ನವದೆಹಲಿ:– ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಎಚ್ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ವಿಧಾನಸಭೆ ಚುನಾವಣೆ ಬಳಿಕ ಆ. 26 ರಂದು ಪ್ರಧಾನಿ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದರು. ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಅದಾಗಿ 3 ತಿಂಗಳ ಬಳಿಕ ಪ್ರಧಾನಿ ಮತ್ತೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ.
ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಬೆಳಿಗ್ಗೆ 9.15ಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ತೇಜಸ್ ಜೆಟ್ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯವನ್ನು ಪರಿಶೀಲಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಅವರು ತೆಲಂಗಾಣಕ್ಕೆ ಪ್ರಯಾಣ ಬೆಳಸಲಿದ್ದಾರೆ.