ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ. ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ.
12 ಗಂಟೆ 30 ನಿಮಿಷ 32 ಸೆಕೆಂಡ್ಗಳ ಮಧ್ಯೆ ಅಭಿಜಿತ್ ಮುಹೂರ್ತದಲ್ಲಿ (ʼಅಭಿಜಿತ್ʼ ಅಂದ್ರೆ ʼಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ (Pran Prathistha ceremony) ನೆರವೇರಿದೆ.
ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಮೂಲ ವಿಗ್ರಹದ ಎದುರು ವಿಧಿ-ವಿಧಾನಗಳನ್ನು ನೆರವೇರಿತು.
500 ವರ್ಷಗಳ ಬಳಿಕ ಬಾಲರಾಮ ತನ್ನ ಸ್ವಸ್ಥಾನಕ್ಕೆ ಮರಳಿದ ಶ್ರೀರಾಮ