ಧಾರವಾಡ: ಅದಾನಿ ಬಗ್ಗೆ ಬಿಜೆಪಿಯವರು ಮಾತುಗಳನ್ನೇ ಆಡುತ್ತಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿಕೆಗೆ ಶಾಸಕ ಮಹೇಶ ಟೆಂಗಿನಕಾಯಿ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಅದಾನಿ ಬಗ್ಗೆ ನಾವ್ಯಾಕೆ ಮಾತನಾಡಬೇಕು. ಅವರು ನಮಗೆ ಹತ್ತಿದವರಲ್ಲ. ಅವರ ಬಗ್ಗೆ ಕೇಸ್ ಆಗಿರುವುದು ಅಮೇರಿಕಾದಲ್ಲಿ. ಅಲ್ಲಿನ ಕಾನೂನು ಪ್ರಕಾರ ಕ್ರಮ ಆಗುತ್ತದೆ. ನಮ್ಮ ರಾಜ್ಯದಲ್ಲೇ ವಕ್ಫ, ಮುಡಾ ಹಾಗೂ ವಾಲ್ಮೀಕಿ ಹಗರಣದ ಬಗ್ಗೆ ಕಾಂಗ್ರೆಸ್‌ನ ಎಷ್ಟು ಶಾಸಕರು, ಸಚಿವರು ಮಾತನಾಡಿದ್ದಾರೆ ಹೇಳಿ ನೋಡೋಣ ಎಂದಿದ್ದಾರೆ. https://ainlivenews.com/huge-subsidy-for-farmers-who-buy-tractors-under-pm-kisan-yojana-apply-today/ ಅದಾನಿ ಬಗ್ಗೆ ಮಾತನಾಡುವ ಅವಶ್ಯಕತೆ ನಮಗಿಲ್ಲ. ಅಮೇರಿಕಾದ ನ್ಯಾಯಾಲಯದಲ್ಲಿ ಕೇಸ್ ಇದೆ. ಭಾರತದಲ್ಲಿ ಆಗಿದ್ದರೆ ನಾವು ಮಾತನಾಡುತ್ತಿದ್ದೆವು. ಅದಾನಿ ಬಗ್ಗೆ ನಮಗೇನು ಪ್ರೀತಿ, ಪ್ರೇಮ ಇಲ್ಲ. ಅವರೇನು ನಮಗೆ ಹತ್ತಿದವರಲ್ಲ, ಹೊಂದಿದವರಲ್ಲ. ಇವತ್ತು ಇಡೀ ರಾಜ್ಯದಲ್ಲಿ ಲ್ಯಾಂಡ್ ಜಿಹಾದ್ ನಡೆದಿದೆ. ಭೂಮಿ ಕಬಳಿಸುವ ಹುನ್ನಾರ ನಡೆದಿದೆ ಇದರ ಬಗ್ಗೆ ಕಾಂಗ್ರೆಸ್‌ನ ಎಷ್ಟು ಶಾಸಕರು, ಸಚಿವರು ಮಾತನಾಡಿದ್ದಾರೆ? ವಾಲ್ಮೀಕಿ ಹಗರಣದ ಬಗ್ಗೆ ಎಷ್ಟು ಜನ ಆ…
Author: AIN Admin
ಬೆಂಗಳೂರು: ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ಸೋಲಿಗೆ ಕಾರಣ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ಸೋಲಿಗೆ ಕಾರಣ. ನಾವು ಒಂದು ವರ್ಷ, ಆರು ತಿಂಗಳಿಂದಲೇ ಅಭ್ಯರ್ಥಿ ತಯಾರು ಮಾಡಿ ಬಿಟ್ಟಿದ್ದರೆ ಮೂರು ಕ್ಷೇತ್ರಗಳಲ್ಲಿ ಒಳ್ಳೆಯ ಫಲಿತಾಂಶ ಬರುತ್ತಿತ್ತು ನಾವು ಕೊನೆಯ ಹಂತದಲ್ಲಿ ಚುನಾವಣೆ ಘೋಷಣೆ ಆದಮೇಲೆ ಅಭ್ಯರ್ಥಿ ತಯಾರು ಮಾಡಿದ್ದು ಕೂಡಾ ಹಿನ್ನೆಡೆ ಆಯ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. https://ainlivenews.com/huge-subsidy-for-farmers-who-buy-tractors-under-pm-kisan-yojana-apply-today/ ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕೊನೆಯವರೆಗೂ ನಾವು ಅಭ್ಯರ್ಥಿ ಘೋಷಿಸಿರಲಿಲ್ಲ. ಬೇಗ ಅಭ್ಯರ್ಥಿ ಘೋಷಣೆ ಮಾಡಿದ್ದು ಕಾಂಗ್ರೆಸ್ಗೆ ಪ್ಲಸ್ ಪಾಯಿಂಟ್ ಆಗಿದೆ. ರಾಜೀನಾಮೆ ಕೊಟ್ಟ ಕೂಡಲೇ ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ್ದರೆ ಗೆಲುವು ಆಗುತ್ತಿತ್ತು ಎಂದರು.
ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆಯಲ್ಲಿ ಎನ್‌ಡಿಗೆ ಹಿನ್ನಡೆಯಾಗಿದೆ. ಇದಕ್ಕೆ ಕಾರಣವಾದ ಪ್ರಮುಖ ಅಂಶಗಲ ಮಾಹಿತ ಇಲ್ಲಿದೆ ನೋಡಿ. 1. ಅಭ್ಯರ್ಥಿಗಳ ಆಯ್ಕೆಯಲ್ಲಿ ನಿಗದಿತವಾದ ನಿರ್ಧಾರವಿಲ್ಲದೇ ಇರುವುದು. 2. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಅತಿಯಾದ ಆತ್ಮವಿಶ್ವಾಸ. 3. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಗಾಲಿ ಜನಾರ್ದನ ರೆಡ್ಡಿ ಮೇಲೆ ನಂಬಿಕೆಯಿಟ್ಟು ಅವರು ಹೇಳಿದ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದು. 4. ಅದೇ ಸಂಡೂರು ಕ್ಷೇತ್ರದಲ್ಲಿ ರಾಮುಲು ಕಡೆಗಣಿಸಿ, ಗಾಲಿ ಜನಾರ್ದನ ರೆಡ್ಡಿ ಮಾತಿಗೆ ಮನ್ನಣೆ ಕೊಟ್ಟಿದ್ದು, ಸ್ಥಳೀಯ ನಾಯಕರು ಸರಿಯಾಗಿ ಕಾರ್ಯನಿರ್ವಹಣೆ ಮಾಡದೇ ಇರುವುದು. 5. ಇತ್ತ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಸಕರಾಗಿದ್ದಾಗ ಅಭಿವೃದ್ಧಿ ಮಾಡಿಲ್ಲ ಎಂಬ ವಿಚಾರ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡಿದ್ದು. 6. ಬಸವರಾಜ ಬೊಮ್ಮಾಯಿ ನಮ್ಮ ಕುಟುಂಬಕ್ಕೆ ಟಿಕೆಟ್ ಬೇಡ ಬೇಡ ಎಂದು ಕಡೆ ಘಳಿಗೆಯಲ್ಲಿ ಗಿಟ್ಟಿಸಿಕೊಂಡಿದ್ದು, ಕೊನೆ ಹಂತದಲ್ಲಿ ಅತಿಯಾದ ಆತ್ಮವಿಶ್ವಾಸ…
ಬೆಳಗಾವಿ: ಉಪಚುನಾವಣೆ ಫಲಿತಾಂಶ ಟೆನ್ಷನ್ ಮಧ್ಯೆಯೇ ಸಂಸದ ಬಸವರಾಜ್ ಬೊಮ್ಮಾಯಿ ಕುಟುಂಬ ಮನೆದೇವಿ ದರ್ಶನ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದ ರೇಣುಕಾದೇವಿಯ ಆಶೀರ್ವಾದ ಪಡೆದರ. ಸಂಸದ ಬಸವರಾಜ್ ಬೊಮ್ಮಾಯಿ, ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೇರಿ ಕುಟುಂಬ ಸದಸ್ಯರು, ಸವದತ್ತಿಯ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಸ್ಥಾನ ಟ್ರಸ್ಟ್ ಕಮಿಟಿಯಿಂದ ಸಂಸದ ಬಸವರಾಜ್ ಬೊಮ್ಮಾಯಿಗೆ ಸನ್ಮಾನ ಮಾಡಲಾಯಿತು. https://ainlivenews.com/bjp-stronghold-finally-captured-congress-workers-celebrate/
ಬೆಂಗಳೂರು: ಸರ್ಕಾರವನ್ನ ಯಾರಿಂದಲೂ ಕಿತ್ತು ಒಗೆಯಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅನುಭವ, ಅವರ ವೋಟು ಹಾಗೂ ಕಾಂಗ್ರೆಸ್ ವೋಟ್‌ನಿಂದ ಗೆಲ್ಲುತ್ತಿದ್ದಾರೆ. ಜೆಡಿಎಸ್ ಅವರು ಪದೇ ಪದೇ ಅವರು ಕುಟುಂಬಕ್ಕೆ ಟಿಕಟ್ ಕೊಡುತ್ತಿರುವುದು ವಿರೋಧ ಆಗಿರಬಹುದು. https://ainlivenews.com/huge-subsidy-for-farmers-who-buy-tractors-under-pm-kisan-yojana-apply-today/ ದೇವೇಗೌಡರು