ಬೆಂಗಳೂರು:- ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್ ಗೆ ಸಂಬಧಪಟ್ಟಂತೆ ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಭಿಷೇಕ್ ವಿರುದ್ಧ ಕೋರಮಂಗಲ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಘಟನೆ ನಡೆದ 38 ದಿನಗಳ ಒಳಗಾಗಿ 39ನೇ ಎಸಿಎಂಎಂ ನ್ಯಾಯಾಲಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. 1,205 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಬಿಎನ್ಎಸ್ ಅಡಿಯಲ್ಲಿ ದಾಖಲಾದ ಕೊಲೆ ಪ್ರಕರಣದ ಮೊದಲ ಚಾರ್ಜ್ಶೀಟ್ ಇದಾಗಿದೆ. ಜುಲೈ 23ರ ರಾತ್ರಿ 11 ಗಂಟೆಗೆ ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಕೃತಿಕಾ ಎಂಬ ಯುವತಿಯನ್ನು ಅಭಿಷೇಕ್ ಕೊಲೆ ಮಾಡಿದ್ದ. 85 ಸಾಕ್ಷಿಗಳ ಹೇಳಿಕೆಯನ್ನು ಚಾರ್ಜ್ಶೀಟ್ನಲ್ಲಿ ದಾಖಲಿಸಿದ್ದಾರೆ.