ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಶಾಸ್ತ್ರೋಕ್ತವಾಗಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸೋಮವಾರ (ಜ.22) ನೆರವೇರಿತು. ಪುಣ್ಯಪುರುಷ ರಾಮನನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾದರು.
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿದ್ದೆ ಇತ್ತ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೆ ತಮ್ಮ ನಿವಾಸದಲ್ಲಿ ಪ್ರಭು ಶ್ರೀ ರಾಮನ ಪೂಜೆ ಸಲ್ಲಿಸಿದ ಬಿ.ವೈ ವಿಜಯೇಂದ್ರ
ನಗರದ ಬಾಣಸವಾಡಿಯಲ್ಲಿರುವ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ರಾಮನ ಆರಾಧಿಸಿದ ಬಿಎಸ್ ಯಡಿಯೂರಪ್ಪ
ಬಿಎಸ್ʼವೈಗೆ ಸಂಸದ ಪಿಸಿ ಮೋಹನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಸಾಥ್ ನೀಡಿದ್ದರು ಹಾಗೆ ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ತಮ್ಮ ನಿವಾಸದಲ್ಲಿ ಪ್ರಭು ಶ್ರೀ ರಾಮನ ಪೂಜೆ ಸಲ್ಲಿಸಿದರು