬಲ ತುಂಬಲಿದೆ. ಅಲ್ಪಸಂಖ್ಯಾತ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ಬಿಜೆಪಿಯ ಕೋಮು ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿದಂತಾಗಿದೆ. ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಮೊದಲಿನಿಂದಲು ಬೆಂಬಲವಿತ್ತು.…

Read More

ಬಳ್ಳಾರಿ: ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದ ಹಿರಿಯ ‌ನಾಯಕರಿಗೂ ನಮ್ಮ ಗೆಲುವಿಗೆ ಶ್ರಮಿಸಿದ್ದಾರೆ‌. ನಮ್ಮ ಮೇಲೆ ಕ್ಷೇತ್ರದ ಮತದಾರರು ವಿಶ್ವಾಸ ಇಟ್ಟಿದ್ದಾರೆ. ಈ ಗೆಲುವುನಿಂದ ಇನ್ನೂ ಜವಾಬ್ದಾರಿ ಹೆಚ್ಚಿಸಿತು. ಮತದಾರರ ನಿರೀಕ್ಷೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವೆ. ನಾಯಕರ ನನ್ನ ಮೇಲೆ ನಂಬಿಕೆ ಇಟ್ಟು ಟಿಕೆಟ್ ನೀಡಿದ್ದರು. ಹೀಗಾಗಿ ನಾನು ಸೇವೆ ಮಾಡಲು ಶ್ರಮಿಸುವೆ. ಕಳೆದ ಬಾರಿ ಗಿಂತ ಈ ಬಾರಿ ಕಾಂಗ್ರೆಸ್ ಗೆ ಶೇ.4% ಮತ ಹೆಚ್ಚಿವೆ. ಜಿಲ್ಲೆಗೆ ಪತಿ ತುಕಾರಾಮ್ ಸಂಸದರಾಗಿ, ನಾನು ತಾಲೂಕು ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುವೆ. ಕ್ಷೇತ್ರದಲ್ಲಿ ಮಲ್ಟಿ ಸೆಪ್ಷಾಲಿಟಿ ಆಸ್ಪತ್ರೆ, ಬಸ್ ನಿಲ್ದಾಣ ಅಭಿವೃದ್ಧಿ ಮಾಡಲು ಮೊದಲು ಅದ್ಯತೆ ನೀಡುವೆ ಎಂದರು. https://ainlivenews.com/people-dont-accept-bait-vote-for-good-work-minister-madhu-bangarappa/

Read More

ಶಿವಮೊಗ್ಗ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಹಿನ್ನೆಲೆ, ಸಚಿವ ಮಧು ಬಂಗಾರಪ್ಪ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಶ್ವಾಸದ ದಿನ ಇವತ್ತು ಬಹಳ ಸಂತೋಷ ಆಗುತ್ತಿದೆ. ರಾಜ್ಯದ ಜನರು ಕಾಂಗ್ರೆಸ್ ಸರ್ಕಾರಕ್ಕೆ ವಿಶ್ವಾಸ ಹೆಚ್ಚು ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಕಾರ್ಯಕರ್ತರು ಸೇರಿದಂತೆ ಎಲ್ಲರು ಮನೆಮನೆಗೆ ಹೋಗಿ ಮತ ಚಲಾಯಿಸುವಂತೆ ಮಾಡಿದ್ದಾರೆ. ಮುಖ್ಯಂತ್ರಿಗಳಿಗೆ ಶುಭಾಶಯ ಕೋರುತ್ತೇನೆ. ವಿರೋಧ ಪಕ್ಷಗಳು ತುಂಬಾ ಕೆಳಮಟ್ಟದಲ್ಲಿ ಹೋಗಿ ಸಿಎಂ ಕುರ್ಚಿಗೆ ಅವಮಾನ ಮಾಡಿದ್ದರು. ವಿರೋಧ ಪಕ್ಷದವರಿಗೆ ನಿಮ್ಮ ಯೋಗ್ಯತೆ ಇಷ್ಟೇ ಅಂತ ತೋರಿಸಿದ್ದಾರೆ ಎಂದರು. https://ainlivenews.com/this-by-election-result-the-people-of-the-states-prelude-to-the-2028-election-result-d-k-shivakumar-is-confident/ ಶಿಗ್ಗಾಂವಿ ಉಸ್ತುವಾರಿ ನನಗೆ ಕೊಟ್ಟಿದ್ದರು ಹೆಮ್ಮೆ ಇದೆ ಕೆಲಸ ಮಾಡಿದ್ದಕ್ಕೆ, ಚನ್ನಪಟ್ಟಣ ಸಹ ನಾನು ಹೋಗಿದ್ದೆ ಅಮಿಷಕ್ಕೆ ಚನ್ನಪಟ್ಟಣದ ಜನ ಇಲ್ಲ. ಪ್ರಜಾಪ್ರಭುತ್ವ ಉಳಿಸುವ ಕೆಲಸ ಮತದಾರರು ಮಾಡಿದ್ದಾರೆ ಎಂದರು. ವಿಜಯೇಂದ್ರ ಅವರಿಗೆ ಬೇರೆ ಸ್ಥಾನದ ದಿನಗಳು ಹತ್ತಿರ ಇದೆ. ಇದರಲ್ಲಿ ಯತ್ನಾಳ್ ಸಕ್ಸಸ್ ಆಗಿದ್ದಾರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಿಜೆಪಿಯವರ ಮನೆಯಲ್ಲಿ ಬೆಳಕಾಗುತ್ತಿರೊದು…

