ಬೆಂಗಳೂರು: ಮಹಾರಾಷ್ಟ್ರದ ಎಂಇಎಸ್ ಸಂಘಟನೆಯನ್ನು ರದ್ದು ಮಾಡುವಂತೆ ಕನ್ನಡಪರ ಸಂಘಟನೆಗಳು ಅತ್ತಿಬೆಲೆಯಲ್ಲಿ ಇಂದು ಪ್ರತಿಭಟನೆ ನಡೆಸಿದೆ. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಜರುಗಿದ್ದು, ಎಂಇಎಸ್ ಬಂದ್ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅತ್ತಿಬೆಲೆ ಗಡಿ ಬಂದ್ ಎಂಬ ಶೀರ್ಷಿಕೆ ಅಡಿಯಲ್ಲಿ ಹೋರಾಟ ನಡೆಸಿ, ಎಂಇಎಸ್ ಪುಂಡರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರಿಗೆ ಕಿರುಕುಳ ನೀಡತ್ತಿರುವ ಎಂಇಎಸ್ ಅನ್ನು ರಾಜ್ಯ ಸರ್ಕಾರ ಬ್ಯಾನ್ ಮಾಡಬೇಕು ಇಲ್ಲದೇ ಹೋದರೆ ಡಿಸೆಂಬರ್ 31 ರಂದು ನಮ್ಮ ಪ್ರತಿಭಟನೆ ಇನ್ನೂ ತೀವ್ರಗೊಳ್ಳಲಿದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸಾ. ರಾ ಗೋವಿಂದ್, ಕೆ ಆರ್ ಕುಮಾರ್, ಪ್ರವೀಣ್ ಕುಮಾರ್ ಶೆಟ್ಟಿ, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಹಲವು ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು.
