ಬಳ್ಳಾರಿ:- ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಹಿನ್ನಲೆ ಡಾ!ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್ ಸುದ್ದಿಗೋಷ್ಠಿ ನಡೆಸಿದ್ದಾರೆ.
Hubballi: ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ !
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಚಿವರು ಮೌಖಿಕವಾಗಿ ಹೇಳಿರುವ ಬಗ್ಗೆ ಯಾವುದೇ ದಾಖಲೆ ಇಲ್ಲ. ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ಯಾವುದೇ ಪಾತ್ರ ಇಲ್ಲ, ಸಚಿವರು ಯಾವುದೇ ಕಾರಣಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯಿಲ್ಲ. ಬಿಜೆಪಿ ಅವರ ಕುತಂತ್ರಕ್ಕೆ ಫಲಕೊಡಲ್ಲ. ಶ್ರೀರಾಮುಲು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ, ಲೋಕಸಭಾ ಚುನಾವಣೆಯಲ್ಲೂ ಸೋಲುವ ಭೀತಿಯಿದೆ. ಇದೇ ವಿಚಾರವನ್ನೇ ದೊಡ್ಡದು ಮಾಡಲು ಹೊರಟಿದ್ದಾರೆ.
ಈ ಪ್ರಕರಣದ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ, ಇದನ್ನ ಬಿಜೆಪಿ ಅವರು ರಾಜಕಾರಣ ಮಾಡಲು ಹೊರಟಿದ್ದಾರೆ. ಹೀಗಾಗಲೇ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಫ್ ಐ ಆರ್ ದಾಖಲು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.