ಹೊಸಕೋಟೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲು ಸಿಎಂ ಸಿದ್ದರಾಮಯ್ಯ ಅವರು ಹೊಸಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆ, ಪೊಲೀಸರಿಂದ ನಗರದಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.
ಹೊಸಕೋಟೆಯ ಚನ್ನಬೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ಸುಮಾರು 600 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿ ಆಗಮನದ ಹಿನ್ನೆಲೆ ಖಾಕಿ ಪಡೆಯಿಂದ ಕಾರ್ಯಕ್ರಮದ ಸುತ್ತ ಸರ್ಪಗಾವಲು ಹಾಕಲಾಗಿದೆ. ಈಗಾಗಲೇ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ನಿಂದ ವೇದಿಕೆ ಪರಿಶೀಲನೆ ಮಾಡಲಾಗಿದೆ. ಸಂಜೆ 4ಗಂಟೆಗೆ ಸಮಾವೇಶ ಆರಂಭವಾಗಲಿದೆ.