ಕೋಲಾರ : ಮಹಿಳೆಯರ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ನಡೆಯುವ ದೌರ್ಜನ್ಯ ದಬ್ಬಾಳಿಕೆಗಳಿಂದ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳುವ ಕುರಿತಂತೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಜಿ.ಎ ಮಂಜುನಾಥ್ ತಿಳಿಸಿದರು.
ಬೀದಿಗಿಳಿದು ಕಿತ್ತಾಡುವುದು ಸರಿಯಲ್ಲ: ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಡಿಕೆ ಸುರೇಶ್ ಅಸಮಾಧಾನ!
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ “ವಿಧಾನ್ ಸೆ ಸಮಾಧಾನ್” ಅಂಗವಾಗಿ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ವಾಟಿಸಿ ಮಾತನಾಡಿದ ಅವರು ಸರ್ಕಾರಗಳು ಮಹಿಳೆಯರ ಬಗ್ಗೆ ಸಾಕಷ್ಟು ಕಾಳಜಿ ವಹಿಸುತ್ತಿದ್ದು ದೌರ್ಜನ್ಯದ ಮಹಿಳೆಯರಿಗೆ ಉಚಿತ ಕಾನೂನು ಸಲಹೆ ನೀಡಲಾಗುತ್ತಿದೆ.
ಕಾನೂನಿನ ಸಲಹೆ ಅವಶ್ಯಕತೆ ಇರುವವರು ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದಾಗಿದೆ ಎಂದರು. ಮಹಿಳೆಯರಿಗೆ ಕಾನೂನು ಮೂಲಕ ಸಮಾಧಾನವನ್ನು ಪಡಿಸುವುದು ಹೇಗೆ ಎಂಬುದು ಕಾರ್ಯಕ್ರಮದ ಉದ್ದೇಶವಾಗಿದೆ ಮಹಿಳೆಯರು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆಯೂ ಅರಿವು ಹೊಂದುವುದು ಅಗತ್ಯವಾಗಿದೆ ಕುಟುಂಬ ನಿರ್ವಹಣೆಯಲ್ಲಿ ಹೇಗೆ ತಮ್ಮ ರಕ್ಷಣೆ ಮತ್ತು ಹಕ್ಕುಗಳನ್ನು ಪಡೆಯಲು ಸಾಧ್ಯ ಎಂಬುದನ್ನು ತಾವುಗಳು ತಿಳಿದು ಮತ್ತೊಬ್ಬರಿಗೂ ತಿಳಿಸುವ ಪ್ರಯತ್ನಗಳು ಆಗಬೇಕು ಎಂದು ತಿಳಿಸಿದರು.