ಸರ್ಕಾರ ಕಿತ್ತು ಒಗೆಯುತ್ತೇನೆ ಎಂದಿದ್ದರು. ಆದರೆ ಸರ್ಕಾರವನ್ನ ಯಾರಿಂದಲೂ ಕಿತ್ತು ಒಗೆಯಲು ಸಾಧ್ಯವಿಲ್ಲ. ಜನರು ಅದನ್ನ ನಿರ್ಧಾರ ಮಾಡುತ್ತಾರೆ. ತಮ್ಮದೇ ಕುಟುಂಬದ ಅಭ್ಯರ್ಥಿ ಹಾಕಿರುವುದರಿಂದ ಜನ ನೋಡಿ ಮತ ಹಾಕಿದ್ದಾರೆ. ನಮ್ಮ ಪಕ್ಷದ ನಾಯಕರು ಒಟ್ಟಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.
ಹಾವೇರಿ: ಬೊಮ್ಮಾಯಿ ಭದ್ರಕೋಟೆ ಕೊನೆಗೂ ಕೈ ವಶವಾಗಿದ್ದು, ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಸತತ 6 ಸೋಲಿನ ಬಳಿಕ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭೂತ ಪೂರ್ವ ಗೆಲುವು ಸಾಧಿಸಿದ್ದು, ಈ ಮೂಲಕ ಉಪಕದನದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಸೋಲಿನ ಅಘಾತ ಎದುರಾಗಿದೆ. 2008 ರಿಂದ ಶಿಗ್ಗಾಂವಿಯಲ್ಲಿ ಬಸವರಾಜ್ ಬೊಮ್ಮಾಯಿ 4 ಸಲ ಗೆದ್ದಿದ್ದರು. ಆದರೆ ಇದೀಗ ಬೊಮ್ಮಾಯಿ ಪುತ್ರ ಭರತ್ ಗೆ ತೀವ್ರ ಮುಖಭಂಗವಾಗಿದೆ. 1999 ರಿಂದ ಸತತವಾಗಿ ಸೋತಿದ್ದ ಕೈ ಪಡೆಯು ಭಾರೀ ರಣತಂತ್ರ ರೂಪಿಸಿತ್ತು. ಸಿಎಂ, ಡಿಸಿಎಂ ಆದಿಯಾಗಿ ಪ್ರಚಾರ ಕಣದಲ್ಲಿ ಅಬ್ಬರಿಸಿದ್ದರು. ಅಲ್ಲದೇ ಸತೀಸ್ ಜಾರಕಿಹೊಳಿ ನೇತೃತ್ವದ ತಂಡ ಶಿಗ್ಗಾಂವಿಯಲ್ಲಿ ಅಹಿಂದ ಮತಗಳ ಕ್ರೋಢೀಕರಣ ಮಾಡಿದ್ದರು. https://ainlivenews.com/congress-wins-in-sandur-with-money-strength-bjp-candidate-bangaru-hanumantu/ ಇನ್ನೂ ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆಲುವಿಗಾಗಿ ಕಾಂಗ್ರೆಸ್ ದ್ವಜದಲ್ಲಿ BYE BYE ಬೊಮ್ಮಾಯಿ ಎಂದು ಬರೆಸಿದ್ದು, BYE BYE ಬೊಮ್ಮಾಯಿ ದ್ವಜ…
ಬಳ್ಳಾರಿ : ತೀವ್ರ ಕುತೂಹಲ ಕೆರಳಿಸಿದ್ದ ಸಂಡೂರಿನಲ್ಲಿ ಕಾಂಗ್ರೆಸ್ ಆಭ್ಯರ್ಥಿ ಅನ್ನಪೂರ್ಣ ತುಕಾರಂ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 18ನೇ ಸುತ್ತಿನಲ್ಲಿ ಕೈ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 9,568 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಪರಾಜಿತ ಅಭ್ಯರ್ಥಿ ಬಂಗಾರಿ ಹನುಮಂತು , ಈ ಸೋಲಿನ ಹೊಣೆಯನ್ನು ನಾನು ಒತ್ತುಕೊಳ್ಳುತ್ತೇನೆ. ಯಾರ ಮೇಲೂ ಇದನ್ನು ಹೊರಿಸಲ್ಲ, ಕಾಂಗ್ರೆಸ್ ಹಣ ಬಲದಿಂದ ಈ ಚುನಾವಣೆ ಗೆದ್ದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಇಲ್ಲಿಯೇ ಠಿಕಾಣಿ ಹೂಡಿದ್ದರು. ಸಚಿವ ಶಿವರಾಜ ತಂಗಡಗಿ ಉಸ್ತುವಾರಿ ಹೊತ್ತಿದ್ದ ಪ್ರದೇಶ ಸೇರಿ ಸಚಿವರು ಇದ್ದ ಪ್ರದೇಶದಲ್ಲಿ ನಮಗೆ ಹಿನ್ನಡೆ ಆಗಿದೆ. ಅಂಕಿ-ಅಂಶಗಳ ಪ್ರಕಾರ ನಮಗೆ ಸೋಲೇ ಇಲ್ಲ. ಚುನಾವಣೆ ಹತ್ತಿರ ಇದ್ದಾಗ ಎಲ್ಲ ಮಹಿಳೆಯರ ಖಾತೆಗೆ ೨ ಸಾವಿರ ಹಣ ಹಾಕಿದರು. ವೋಟಿಗೆ ೨ ಸಾವಿರ ಕೊಟ್ಟು ಮತಗಳನ್ನು ಖರೀದಿ ಮಾಡಿದರು. ೨೦೨೮ ರಲ್ಲಿ ಸಂಡೂರಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ನಾನು ಅಲ್ಲಿಯೇ ಮನೆ ಮಾಡಿ ಜನರ…