Read More

ಬಳ್ಳಾರಿ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಸಾಧಿಸಿದೆ. ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಜಯ ಸಾಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ತುಕಾರಂ, ತಮ್ಮ ಪಕ್ಷದ ಎಲ್ಲಾ ನಾಯಕರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸಿಎಂ, ಡಿಸಿಎಂ ಸೇರಿ ಹಲವು ಸಚಿವರು ನಮ್ಮ ಪರವಾಗಿ ಪ್ರಚಾರ ಮಾಡಿದ್ದಾರೆ. ಅನ್ನಪೂರ್ಣ ‌ತುಕಾರಂ ಮೇಲೆ ವಿಶ್ವಾಸವಿಟ್ಟು ಜನರು ಆಶೀರ್ವಾದ ಮಾಡಿದ್ದಾರೆ. ಸಂಡೂರು ಕುಮಾರಸ್ವಾಮಿ ‌ಆಶಿರ್ವಾದವೂ ನಮ್ಮ  ಮೇಲಿದೆ. ಸೋಲಿನ ಹತಾಶೆಯಿಂದ ಬಿಜೆಪಿಗರು ಏನೇನೂ ಮಾತಾಡುತ್ತಿದ್ದಾರೆ. ಅವರಿಗೆ ಸೋಲಿನ ಬಗ್ಗೆ ‌ಪ್ರತಿಕ್ರಿಯೆ ಕೊಡಲು ಏನು ಇಲ್ಲದ ಕಾರಣ ಹೀಗೆ ಮಾತನಾಡ್ತಾರೆ ಎಂದರು. ನಾನು‌, ನನ್ನ ಪತ್ನಿ ಸಂಡೂರು ಕ್ಷೇತ್ರದ ‌ಅಭಿವೃದ್ಧಿಗೆ ಜೋಡು ಎತ್ತು ರೀತಿಯಲ್ಲಿ ಕೆಲಸ ಮಾಡುತ್ತೇವೆ. ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ‌ಇದ್ದಾಗ ರಿಪಬ್ಲಿಕ್ ಆಫ್ ಬಳ್ಳಾರಿ ಅಂತಾ ಕುಖ್ಯಾತಿ ಆಗಿತ್ತು. ಈಗ ಜನರು ಜಾಗೃತರಾಗಿದ್ದಾರೆ ಅಂತವರನ್ನು ತಿರಸ್ಕಾರ ಮಾಡಿದ್ದಾರೆ ಎಂದರು. https://ainlivenews.com/celebration-of-congress-workers-in-kolar/

Read More

ಕೋಲಾರ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿಗಳಿಸಿದ್ದು, ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಸಿದರು. ಮಾಲೂರು ಶಾಸಕ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ಭರ್ಜರಿ ಸಂಭ್ರಮಾಚರಣೆ ನಡೆಯಿತು. ಸ್ವತಃ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಕಾರ್ಯಕರ್ತರಿಗೆ ಸಿಹಿ ತಿನ್ನಿಸಿದರು. ನೂರಾರು ಕಾರ್ಯಕರ್ತರು, ಕಾಂಗ್ರೆಸ್‌ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. https://ainlivenews.com/deve-gowdas-selfishness-to-win-his-grandson-was-not-recognized-by-the-people-cp-yogeshwar/

Read More

ಬೆಂಗಳೂರು: “ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಕೊಟ್ಟಿದ್ದಾರೆ. ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಈ ಉಪಚುನಾವಣೆಗಳ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆಯೇ ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ಮೂರು ಉಪಚುನಾವಣೆಗಳ ಫಲಿತಾಂಶ ಬಂದಿದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯೋದಿಲ್ಲ, ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ ಸಂದೇಶ ನೀಡಿದ್ದಾರೆ” ಎಂದು ತಿಳಿಸಿದರು. https://ainlivenews.com/the-government-is-providing-90-subsidy-for-the-purchase-of-mini-power-tiller-apply-today/ “ವಿರೋಧ ಪಕ್ಷಗಳ ನಾಯಕರು ರಾಜ್ಯದಲ್ಲಿ…

Read More

ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್‌, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾಂವಿಯಲ್ಲಿ ಯಾಸೀರ್‌ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಜನ ಬೆಂಬಲಕ್ಕೆ ಕಾಂಗ್ರೆಸ್‌ ಕೃತಜ್ಞತೆ ಸಲ್ಲಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲೂ ಕಾಂಗ್ರೆಸ್​ ವಿಜಯಪತಾಕೆ ಹಾರಿಸಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ.  ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಮಗ ಬಿಜೆಪಿ ಅಭ್ಯರ್ಥಿ ಭರತ್​ ಬೊಮ್ಮಾಯಿ ಅವರಿಗೆ ಸೋಲಾಗಿದೆ. https://ainlivenews.com/huge-subsidy-for-farmers-who-buy-tractors-under-pm-kisan-yojana-apply-today/ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ್​​ ಅವರಿಗೆ ಗೆಲುವಾಗಿದೆ. ಎನ್​ಡಿಎ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ. ಈ ಮೂಲಕ ನಿಖಿಲ್​ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ. ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ವಿರುದ್ಧ…

Read More