ಬೆಂಗಳೂರು;- ತಮಿಳುನಾಡಿನ ರಾಜಕಾರಣಿಗಳಲ್ಲಿ ಇರುವ ಒಗ್ಗಟ್ಟು ನಮ್ಮವರಲಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯವಿದೆ, ಮುಂದೇನು ಎಂಬುದು ತಿಳಿದಿಲ್ಲ. ನಮ್ಮ ರಾಜಕಾರಣಿಗಳಲ್ಲಿ ಒಗ್ಗಟ್ಟಿಲ್ಲ’ ಎಂದು ಹೇಳಿದರು.

ನಮ್ಮ ರಾಜ್ಯ ಸರಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರು ಎಂಬುದು ತಿಳಿದಿಲ್ಲ. ಎಲ್ಲೋ ಒಂದೆಡೆ ನಾವು ಎಡವಿದ್ದೇವೆ, ನಮ್ಮ ರಾಜ್ಯಕ್ಕೆ ಎದುರಾಗುವ ಅನ್ಯಾಯಕ್ಕೆ ಮೊದಲು ಧರಣಿ ಮಾಡಿದ್ದೆ. ಪ್ರತಿಭಟನೆಗೆ ಕೂತು ಸಮಸ್ಯೆಗೆ ಪರಿಹಾರ ಕೂಡ ಕಂಡುಕೊಂಡಿದ್ದೇವೆ. ಇಂದು ಸದನದಲ್ಲಿ ಕಾವೇರಿ ವಿಚಾರ ಪ್ರಸ್ತಾಪಿಸಿದ್ದೇನೆ’ ಎಂದು ಹೇಳಿದರು.
ಕರ್ನಾಟಕ, ತಮಿಳುನಾಡಿಗೆ ಸಂಬಂಧವಿಲ್ಲದ ಅಧಿಕಾರಿಯನ್ನು ಗ್ರೌಂಡ್ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಲಿ ಎಂದರು.
