ಬೆಂಗಳೂರು:- ಏರೋ ಇಂಡಿಯಾ -2025 ವೈಮಾನಿಕ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಇಂದಿನಿಂದ ಏರ್ ಶೋ ಆರಂಭವಾಗಲಿದ್ದು, ಬೆಂಗಳೂರು ಏರ್ ಶೋ ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರ್ ಶೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಏರೋ ಇಂಡಿಯಾ 2025’ ಬೆಂಗಳೂರಿನ ಯಲಹಂಕದಲ್ಲಿ ಇಂದು ಬೆಳಗ್ಗೆಯಿಂದ ಆರಂಭವಾಗಿದೆ.
ಉನ್ನತ ಶಿಕ್ಷಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗ: ಡಿಗ್ರಿ ಆದವರಿಗೆ ಭರ್ಜರಿ ಗುಡ್ ನ್ಯೂಸ್!
ರನ್ವೇ ಟು ಬಿಲಿಯನ್ ಅಪಾರ್ಚುನಿಟಿಸಿ’’ ಟ್ಯಾಗ್ ಲೈನ್ನಲ್ಲಿ ಏರ್ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.
ಏರ್ಶೋದಲ್ಲಿ ರಷ್ಯಾ ಮತ್ತು ಅಮೆರಿಕನ್ ಫೈಟ್ ಏರ್ಕ್ರಾಫ್ಟ್ಗಳು ಭಾಗಿ ಆಗಲಿವೆ. 100 ದೇಶಗಳ 900ಕ್ಕೂ ಹೆಚ್ಚು ರಕ್ಷಣಾ ಸಾಮಗ್ರಿ ಉತ್ಪಾದಕರು ಭಾಗವಹಿಸಲಿದ್ದಾರೆ. ವಿವಿಧ ಕಂಪನಿಗಳ 100 ಸಿಇಒಗಳು, 50 ವಿದೇಶಿ ಒಎಂಎಸ್ ಉಪಸ್ಥಿತರಿರಲಿದ್ದಾರೆ. ಎಐ, ಸೈಬರ್ ಸೆಕ್ಯುರಿಟಿ, ಡ್ರೋನ್ ಮತ್ತು ಗ್ಲೋಬಲ್ ಏರೋಸ್ಪೇಸ್ ಪ್ರದರ್ಶನವಿದೆ. ಆತ್ಮನಿರ್ಭರ ಭಾರತದ ಉತ್ಪನ್ನಗಳು ಇರಲಿದ್ದು 10 ಸೆಮಿನಾರ್ಗಳು ಆಯೋಜಿಸಲಾಗಿದೆ. ರಕ್ಷಣಾ ವಲಯದಲ್ಲಿ ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯ ಬಗ್ಗೆ ಚರ್ಚೆ ಆಗಲಿದೆ.