ಬೆಂಗಳೂರು: ನಟ ದರ್ಶನ್ (Darshan) ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್ (Photo Shoot) ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈಗ ಮುಂದಾಗಿದೆ.
ಹೌದು. ದರ್ಶನ್ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಈಗ ಪೊಲೀಸ್ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.
https://ainlivenews.com/are-the-rules-being-violated-in-parappas-agrahara-jail-what-does-the-new-act-say/
ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಪ್ರತಿಕ್ರಿಯಿಸಿ, ಈ ರೀತಿ ಫೋಟೋ ಶೂಟ್ ಮಾಡಿಸಿರುವುದು ನಿಜಕ್ಕೂ ಖಂಡನೀಯ. ಹೀಗಾಗಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಈ ಬಗ್ಗೆ ಇವತ್ತು ಪೊಲೀಸ್ ಇಲಾಖೆ ಐಟಿ ಸೆಲ್ ಪತ್ರ ಬರೆಯಲಾಗುತ್ತದೆ. ಪೋಟೋ ಶೂಟ್ ಮಾಡಿಸಿದವರ ಪತ್ತೆ ಮಾಡಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು