ದಾವಣಗೆರೆ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ಇಂದು ಕೋರ್ಟ್ ಅರೆಸ್ಟ್ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು,
ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ನೇತೃತ್ವದಲ್ಲಿ ಅಧಿಕಾರಿಗಳ ತಂಡದ ಆಗಮಿಸಿ ಬಂಧಿಸಿ ಪೊಲೀಸ್ ಭದ್ರತೆಯಲ್ಲಿ ಚಿತ್ರದುರ್ಗಕ್ಕೆ ಕರೆದೊಯ್ದ ಪೊಲೀಸರು. ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷ ಜೈಲುವಾಸ ಅನುಭವಿಸಿದ್ದ ಮುರುಘಾಶ್ರೀ ಜಾಮೀನಿನ ಮೇಲೆ ನವೆಂಬರ್ 16ರಂದು ಬಿಡುಗಡೆಯಾಗಿದ್ದರು. ಆದ್ರೆ ಇದೀಗ ನಾಲ್ಕೇ ದಿನದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ.