ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಟಿತ ಕಣ್ಣಿನ ಆಸ್ಪತ್ರೆಗಳು ಅಲರ್ಟ್ ಆಗಿದ್ದು ಪಟಾಕಿ ಅವಘಡಗಳು ಸಂಭವಿಸುವ ಸಾಧ್ಯತೆ ಇರುವ ಕಾರಣ ಚಿಕಿತ್ಸೆಗೆ ಸಿದ್ದತೆ ಮಾಡಿಕೊಂಡಿದೆ.
ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ: ಬಿ.ಎಸ್.ಯಡಿಯೂರಪ್ಪ
ಹಬ್ಬದ ವೇಳೆ ಅವಘಡಗಳು ಸಂಭವಿಸುವ ಸಾಧ್ಯತೆಗಳು ಇರುವ ಕಾರಣ ದಿನದ 24 ಗಂಟೆಗಳ ಕಾಲ ಆಸ್ಪತ್ರೆಗಳು ಕಾರ್ಯ ನಿರ್ವಹಿಸಲಿದೆ. ವಿಶೇಷವಾಗಿ ಸುಟ್ಟಗಾಯ ಹಾಗೂ ಕಣ್ಣಿನ ವಿಭಾಗಗಳಲ್ಲಿ ಹೆಚ್ಚಿನ ನಿಗಾವಹಿಸಲಾಗುತ್ತದೆ.
ನಗರದ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಆಸ್ಪತ್ರೆ ಸೇರಿದಂತೆ ಹಲವೂ ಆಸ್ಪತ್ರೆಗಳಲ್ಲಿ ಪಟಾಕಿ ದುರಂತಗಳ ಚಿಕಿತ್ಸೆಗೆಗಳಿಗಾಗಿಯೇ ಪಟಾಕಿ ವಾರ್ಡ್ ನಿರ್ಮಾಣ ಮಾಡಲಾಗಿದೆ. ಪಟಾಕಿಯಿಂದ ಗಾಯಗೊಂಡಿರುವ ಗಾಯಾಳುಗಳಿಗೆ ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ.
ಹಗಲು-ರಾತ್ರಿ ಕಾರ್ಯನಿರ್ವಹಿಸಲು ವೈದ್ಯರಿಗೆ ಸೂಚನೆ ನೀಡಲಾಗಿದ್ದು ಕೆಲ ಆಸ್ಪತ್ರೆಗಳಲ್ಲಿ ಇಂದಿನಿಂದೇ ಪಟಾಕಿ ವಾರ್ಡ್ ಕಾರ್ಯಾರಂಭ ಮಾಡಲಿವೆ. ಪಟಾಕಿ ಗಾಯಾಳುಗಳಿಗೆ 24 ಗಂಟೆಗಳ ಕಾಲ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆಗಳಲ್ಲೂ ತಯಾರಿ ನಡೆದಿದೆ.