ಕಲುಬುರಗಿ: ನಾವು ಎಷ್ಟೇ ಅವರ ಪರ ಕೆಲಸ ಮಾಡಿದ್ರು ಮುಸ್ಲಿಮರು ನಮಗೆ ಮತ ಹಾಕಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಕಲುಬುರಗಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಅಲ್ಲಿನ ಮುಸ್ಲಿಂ ಮತಗಳ ಸಂಖ್ಯೆ ಜಾಸ್ತಿ ಇದೆ. ಹಾಗಾಗಿ ಯೋಗೇಶ್ವರ್‌ಗೆ ಮುನ್ನಡೆ ಇರಬೇಕು. ನಾವು ಎಷ್ಟೇ ಅವರ ಪರ ಕೆಲಸ ಮಾಡಿದ್ರು ಮುಸ್ಲಿಮರು ನಮಗೆ ಮತ ಹಾಕಲ್ಲ. https://ainlivenews.com/huge-subsidy-for-farmers-who-buy-tractors-under-pm-kisan-yojana-apply-today/ ಶಿಗ್ಗಾಂವಿ ನಗರದಲ್ಲೂ ಮುಸ್ಲಿಂ ಮತಗಳು ಹೆಚ್ಚಾಗಿದೆ. ಓಲೈಕೆ ನಾವು ಮಾಡಲ್ಲ ಹಾಗಾಗಿ ಅವರು ನಮಗೆ ಮತ ಹಾಕಲ್ಲ. ತೀರ್ಪು ಏನೇ ಬಂದರೂ ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತೇವೆ. ಆದ್ರೆ ಕಾಂಗ್ರೆಸ್ ಮೂರು ಗೆದ್ದರೆ ಜನಾದೇಶ ಅಂತಾರೆ. ಬರಲಿಲ್ಲ ಅಂದ್ರೆ ಇವಿಎಂ ದೋಷ ಅಂತಾ ಹೇಳ್ತಾರೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಳಿ ಸರಣಿ ಅಪಘಾತ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಅವಘಡ ಸಂಭವಿಸಿದೆ. ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಣಭವಿಸಿದ್ದು, ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದ್ದು, ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬರ್ತಿದ್ದ ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. https://ainlivenews.com/kai-is-the-candidate-who-maintained-a-steady-lead-in-shiggamvi/
ಹಾವೇರಿ: ಶಿಗ್ಗಾಂವಿಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ನಿರಂತರ 13 ನೇ ಸುತ್ತು ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ 65,784 ಮತಗಳು ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಕೂಡ 75,780 ಮತಗಳ ಪಡೆಯುವ ಮೂಲಕ 9,996 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.