ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಆಗಿದ್ದೇ ಆಗಿದ್ದು, ದರ್ಶನ್ ಗ್ರಹಗತಿ ಎಲ್ಲಾ ಉಲ್ಟಾಪಲ್ಟಾ ಆಗೋಯ್ತು ಮರ್ರೆ. ಸದಾ ಸಿನಿಮಾದಲ್ಲಿ ಬ್ಯೂಸಿ ಇರುತ್ತಿದ್ದ ನಟ, ಅದೊಂದು ಎಡವಟ್ಟು ಮಾಡಿಕೊಂಡು ಇದೀಗ ಪಶ್ಚಾತ್ತಾಪ ಪಡುವಂತಾಗಿದೆ.
ಆದರೆ ಇತ್ತೀಚೆಗೆ ಅವರಿಗೆ ಬೆನ್ನು ನೋವು ತೀವ್ರವಾದ ಹಿನ್ನೆಲೆ ಚಿಕಿತ್ಸೆಗೆಂದು ಕೋರ್ಟ್ ಬಳಿ ಮನವಿ ಮಾಡಿ ಬೇಲ್ ಮೇಲೆ ಹೊರಗಡೆ ಬಂದಿದ್ದಾರೆ. ಆದರೆ ದರ್ಶನ್ ಮಾತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪುತ್ತಿಲ್ಲ
ಮಂಗನಬಾವು ಕಾಯಿಲೆ ಆತಂಕ: 50ಕ್ಕೂ ಹೆಚ್ಚು ಸ್ಟೂಡೆಂಟ್ಸ್ ಆಸ್ಪತ್ರೆಗೆ ದಾಖಲು, ಪೋಷಕರು ಆತಂಕ!
ನಟ ದರ್ಶನ್ ಅವರು ಇನ್ನೂ ಮಾನಸಿಕವಾಗಿ ಸಿದ್ಧವಾಗದ ಕಾರಣ ಶಸ್ತ್ರಚಿಕಿತ್ಸೆ ನಡೆಸಿಲ್ಲ ಎಂದು ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ.
ಬೆನ್ನು ನೋವು ಕಾರಣ ನೀಡಿದ ದರ್ಶನ್ ಅವರಿಗೆ ಹೈಕೋರ್ಟ್ 6 ವಾರಗಳ ಜಾಮೀನು ನೀಡಿತ್ತು. ಜಾಮೀನು ನೀಡಿದರೂ ದರ್ಶನ್ ಅವರಿಗೆ ಇನ್ನೂ ಶಸ್ತ್ರಚಿಕಿತ್ಸೆ ನಡೆದಿಲ್ಲ. ಹೀಗಾಗಿ ಶಸ್ತ್ರ ಚಿಕಿತ್ಸೆ ಯಾಕೆ ನಡೆದಿಲ್ಲ ಎಂಬ ಪ್ರಶ್ನೆಗೆ ದರ್ಶನ್ ಪರ ವಕೀಲರು ಆರೋಗ್ಯಕ್ಕೆ ಸಂಬಂಧಿಸಿದ ವರದಿಯಲ್ಲಿ ಹೈಕೋರ್ಟ್ಗೆ ಸಲ್ಲಿಸಿದ್ದಾರೆ.
ದರ್ಶನ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುವುದಕ್ಕೆ ತಯಾರಿ ಮಾಡಲಾಗುತ್ತಿದೆ. ದರ್ಶನ್ ಕೂಡ ಶಸ್ತ್ರಚಿಕಿತ್ಸೆಗೆ ತಯಾರಾಗುತ್ತಿದ್ದಾರೆ. ಆದರೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ. ಆಪರೇಷನ್ ಮಾಡಬೇಕಾದರೆ ರಕ್ತದೊತ್ತಡ ಸಮತೋಲನ ಆಗಿರಬೇಕು.
ದರ್ಶನ್ ರಕ್ತದೊತ್ತಡದ ಸಮಸ್ಯೆ ಸಮತೋಲನಕ್ಕೆ ಬರುತ್ತಿಲ್ಲ. ಇನ್ನೂ ದರ್ಶನ್ ಕೂಡ ಶಸ್ತ್ರ ಚಿಕಿತ್ಸೆಗೆ ಮಾನಸಿಕವಾಗಿ ಸಿದ್ದರಾಗಬೇಕಿದೆ. ಸದ್ಯಕ್ಕೆ ಕನ್ಸರ್ವೇಟಿವ್ ಚಿಕಿತ್ಸೆ ಮುಂದುವರೆದಿದೆ. ಫಿಸಿಯೋಥೆರಪಿ ಮತ್ತು ಔಷಧಗಳಿಂದ ಸಮಸ್ಯೆ ನಿಯಂತ್ರಣದಲ್ಲಿಡುವ ಪ್ರಯತ್ನ ನಡೆಯುತ್ತಿದೆ.
ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಕೋರಿದ್ದಾರೆ.