ದಾವಣಗೆರೆ:– ಬಿ. ವೈ. ವಿಜಯೇಂದ್ರರ ವಿರುದ್ಧ ಮಾತನಾಡಿದರೆ ಸುಮ್ಮನೆ ಕೂರಲ್ಲ ಎಂದು MP ರೇಣುಕಾಚಾರ್ಯ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರರ ವಿರುದ್ಧ ಇನ್ಮುಂದೆ ಮಾತನಾಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ. ನಮಗೂ ತಾಳ್ಮೆಯಿದೆ. ಅದನ್ನು ಪರೀಕ್ಷಿಸಬೇಡಿ ಎಂದು ಯತ್ನಾಳ್, ವಿ.ಸೋಮಣ್ಣ ವಿರುದ್ಧ ಎಂ.ಪಿ.ರೇಣುಕಾಚಾರ್ಯ ಅವರು ಗುಡುಗಿದ್ದಾರೆ.
ಯತ್ನಾಳ್, ಸೋಮಣ್ಣ ಎಲ್ಲಿಯವರೆಗೂ ಬಿಎಸ್ವೈ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಮಾತನಾಡುತ್ತಾರೋ ಅಲ್ಲಿಯವರೆಗೆ ನಾವು ಮಾತನಾಡುತ್ತೇವೆ. ಸಹಿಸಲು ಆಗದು. ನಮಗೂ ತಾಳ್ಮೆಯಿದೆ. ಪ್ರತಿದಿನ ಇಬ್ಬರೂ ಮಾತನಾಡಿದರೆ ಯಡಿಯೂರಪ್ಪರ ತೂಕ ಕಡಿಮೆಯಾಗುತ್ತಾ?
ಯಡಿಯೂರಪ್ಪನವರು ನಡೆದ ಹಾದಿಯ ಮಣ್ಣು ತೆಗೆದುಕೊಂಡು ಚಾಮರಾಜನಗರ, ಮೈಸೂರು ಜನರು ಹಣೆಗೆ ಇಟ್ಟುಕೊಳ್ಳುತ್ತಾರೆ. ಅಷ್ಟು ಹೋರಾಟದ ಮೂಲಕ ರಾಜಕಾರಣದಲ್ಲಿ ಮೇಲೆ ಬಂದು ಜನರಿಗಾಗಿ ಜೀವನ ಮುಡುಪಿಟ್ಟ ನಾಯಕ ಎಂದು ಹೇಳಿದರು.
ಯತ್ನಾಳ್, ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅದಕ್ಕೆ ಸದ್ಯದಲ್ಲೇ ಅಂತ್ಯ ಆಗುತ್ತೆ ಎಂಬ ಕಾರಣಕ್ಕೆ ಯಡಿಯೂರಪ್ಪ, ವಿಜಯೇಂದ್ರರನ್ನು ಜರನ ಮುಂದೆ ವಿಲನ್ ಮಾಡಲು ಹೊರಟಿದ್ದಾರೆ. ಟೀಕೆ ಮಾಡುವುದನ್ನು ಇನ್ಮುಂದೆ ಕೈ ಬಿಡಬೇಕು. ನಾವೆಲ್ಲರೂ ವಿಜಯೇಂದ್ರ ಅವರಿಗೆ ಸಾಥ್ ಕೊಡಬೇಕು. ಸಮಸ್ಯೆಗಳಿದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಇನ್ನು ಮುಂದಾದರೂ ತಿದ್ದಿಕೊಳ್ಳಲಿ. ಇಲ್ಲದಿದ್ದರೆ ನಾವು ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.