ಬಾಂಗ್ಲಾದೇಶ : ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 36 ಮಂದಿ ಸಜೀವ ದಹನವಾಗಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ದುರಂತದಲ್ಲಿ 200 ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸುಮಾರು ಮೂರು ಗಂಟೆಗಳ ಕಾಲ ಬೆಂಕಿ ಹೊತ್ತಿ ಉರಿದಿದೆ. ಹಲವರು ಬೆಂಕಿಯಿಂದ ತಮ್ಮ ಪ್ರಾಣ ಉಳಿಸಿಕೊಳ್ಳಲು ನದಿಗೆ ಹಾರಿದರು. ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಡಿಯಾಕುಲ್ ಪ್ರದೇಶದ ಜಲಕತಿ ಸದರ್ ಉಪಜಿಲಾ ಎಂಬಲ್ಲಿ ಘಟನೆ ದುರಂತ ಸಂಭವಿಸಿದೆ. ಅಧಿಕಾರಿಗಳ ಸೂಚನೆ ಮೇರೆಗೆ ಹಡಗನ್ನು ನದಿಯ ದಡದಲ್ಲಿ ಲಂಗರು ಹಾಕಿದೆ.
