ಹುಬ್ಬಳ್ಳಿ: ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುವುದರಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಲಿದ್ದು, ಈ ಮೊದಲಿನ ಪ್ರಮಾಣದಲ್ಲೇ ಸಾಲ ನೀಡಬೇಕು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆಗ್ರಹಿಸಿದರು.
ರಾಜ್ಯದಲ್ಲಿ ಸುಮಾರು 63 ಲಕ್ಷ ರೈತರಿದ್ದು, ಈ ಪೈಕಿ ಸುಮಾರು 30 ಲಕ್ಷ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕ್ ಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ್ತ ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕುಗಳ ಕೃಷಿ ಸಾಲ ವಿತರಣೆಯ ಸಾಮರ್ಥ್ಯ ಕಡಿಮೆಯಾಗಲಿದ್ದು, ಇದು ಕೃಷಿ ಕ್ಷೇತ್ರದ ಹಿನ್ನಡೆಗೆ ಕಾರಣವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿದರು.
Health Tips: ಈರುಳ್ಳಿ ತಿಂದಾಗ ಬಾಯಿ ವಾಸನೆ ಬರುತ್ತಾ..? ನಿವಾರಣೆಗೆ ಹೀಗೆ ಮಾಡಿ
ನಬಾರ್ಡ್ ನೀಡುವ ರಿಯಾಯಿತಿ ಬಡ್ಡಿ ದರದ ಸಾಲದ ಮೊತ್ತದಿಂದಲೇ ಡಿಸಿಸಿ ಬ್ಯಾಂಕುಗಳು ರೈತರಿಗೆ ಕೃಷಿ ಸಾಲ ವಿತರಣೆ ಮಾಡುತ್ತವೆ. ರಾಜ್ಯದಲ್ಲಿ ಕೆಲವೇ ಡಿಸಿಸಿ ಬ್ಯಾಂಕುಗಳು ಮಾತ್ರ ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದು, ಇತರ ಡಿಸಿಸಿ ಬ್ಯಾಂಕುಗಳು ನಬಾರ್ಡ್ ನೀಡುವ ಹಣದಲ್ಲೇ ರೈತರಿಗೆ ಕೃಷಿ ಸಾಲ ನೀಡುತ್ತವೆ. ನಬಾರ್ಡ್ ಸಾಲದ ಮೊತ್ತ ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕುಗಳ ಕೃಷಿ ಸಾಲ ವಿತರಣೆ ಸಾಮರ್ಥ್ಯ ಕಡಿಮೆಯಾಗಲಿದೆ. ಇದರಿಂದ ಕೃಷಿಗೆ ಹಿನ್ನಡೆಯಾಗಲಿದೆ ಎಂದರು.
30 ರಿಂದ 35 ಲಕ್ಷ ರೈತರು ಮಾತ್ರ ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕುಗಳನ್ನು ಆಶ್ರಯಿಸಿದ್ದಾರೆ. ಇತರ ಸುಮಾರು 35 ಲಕ್ಷ ರೈತರು ಕಮರ್ಷಿಯಲ್ ಬ್ಯಾಂಕುಗಳಲ್ಲಿ ಸಾಲ ಪಡೆಯುತ್ತಿದ್ದಾರೆ. ಎಲ್ಲ ರೈತರಿಗೂ ಸಹಕಾರಿ ಬ್ಯಾಂಕುಗಳ ಮೂಲಕವೇ ಕೃಷಿ ಸಾಲ ಸಿಗುವಂತಾಗಬೇಕು ಎಂಬುದು ನಮ್ಮ ಆಶಯ. ಆದರೆ ನಬಾರ್ಡ್ ಸಾಲದ ಮೊತ್ತ ಕಡಿಮೆ ಮಾಡುವುದರಿಂದ ಈ ಉದ್ದೇಶಕ್ಕೆ ಪೆಟ್ಟು ಬೀಳಲಿದೆ ಎಂದರು.