ಹಾಸನ :- ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಆಗಾಗ ನಡೆಯುತ್ತಿದ್ದ ಜಗಳಕ್ಕೆ ಕಡಿವಾಣ ಹಾಕಿ ಪ್ರಕೃತಿಯನ್ನು ರಕ್ಷಿಸಲು ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಪಟ್ಲ ಬೆಟ್ಟ ಸಕಲೇಶಪುರ ಪಟ್ಟಣದಿಂದ 40 ಕಿಮೀ ದೂರದಲ್ಲಿದೆ.
ರಾಜ್ಯಾದ್ಯಂತ ಲೋಕಾ ರೇಡ್: ಬೆಳ್ಳಂ ಬೆಳಗ್ಗೆ ಭ್ರಷ್ಟರ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು!
ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಪ್ರವಾಸಿಗರ ಹಿತದೃಷ್ಟಿಯಿಂದ ಮಾರ್ಗಸೂಚಿಗಳನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ. ಭವಿಷ್ಯದಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಆನ್ಲೈನ್ ಬುಕಿಂಗ್ ವ್ಯವಸ್ಥೆ ಪರಿಚಯಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ
ಜಿಲ್ಲೆಯ ಸುಬ್ರಹ್ಮಣ್ಯದ ಪ್ರವಾಸಿಗರೊಬ್ಬರಿಗೆ ಸ್ವಂತ ವಾಹನದಲ್ಲಿ ಗಿರಿಧಾಮಕ್ಕೆ ಭೇಟಿ ನೀಡಿದ್ದಕ್ಕೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಯಸಳೂರು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಲ ಬೆಟ್ಟವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಿಳಿಸಿದ್ದಾರೆ. ಹೀಗಾಗಿ ಈ ಪ್ರಕ್ರಿಯೆಯ ನಂತರ ಪ್ರವಾಸಿಗರಿಗೆ ಬೆಟ್ಟಕ್ಕೆ ಅವಕಾಶ ದೊರೆಯುವ ಸಾಧ್ಯತೆ ಇದೆ.