ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಹೊರನಾಡು ಅನ್ನಪೋರ್ಣೇಶ್ವರಿ, ಶೃಂಗೇರಿ ಶಾರದಂಭೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆಂದು ಆರೋಪಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.
ರೈತರ ಗಮನಕ್ಕೆ.. ಪಿಎಂ ಕಿಸಾನ್ ಯೋಜನೆಯಲ್ಲಿ ಹೊಸ ರೂಲ್ಸ್.! ಈ ಕೆಲಸ ಮಾಡದಿದ್ರೆ ಬರಲ್ಲ 19ನೇ ಕಂತಿನ ಹಣ!?
ಈ ವಿಚಾರವಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಅಂಜುಮ್ ಶೇಖ್ ಎಂಬಾತ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಕೊಲ್ಲೂರು ಮೂಕಾಂಬಿಕೆ, ತಿರುಪತಿ ತಿಮ್ಮಪ್ಪ ಮತ್ತು ಗಣೇಶ ದೇವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಈ ಕಾಮೆಂಟ್ನಿಂದ ನಮಗೆ ಅತ್ಯಂತ ನೋವುಂಟು ಆಗಿದೆ ಇಂತವರ ಮೇಲೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.