ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದ ಆರಕ್ಷಕ ಠಾಣೆಯ ಆವರಣದಲ್ಲಿ ಬನಹಟ್ಟಿ ಪೊಲೀಸ್ ಠಾಣೆ ವತಿಯಿಂದ ..ಸಾರ್ವಜನಿಕರಿಗೆ ಹೋಳಿ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನ ಏರ್ಪಡಿಸಲಾಗಿತ್ತು..ಈ ಸಂದರ್ಭದಲ್ಲಿ ಆರಕ್ಷಕ ಠಾಣೆಯ ಸಿ ಪಿ ಐ ಸಂಜಯ್ ಬಳೆಗಾರ ಮಾತನಾಡಿ ….
ಪ್ರತಿವರ್ಷದಂತೆ ಈ ವರ್ಷವೂ ಹೋಳಿ ಮತ್ತು ರಂಜಾನ್ ಹಬ್ಬಗಳನ್ನು ಎಲ್ಲೆಡೆ ಆಚರಿಸುತ್ತಿದ್ದಾರೆ. ಆಚರಿಸುವಾಗ ಸರ್ಕಾರದ ಕಾನೂನಿನ ಅಡಿಯಲ್ಲಿ ಬರುವ ಎಲ್ಲಾ ಸೂಚನೆಗಳನ್ನು ಪಾಲಿಸಬೇಕು .ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ನಡೆದುಕೊಳ್ಳಬೇಕು.
ಅಸಭ್ಯವಾಗಿ ವರ್ತಿಸಿದವರನ್ನು ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡಿದವರನ್ನು ನಿರ್ದಾಕ್ಷಣವಾಗಿ ಅವರ ವಿರುದ್ಧ ಕ್ರಮ ಜರಗಿಸಲಾಗುವುದು. ದಯಮಾಡಿ ಆಚರಿಸುವಂತಹ ಹಬ್ಬವನ್ನು ಶಾಂತಿಯುತವಾಗಿ.. ಅರ್ಥಗರ್ಭಿತವಾಗಿ ಆಚರಿಸಲು ಮನವಿ ಮಾಡಿದರು… ಈ ಸಂದರ್ಭದಲ್ಲಿ ಬನಹಟ್ಟಿ ಪಿಎಸ್ಐ ಶಾಂತಾ ಹಳ್ಳಿ ಊರಿನ ಪ್ರಮುಖ ಹಿರಿಯರು ಭಾಗಿಯಾಗಿದ್ದರು,
ಪ್ರಕಾಶ ಕುಂಬಾರ
ಬಾಗಲಕೋಟೆ