ಬೆಂಗಳೂರು:- ನಾಳೆ ಈದ್ ಹಿನ್ನೆಲೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆಗಳಿವೆ. ಈ ಹಿನ್ನಲೆ ಸಂಚಾರ ದಟ್ಟಣೆಯಾಗದಂತೆ ಪೊಲೀಸರು ಎರಡು ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ.
ಟೌನ್ ಹಾಲ್ ಟು ಮೈಸೂರು ರಸ್ತೆ ಕಡೆಗೆ ಮತ್ತು ಕೆಂಗೇರಿ ಟು ಮಾರ್ಕೆಟ್ ಬರುವ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ ಏಳು ಗಂಟೆಯಿಂದ ಹನ್ನೆರಡು ಗಂಟೆಯವರೆಗೆ ಮಾತ್ರ ಈ ಬದಲಾವಣೆ ಇರಲಿದೆ.
ನಿನ್ನೆ ಚಂದ್ರ ದರ್ಶನವಾದ ಹಿನ್ನೆಲೆ ಇಂದು ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬ ಆಚರಿಸಲಾಗಿದೆ. ಕರಾವಳಿ ಭಾಗಗಳಾದ ದಕ್ಷಿಣಕನ್ನಡ, ಉತ್ತರಕನ್ನಡ ಹಾಗೂ ಕೇರಳದಲ್ಲಿ ಇಂದು ರಂಜಾನ್ ಹಬ್ಬ ಆಚರಣೆ ಮಾಡಲಾಗಿದೆ. 29 ದಿನಗಳ ಉಪವಾಸ ವ್ರತ ಆಚರಿಸಿದ್ದ ಮುಸ್ಲಿಮರು, ಇಂದು ಈದ್ ಉಲ್ ಫಿತರ್ ಹಬ್ಬದೊಂದಿಗೆ ಅಂತ್ಯ ಮಾಡಿದ್ದಾರೆ.
ಇನ್ನೂ ಇಂದು ಸಂಜೆ ಚಂದ್ರ ದರ್ಶನವಾದ ಹಿನ್ನೆಲೆ ಗುರುವಾರ ರಾಜ್ಯಾದ್ಯಂತ ಈದ್ ಉಲ್ ಫಿತರ್ ಆಚರಣೆ ಮಾಡಲಾಗುತ್ತದೆ. ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಈದ್ ಆಚರಣೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಮಸೀದಿ, ಈದ್ಗಾ ಮೈದಾನಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇಂದಿಗೆ 30 ದಿನಗಳ ಉಪವಾಸ ವ್ರತ ಆಚರಣೆ ಅಂತ್ಯವಾಗಲಿದೆ. ಗುರುವಾರ ಹೊಸ ಉಡುಪು ಧರಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸಿಹಿ ತಿಂದು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಚಂದ್ರ ದರ್ಶನವಾಗಿದ್ದು, ಶಶಿಯನ್ನು ನೋಡಿ ಮುಸ್ಲಿಮರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.