ಬೆಂಗಳೂರು:- ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ನಾಳೆಯಿಂದ ಎರಡು ದಿನ ನಗರದ ಹಲವೆಡೆ ರಸ್ತೆಗಳು ಬಂದ್ ಆಗಲಿದೆ.
ಕೃಷ್ಣ ಜನ್ಮಾಷ್ಟಮಿಯಂದು ಇಸ್ಕಾನ್ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು, ಗಣ್ಯರು ಮತ್ತು ಸಾರ್ವಜನಿಕರು ಭೇಟಿ ನೀಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸಂಚಾರ ಸಲಹೆ ನೀಡಲಾಗಿದೆ.
ವೆಸ್ಟ್ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್ನಿಂದ ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್ ಕಡೆ ತೆರಳುವವರು ಸೋಪ್ ಫ್ಯಾಕ್ಟರಿ ಜಂಕ್ಷನ್ನಲ್ಲಿ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಮುಂದುವರೆದು 10ನೇ ಕ್ರಾಸ್ನಲ್ಲಿ ಅಥವಾ ಕೇತಮಾರನಹಳ್ಳಿ ಜಂಕ್ಷನ್ನಲ್ಲಿ ಬಲ ತಿರುವು ಪಡೆದು 1ನೇ ಬ್ಲಾಕ್ ರಾಜಾಜಿನಗರ ಸಿಗ್ನಲ್ನಲ್ಲಿ ಕಾರ್ಡ್ ರಸ್ತೆಗೆ ಸೇರುವಂತೆ ಸೂಚನೆ ನೀಡಲಾಗಿದೆ.
ವೆಸ್ಟ್ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್ ನಿಂದ ಮಹಾಲಕ್ಷ್ಮೀ ಮೆಟ್ರೋ ನಿಲ್ದಾಣದ ವರೆಗೆ ಪಿಕ್ಅಪ್ ಮತ್ತು ಡ್ರಾಪ್ ಮಾಡುವುದನ್ನು ನಿಷೇಧಿಸಲಾಗಿದೆ.
ಇಸ್ಕಾನ್ ದೇವಸ್ಥಾನಕ್ಕೆ ಸಾರ್ವಜನಿಕರನ್ನು ಕರೆತರುವ ಆಟೋ ಕ್ಯಾಬ್ ಚಾಲಕರು ಮತ್ತು ಸಾರ್ವಜನಿಕರು ಮಹಾಲಕ್ಷ್ಮೀ ಮೆಟ್ರೋ ನಿಲ್ದಾಣದಿಂದ ಸೋಪ್ ಫ್ಯಾಕ್ಟರಿ ಕಡೆಗೆ ಹೋಗುವ ರಸ್ತೆಯಲ್ಲಿ ಪಿಕ್ ಅಪ್ ಡ್ರಾಪ್ ಮಾಡಬಹುದಾಗಿದೆ.
ಒಟ್ಟಾರೆ ಕೃಷ್ಣ ಜನ್ಮಾಷ್ಟಮಿಯ ದಿನ ಇಸ್ಕಾನ್ ಸೇರಿದಂತೆ ಕೃಷ್ಣನ ದೇಗುಲಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ.