ಇಂಡೀಸ್ ಪ್ರವಾಸದಲ್ಲಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡವು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ವಿಂಡೀಸ್ ವಿರುದ್ಧ ಸರಣಿ ಗೆದ್ದು ಬಾಂಗ್ಲಾದೇಶ ಅಪರೂಪದ ಸಾಧನೆ ಮಾಡಿದ್ದಾರೆ.
ಮೂರನೇ ಟಿ20ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ 190 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ 109 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಬಾಂಗ್ಲಾದೇಶ ಮೊದಲ ಬಾರಿಗೆ ವಿದೇಶದಲ್ಲಿ ನಡೆದ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವಲ್ಲಿ ಯಶಸ್ವಿಯಾಗಿದೆ.
ಸಿಟಿ ರವಿ ಅರೆಸ್ಟ್ ಕೇಸ್: ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಹೇಳಿದ್ದೇನು?
ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ 20 ಓವರ್ಗಳಲ್ಲಿ 7 ವಿಕೆಟ್ಗೆ 189 ರನ್ ಗಳಿಸಿತು. ತಂಡದ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಜಾಕಿರ್ ಅಲಿ 41 ಎಸೆತಗಳಲ್ಲಿ 6 ಸಿಕ್ಸರ್ ಒಳಗೊಂಡ ಅಜೇಯ 72 ರನ್ ಗಳಿಸಿದರು. ಉಳಿದಂತೆ ಪರ್ವೇಜ್ ಹೊಸೈನ್ ಎಮಾನ್ 39 ರನ್ಗಳ ಇನ್ನಿಂಗ್ಸ್ ಆಡಿದರೆ, ಮೆಹದಿ ಹಸನ್ ಮಿರಾಜ್ ಕೂಡ 29 ರನ್ಗಳ ಕಾಣಿಕೆ ನೀಡಿದರು.
ಇದಕ್ಕುತ್ತರವಾಗಿ ಗುರಿ ಬೆನ್ನತ್ತಿದ ಆತಿಥೇಯ ವೆಸ್ಟ್ ಇಂಡೀಸ್ ತಂಡ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಹೀಗಾಗಿ 190 ರನ್ಗಳ ಗುರಿಯನ್ನು ಬೆನ್ನಟ್ಟಿದ ಅರ್ಧದಷ್ಟು ವಿಂಡೀಸ್ ತಂಡ ಕೇವಲ 46 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡಿತು. ಆ ಬಳಿಕವೂ ಆಟದಲ್ಲಿ ಯಾವುದೇ ಸುಧಾರಣೆ ಕಾಣದ ಪರಿಣಾಮ ಇಡೀ ತಂಡ 16.4 ಓವರ್ ಗಳಲ್ಲಿ ಆಲೌಟ್ ಆಯಿತು. ಅಂದರೆ, ಆತಿಥೇಯ ವೆಸ್ಟ್ ಇಂಡೀಸ್ಗೆ ಪೂರ್ಣ 20 ಓವರ್ಗಳನ್ನು ಆಡಲು ಸಾಧ್ಯವಾಗಲಿಲ್ಲ.
ಸರಣಿಯಲ್ಲಿ ಇದು ಸತತ ಮೂರನೇ ಬಾರಿಗೆ ವೆಸ್ಟ್ ಇಂಡೀಸ್ ತಂಡ ಗುರಿ ಬೆನ್ನಟ್ಟುವಲ್ಲಿ ವಿಫಲವಾಗಿದೆ. ಮೊದಲ ಟಿ20ಯಲ್ಲಿ 148 ರನ್ ಚೇಸ್ ಮಾಡಲು ವಿಫಲವಾಗಿದ್ದ ವಿಂಡೀಸ್ ಎರಡನೇ ಟಿ20ಯಲ್ಲಿ 130 ರನ್ಗಳ ಬೆನ್ನತ್ತುವುದರಲ್ಲೂ ಫೇಲ್ ಆಗಿತ್ತು. ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶದ ಗೆಲುವಿನ ಹೀರೋ ಜಾಕಿರ್ ಅಲಿ ಪಂದ್ಯದ ಆಟಗಾರ ಪ್ರಶಸ್ತಿಗೆ ಭಾಜನರಾದರೆ, ಸರಣಿಯಲ್ಲಿ 37 ರನ್ ಹಾಗೂ 8 ವಿಕೆಟ್ ಪಡೆದಿದ್ದ ಮೆಹದಿ ಹಸನ್ ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೆ ಭಾಜನರಾದರು.