ನಿತೀಶ್ ರೆಡ್ಡಿ ಮತ್ತು ರಿಂಕು ಸಿಂಗ್ ಬ್ಯಾಟಿಂಗ್ ಅಬ್ಬರಕ್ಕೆ ಬಾಂಗ್ಲಾದೇಶ ತಲೆಬಾಗಿದೆ. ಬಾಂಗ್ಲಾ ವಿರುದ್ಧ 86 ರನ್ಗಳ ಜಯ ಗಳಿಸಿದ ಟೀಂ ಇಂಡಿಯಾ 3 ಪಂದ್ಯಗಳ ಟಿ20 ಸರಣಿಯನ್ನು 2-0 ರಿಂದ ಕೈವಶ ಮಾಡಿಕೊಂಡಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ 86 ರನ್ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
https://ainlivenews.com/master-blaster-sachin-tendulkar-wrote-an-emotional-message-about-ratan-tata/
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತ್ತು. ನಿತೀಶ್ ರೆಡ್ಡಿ ಆಕರ್ಷಕ ಅರ್ಧಶತಕ (74 ರನ್, 34 ಎಸೆತ, 7 ಸಿಕ್ಸ್, 4 ಫೋರ್) ಸಿಡಿಸಿದರು. ಜೊತೆಗೆ ರಿಂಕು ಸಿಂಗ್ ಕೂಡ ಅಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. 29 ಬಾಲ್ಗಳಿಗೆ 53 ರನ್ (3 ಸಿಕ್ಸ್, 5 ಫೋರ್) ಸಿಡಿಸಿದರು. ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ ಇವರಿಬ್ಬರೂ ಸೇರಿಸಿದ 108 ರನ್ ಗಳಿಸಿ ಗಮನ ಸೆಳೆದರು
ಹಾರ್ದಿಕ್ ಪಾಂಡ್ಯ 19 ಎಸೆತಗಳಲ್ಲಿ 32 ರನ್ ಗಳಿಸಿ ತಂಡಕ್ಕೆ ನೆರವಾದರು. ಟೀಂ ಇಂಡಿಯಾ 9 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತು. 222 ರನ್ ಬೃಹತ್ ಮೊತ್ತ ಬೆನ್ನತ್ತಿದ ಬಾಂಗ್ಲಾ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 135 ರನ್ ಗಳಿಸಲಷ್ಟೇ ಶಕ್ತವಾಯಿತು.
ಟೀಂ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಕಿತ್ತರು. ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಯಾಂಕ್ ಯಾದವ್, ರಿಯಾನ್ ಪರಾಗ್ ತಲಾ 1 ವಿಕೆಟ್ ಕಬಳಿಸಿ ತಂಡದ ಗೆಲುವಿಗೆ ಆಸರೆಯಾದರು.