ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಪಂದ್ಯಕ್ಕೆ ಇಲ್ಲಿ ಬಾಂಗ್ಲಾ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.
ಬಾಂಗ್ಲಾದೇಶ ತಂಡವನ್ನು ಮುನ್ನಡೆಸುತ್ತಿರುವ ಲಿಟನ್ ದಾಸ್ ಐವರು ಬ್ಯಾಟರ್‌ಗಳು ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಇನ್ನು ಭಾರತ ತಂಡದ ಪರ ಯುವ ವೇಗಿ ಕುಲ್ದೀಪ್ ಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಭಾರತ ತಂಡವು ನಾಲ್ಕು ಆಲ್ರೌಂಡರ್‌ಗಳೊಂದಿಗೆ ಕಣಕ್ಕಿಳಿದಿದೆ.

ಕಳೆದ ತಿಂಗಳಷ್ಟೇ ಮುಕ್ತಾಯವಾದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ವಿಶ್ರಾಂತಿಗೆ ಜಾರಿದ್ದರು. ಹೀಗಾಗಿ ನ್ಯೂಜಿಲೆಂಡ್ ಎದುರಿನ ಸರಣಿಯಿಂದ ಈ ಆಟಗಾರರು ಹೊರಗುಳಿದಿದ್ದರು. ಇದೀಗ ಈ ಎಲ್ಲಾ ಆಟಗಾರರು ಭಾರತ ತಂಡ ಕೂಡಿಕೊಂಡಿದ್ದು, ಬಾಂಗ್ಲಾದೇಶ ಎದುರಿನ ಸರಣಿಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.
