ನವದೆಹಲಿ: ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಿದೆ. ಮಾರ್ಚ್ 10 ರಂದು ಸೋನೆಪತ್ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು ಪರೀಕ್ಷೆಗೆ ನೀಡಲಿ ನಿರಾಕರಿಸಿದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪೂನಿಯಾರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಿದೆ.
Puri without using oil: ಎಣ್ಣೆ ಬಳಸದೇ ಆರೋಗ್ಯಕರ ಪೂರಿಗಳನ್ನು ತಯಾರಿಸಬಹುದು.! ಹೇಗೆ ಗೊತ್ತಾ..? ಇಲ್ಲಿದೆ ಟಿಪ್ಸ್
ಇದರ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಜರಂಗ್ ಪೂನಿಯಾ, ಇದೇನೂ ನನಗೆ ಆಘಾತಕಾರಿ ಸಂಗತಿಯಲ್ಲ.. ಏಕೆಂದರೆ ವಿಚಾರಣೆಯ ವಿಷಯವು ಕಳೆದ ಒಂದು ವರ್ಷದಿಂದ ನಡೆಯುತ್ತಿದೆ. ವೈಯಕ್ತಿಕ ದ್ವೇಷ ಮತ್ತು ರಾಜಕೀಯ ಕಾರಣಗಳಿಗಾಗಿ ಹೀಗೆಲ್ಲಾ ಮಾಡಲಾಗುತ್ತಿದೆ. ಎಲ್ಲವೂ ಕೇಂದ್ರ ಸರ್ಕಾರದ ಮೂಗಿನ ತುದಿಯಲ್ಲಿಯೇ ನಡೆಯುತ್ತಿದೆ. ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕಾಗಿ ಈ ರೀತಿ ಸೇಡು ತೀರಿಸಲಾಗುತ್ತಿದೆ ಅದಲ್ಲದೆ ಒಂದು ವೇಳೆ ನಾನು ಬಿಜೆಪಿಗೆ ಸೇರಿದ್ದೇ ಆದಲ್ಲಿ ಈ ನಿಷೇಧವು ರದ್ದುಗೊಳ್ಳುತ್ತದೆ ಎಂದು ಹೇಳಿದ್ದಾರೆ.