ಭೋಪಾಲ್:- ಅನ್ನಪೂರ್ಣಿ ಚಿತ್ರದಲ್ಲಿ ಶ್ರೀರಾಮನ ಕುರಿತಾದ ಡೈಲಾಗ್ ಬಲಪಂಥೀಯ ಸಂಘಟನೆಗಳ ಕೆಂಗಣ್ಣಿಗೆ ಗುಯಾಗಿದ್ದು, ನಟಿ ನಯನತಾರಾ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಲವ್ ಜಿಹಾದ್ಗೆ ಪ್ರೇರೆಪಿಸಿದ್ದಾರೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕ, ನಿರ್ದೇಶಕ, ನಯನತಾರಾ ಸೇರಿದಂತೆ ಏಳು ಮಂದಿ ವಿರುದ್ಧ ಮಧ್ಯಪ್ರದೇಶದ ಜಬಲ್ಪುರದ ಒಮ್ಟಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿಂದೂ ಸೇವಾ ಪರಿಷತ್ತಿನ ಮುಖಂಡರೊಬ್ಬರು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಲವ್ ಜಿಹಾದ್ಗೆ ಪ್ರೇರಣೆ ನೀಡಿದ ಆರೋಪದ ಮೇಲೆ ನಟಿ ನಯನತಾರಾ, ನಿರ್ದೇಶಕ ನೀಲೇಶ್ ಕೃಷ್ಣನ್, ನೆಟ್ಫ್ಲಿಕ್ಸ್ ಇಂಡಿಯಾದ ಕಂಟೆಂಟ್ ಹೆಡ್ ಮೋನಿಕಾ ಶೆರ್ಗಿಲ್, ಸಿನಿಮಾದ ನಿರ್ಮಾಪಕ ಹೀಗೆ ಒಟ್ಟು ಏಳು ಜನರ ವಿರುದ್ಧ ದೂರು ದಾಖಲಿಸಲಾಗಿದೆ. ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಹಿಂದೂ ಸೇವಾ ಪರಿಷತ್ತಿನ ಮುಖಂಡರೊಬ್ಬರು ತಿಳಿಸಿದ್ದಾರೆ.