ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಸಂಭವಿಸಿದೆ.
ಢಾಕಾದ ಬೈಲಿ ರಸ್ತೆಯಲ್ಲಿರುವ ಬಿರಿಯಾನಿ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ಇತರ ಮಹಡಿಗಳಿಗೂ ವ್ಯಾಪಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 42 ಮಂದಿ ಸೇರಿದಂತೆ 75 ಮಂದಿಯನ್ನು 7 ಅಂತಸ್ತಿನ ಕಟ್ಟಡದಿಂದ ಹೊರ ತೆಗೆಯಲಾಗಿದ್ದು, ಕೆಲವ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ರೆಸ್ಟೋರೆಂಟ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅವಘಟ ಸಂಭವಿಸಿದೆ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ಮೆಟ್ಟಿಲುಗಳ ಮೇಲೆ ಹೊಗೆ ಬರುತ್ತಿತ್ತು. ಸಾಕಷ್ಟು ಜನರು ಮೇಲೆ ಓಡಿ ಹೋಗಿದ್ದಾರೆ, ಕೆಲವರು ಕಟ್ಟಡಿಂದ ಇಳಿಯಲು ನೀರಿನ ಪೈಪ್ ಗಳನ್ನು ಬಳಸಿದರೆ, ಮತ್ತಷ್ಟು ಜನ ಮಹಡಿಯಿಂದ ಕೆಳಗೆ ಜಿಗಿದು ಗಾಯಗೊಂಡಿದ್ದರು ಎಂದು ರೆಸ್ಟೋರೆಂಟ್ ಮ್ಯಾನೇಜರ್ ತಿಳಿಸಿದ್ದಾರೆ.