ಬೆಂಗಳೂರು: ಇಂದು ವಿಧಾನಸೌಧದ ಕಛೇರಿಯಲ್ಲಿ ಸಚಿವ ಬಿ ಶ್ರೀರಾಮುಲು ವಿವಿಧ ವಿಷಯಗಳ ಕುರಿತು ಸಭೆ ನಡೆಸಿದರು. ಸಭೆಯಲ್ಲಿ ಸಾರಿಗೆ ಇಲಾಖೆಯು 2021-22 ನೇ ಸಾಲಿನಲ್ಲಿ ಸಾಧಿಸಿದ ಪ್ರಗತಿ ಹಾಗೂ ಸಾರಿಗೆ ಇಲಾಖೆಯ ನೌಕರರು ಮುಷ್ಕರದಲ್ಲಿ ನಿರತರಾದಾಗ ಅವರ ಮೇಲೆ ಶಿಸ್ತು ಕ್ರಮ, ವಜಾಗೊಳಿಸಲಾದ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಿದರು. ಸಾರಿಗೆ ಮುಷ್ಕರದ ವೇಳೆ ನಾಲ್ಕು ಸಾರಿಗೆ ನಿಗಮಗಳ ಪೈಕಿ ಸುಮಾರು 2 ಸಾವಿರಕ್ಕೂ ಅಧಿಕ ನೌಕರರನ್ನು ಅಮಾನತು ಮಾಡಲಾಗಿದೆ.
ಹೀಗಾಗಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಹೇಳಿದರು. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದರು.ಈ ವೇಳೆ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
