ಬೆಂಗಳೂರು: ಸಚಿವ ಜಮೀರ್ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ ಎಂದು ಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟಿದ್ದು, ಇದಕ್ಕೆ ಸಂಬಂಧ ಪಟ್ಟಂತೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಮಂದಿ ಬಾಣಂತಿಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕರ್ನಾಟಕ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.” ಎಂದು ಆರ್ ಅಶೋಕ್ ಟ್ವೀಟ್ ಮಾಡಿದ್ದಾರೆ.
ಈ ಹಳೆ ನಾಣ್ಯಗಳು, ನೋಟುಗಳು ನಿಮ್ಮ ಹತ್ರ ಇದ್ಯಾ.? ಹಾಗಿದ್ದರೆ ಒಂದೇ ರಾತ್ರೀಲಿ ಲಕ್ಷಾಧಿಪತಿ ಆಗ್ತಿರಾ!
“ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ನೆ ತಾರೀಖಿನಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷದಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ.” “ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ?”
“ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿಕೆ ಶಿವಕುಮಾರ್ ಅವರಾಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ. ಎಂದು ಕಿಡಿಕಾರಿದ್ದಾರೆ.