ಬೆಂಗಳೂರು :- ಕ್ರಿಸ್ ಮಸ್ ಹಬ್ಬದ ಹಿನ್ನೆಲೆ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು ನಗರ ಆಯುಕ್ತರು ಸೂಚನೆ ನೀಡಿದ್ದಾರೆ.
ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.