ಮಂಗಳೂರು : ಬಜ್ಪೆಯ ಉದ್ಯಮಿಯೊಬ್ಬರಿಗೆ ಭೂಗತ ಪಾತಕಿಯೊಬ್ಬ ಬೆದರಿಕೆ ಕರೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಉದ್ಯಮಿ ರೊನಾಲ್ಡ್ ಎಂಬುವರಿಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗುತ್ತಿದೆ. ಜ.17ರಂದು ಭೂಗತ ಪಾತಕಿ ಕಲಿ ಯೋಗೇಶ್ ಎಂಬಾತ ದೂರವಾಣಿ ಕರೆಮಾಡಿ, 3 ಕೋಟಿ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಇಲ್ಲದಿದ್ದಲ್ಲಿ ಮನೆಯವರನ್ನೆಲ್ಲಾ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ನಿನ್ನೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ರೊನಾಲ್ಡ್ ಅವರು ಕೆಂಪು ಕಲ್ಲಿನ ಕೋರೆ ಸೇರಿದಂತೆ ಇತರೆ ಉದ್ಯಮ ನಡೆಸುತ್ತಿದ್ದಾರೆ. ಕಲಿ ಯೋಗೀಶ್ ಹೆಸರಲ್ಲಿ ಭೂಗತ ಪಾತಕಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.