ಧಾರವಾಡ: ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಹುಜನ ಸಮಾಜ ಪಕ್ಷದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಹುಜನ ಸಮಾಜ ಪಕ್ಷದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ ಮಾಡಿ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬಹುಜನ ಸಮಾಜ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.