ಬೆಂಗಳೂರು: ಕಳೆದ ಐದಾರು ತಿಂಗಳಿನಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆ ಆಗಿದ್ದಾರೆ. ಲಿಂಗಾಯತ ಸಮುದಾಯ ಪಕ್ಷದ ಹಿಡಿತದಿಂದ ತಪ್ಪಿಹೋಗದಂತೆ ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆಯೂ ಸಿದ್ಧತೆ ನಡೆದಿದೆ.
Yadiyurappa: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ: BSY
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಹಿನ್ನೆಲೆ ಬೆಂಗಳೂರಿನಲ್ಲಿ ಸಂಸದ ಪಿ.ಸಿ. ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯೇಂದ್ರ ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಆಸೆಗಳು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರಗಿದೆ ಎಂದರು.